– ಭ್ರಷ್ಟ ಅಧಿಕಾರಿಗಳಿಗೆ ಲೋಕಾಯುಕ್ತ ಶಾಕ್
– ರಾಮನಗರದ ಹಲವೆಡೆ ದಾಳಿ, ಕಂತೆ ಕಂತೆ ಹಣ ಸೀಜ್
ರಾಮನಗರ: ಇಲ್ಲಿನ ಭ್ರಷ್ಟ ಅಧಿಕಾರಿಗಳಿಗೆ ಲೋಕಾಯುಕ್ತ ಶಾಕ್ ನೀಡಿದ್ದು, KRIDLನ ಎಇಇ ಸೈಯದ್ ಮುನೀರ್ ಅಹಮದ್ ಮನೆ ಮೇಲೆ ದಾಳಿ (Lokayukta Raid) ಮಾಡಿ ಪರಿಶೀಲನೆ ನಡೆಸಿದ್ದಾರೆ.
Advertisement
ರಾಮನಗರದ KRIDL ಕಚೇರಿಯಲ್ಲೂ ಪರಿಶೀಲನೆ ನಡೆಸಿದ ಲೋಕಾಯುಕ್ತ ಅಧಿಕಾರಿಗಳ ತಂಡ, ಸುಮಾರು 2 ಗಂಟೆಗಳ ಕಾಲ ಶೋಧ ನಡೆಸಿ ಹಲವು ದಾಖಲೆಗಳನ್ನ ವಶಕ್ಕೆ ಪಡೆದುಕೊಂಡಿದೆ. ಲೋಕಾಯುಕ್ತ ಪೊಲೀಸ್ ಇನ್ಪೆಕ್ಟರ್ ಮಂಜು ನೇತೃತ್ವದಲ್ಲಿ ದಾಳಿ ಮಾಡಿ ಪರಿಶೀಲನೆ ನಡೆಸಿದ ಅಧಿಕಾರಿಗಳು ಕಡತಗಳನ್ನ ಕೊಂಡೊಯ್ದಿದ್ದಾರೆ. ಇದನ್ನೂ ಓದಿ: ಬೆಳ್ಳಂಬೆಳಗ್ಗೆ ಸರ್ಕಾರಿ ಅಧಿಕಾರಿಗಳಿಗೆ ಲೋಕಾಯುಕ್ತ ಶಾಕ್ – ಬೆಂಗ್ಳೂರು, ಮಂಡ್ಯ ಸೇರಿ ರಾಜ್ಯದ 30 ಕಡೆ ದಾಳಿ
Advertisement
Advertisement
ಎಇಇ ಸೈಯದ್ ಮುನೀರ್ ಅಹಮದ್‌ನ ಬೆಂಗಳೂರಿನ ಆರ್.ಟಿ ನಗರದಲ್ಲಿನ ಮನೆ ಮೇಲೂ ದಾಳಿ ಮಾಡಿರುವ ಲೋಕಾಯುಕ್ತ ಪೊಲೀಸರು ಶೋಧ ಕಾರ್ಯ ಮುಂದುರಿಸಿದ್ದಾರೆ. ಇನ್ನೂ ಆನೆಕಲ್‌ನ ನಗರ ಯೋಜನೆ ಜಂಟಿ ನಿರ್ದೇಶಕ ಮಂಜೇಶ್ ಮನೆ ಮೇಲೂ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಮಂಜೇಶ್‌ಗೆ ಸೇರಿರುವ ಕನಕಪುರ ತಾಲೂಕಿನ ಸಾಸಲುಪುರ ಗ್ರಾಮದ ಫಾರ್ಮ್ ಹೌಸ್‌ಗೂ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಇದನ್ನೂ ಓದಿ: ಗೋವಾದಲ್ಲಿ ಹೆತ್ತ ಮಗುವನ್ನೇ ಹತ್ಯೆಗೈದ ಬೆಂಗ್ಳೂರಿನ CEO – ಸೂಟ್‌ಕೇಸ್‌ನಲ್ಲಿ ಶವವಿಟ್ಕೊಂಡು ಹೋಗುವಾಗ ಅರೆಸ್ಟ್
Advertisement
ಗ್ರಾಪಂ ಸದಸ್ಯನ ಮನೆಯಲ್ಲಿ ಫಾರಿನ್ ಬ್ರ್ಯಾಂಡ್ ಎಣ್ಣೆ ಪತ್ತೆ:
ಅಕ್ರಮ ಆಸ್ತಿಗಳಿಕೆ ಆರೋಪ ಕೇಳಿಬಂದ ಹಿನ್ನೆಲೆಯಲ್ಲಿ ಬೆಂಗಳೂರು ದಕ್ಷಿಣ ತಾಲೂಕಿನ ಚನ್ನೇನಹಳ್ಳಿ ಗ್ರಾಮ ಪಂಚಾಯಿತಿ ಸದಸ್ಯ ಸಿ.ಹೆಚ್ ಸುರೇಶ್ ಮನೆ ಮೇಲೆ ದಾಳಿ ನಡೆಸಲಾಗಿದೆ. ರಾಮನಗರ ಲೋಕಾಯುಕ್ತ ಡಿವೈಎಸ್ಪಿ ಗೌತಮ್ ನೇತೃತ್ವದಲ್ಲಿ ಸೀಗೆಹಳ್ಳಿ ಮನೆ ಮೇಲೆ ದಾಳಿ ನಡೆಸಲಾಗಿದೆ. ಈ ಸಂದರ್ಭದಲ್ಲಿ 500 ರೂ.ಗಳ ಕಂತೆ ನೋಟುಗಳು ಹಾಗೂ ವಿದೇಶಿ ಬ್ರ್ಯಾಂಡ್ ಮದ್ಯ ಪತ್ತೆಯಾಗಿದೆ.