ಬೆಂಗಳೂರು: ಬುಧವಾರ ಬೆಳಂಬೆಳಗ್ಗೆ ಲೋಕಾಯುಕ್ತ ಪೊಲೀಸರು 8 ಅಧಿಕಾರಿಗಳ ವಿರುದ್ಧ ಬೆಂಗಳೂರು ಸೇರಿ ವಿವಿಧೆಡೆ ದಾಳಿ ನಡೆಸಿ ಪರಿಶೀಲನೆ ನಡೆಸುತ್ತಿದ್ದಾರೆ.
ಅಧಿಕಾರಿಗಳ ಕಚೇರಿ, ನಿವಾಸಗಳ ಮೇಲೆ ದಾಳಿ ನಡೆದಿದೆ. ಕೆಲ ಅಧಿಕಾರಿಗಳ ನಿವಾಸ, ಕಚೇರಿ ಹಾಗೂ ತೋಟದ ಮನೆಗಳ ಮೇಲೂ ಅಧಿಕಾರಿಗಳು ಏಕಕಾಲದಲ್ಲಿ ದಾಳಿ ಮಾಡಿ ದಾಖಲೆಗಳನ್ನು ಪರಿಶೀಲನೆ ನಡೆಸುತ್ತಿದ್ದಾರೆ. ಇದನ್ನೂ ಓದಿ: ಕರ್ನಾಟಕದ ಅಯ್ಯಪ್ಪ ಭಕ್ತರೇ ಗಮನಿಸಿ.. ಶಬರಿಮಲೆ ದರ್ಶನಕ್ಕೆ ಸ್ಪಾಟ್ ಬುಕಿಂಗ್ ದಿನಕ್ಕೆ 5,000 ಜನರಿಗೆ ಮಾತ್ರ
Advertisement
Advertisement
ಯಾರ ಮನೆ ಮೇಲೆ ದಾಳಿ
1. ಬೆಂಗಳೂರು – ಸಾರಿಗೆ ಇಲಾಖೆ ಜಂಟಿ ನಿರ್ದೇಶಕಿ ಶೋಭಾ
2 ಚಿಕ್ಕಮಗಳೂರು – ಕಡೂರಿನ ಆಡಳಿತ ವೈದ್ಯಾಧಿಕಾರಿ ಡಾ.ಉಮೇಶ್
3. ಬೀದರ್ – ಸಣ್ಣ ನೀರಾವರಿ ಇಲಾಖೆ ಎಂಜಿನಿಯರ್ ರವೀಂದ್ರ,
4. ಬೆಳಗಾವಿ – ಖಾನಾಪುರದ ತಹಶೀಲ್ದಾರ್ ಪ್ರಕಾಶ್ ಶ್ರೀಧರ್
5. ತುಮಕೂರು – ನಿವೃತ್ತ ಆರ್ಟಿಒ ಅಧಿಕಾರಿ ಎಸ್.ರಾಜು
6. ಬಳ್ಳಾರಿ – ದುಳಿದ ವರ್ಗಗಳ ಇಲಾಖೆಯ ಕಲ್ಯಾಣಾಧಿಕಾರಿ ಲೋಕೇಶ್
7. ರಾಯಚೂರು – ಬೆಸ್ಕಾಂ ಜೆಇ ಹುಲಿರಾಜ್
8. ಗದಗ-ಬೆಟಗೇರಿ ನಗರಸಭೆ ಎಂಜಿನಿಯರ್ಹುಚ್ಚೇಶ್ ಬಂಡಿವಡ್ಡರ್
Advertisement