ಬೆಂಗಳೂರು: ಕೇಂದ್ರ ಗೃಹ ಸಚಿವ ಅಮಿತ್ ಶಾ (Amit Shah) ಅವರ ಅಧ್ಯಕ್ಷತೆಯಲ್ಲಿ ಮಹಾರಾಷ್ಟ್ರ (Maharashtra) ಮುಖ್ಯಮಂತ್ರಿಗಳೊಂದಿಗೆ ಡಿಸೆಂಬರ್ 14 ಅಥವಾ 15ರಂದು ಸಭೆ ನಡೆಯಲಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ( Basavaraj Bommai) ತಿಳಿಸಿದರು.
ವಿಧಾನಸೌಧದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಸೋಮವಾರದಂದು ಸಂಸದರ ನಿಯೋಗ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ಭೇಟಿಯಾಗಲಿದೆ. ನಾನೂ ಕೂಡ ಅಮಿತ್ ಶಾ ಅವರೊಂದಿಗೆ ಮಾತನಾಡಿದ್ದೇನೆ. ಅವರು ಹೇಳಿ ಕಳಿಸಿದಾಗ ಬರಬೇಕಾಗುವುದು ಎಂದು ಹೇಳಿದ್ದಾರೆ ಎಂದರು.
Advertisement
Advertisement
ಕರ್ನಾಟಕದ (Karnataka) ವಿಚಾರ, ನಿಲುವು, ವಾಸ್ತವಾಂಶವನ್ನು ಈಗಾಗಲೇ ತಿಳಿಸಲಾಗಿದೆ. ಹಲವಾರು ವಿವರಗಳನ್ನು ಸಹ ನೀಡಲಾಗಿದೆ. ಭೇಟಿಯಾದ ಸಂದರ್ಭದಲ್ಲಿ ಕರ್ನಾಟಕದ ನಿಲುವನ್ನು ಅವರಿಗೆ ಸ್ಪಷ್ಟಪಡಿಸಲಾಗುವುದು ಎಂದರು. ಇದನ್ನೂ ಓದಿ: ಎಸ್. ನಿಜಲಿಂಗಪ್ಪ ಜನಪರ ಆಡಳಿತಕ್ಕೆ ನಾಂದಿ ಹಾಡಿದವರು: ಬೊಮ್ಮಾಯಿ
Advertisement
Advertisement
ಸರ್ವ ಪಕ್ಷದ ಸಭೆ: ಸರ್ವ ಪಕ್ಷದ ಸಭೆ ಬಗ್ಗೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ (Siddaramaiah) ಹಾಗೂ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ (HD Kumaraswamy) ಅವರೊಂದಿಗೆ ಮಾತನಾಡಲಾಗಿದೆ. ಸಭೆ ನಿಗದಿಯಾದ ಕೂಡಲೇ ತಿಳಿಸಲಾಗುವುದು ಎಂದು ತಿಳಿಸಿದರು. ಇದನ್ನೂ ಓದಿ: ಸಿಎಂ, ತಜ್ಞರ ಜೊತೆಗೆ ಚರ್ಚಿಸಿದ ಬಳಿಕವಷ್ಟೆ ಸಲಾಂ ಆರತಿ ಹೆಸರು ಬದಲಾವಣೆ: ಶಶಿಕಲಾ ಜೊಲ್ಲೆ