ನವದೆಹಲಿ: ಕರ್ನಾಟಕ-ಮಹಾರಾಷ್ಟ್ರ ಗಡಿಯಲ್ಲಿ(Karnataka-Maharashtra Border Row) ನೆಲೆಸಿರುವ ಉದ್ವಿಗ್ನತೆ ಶಮನಕ್ಕಾಗಿ ಕೇಂದ್ರ ಗೃಹ ಸಚಿವ ಅಮಿತ್ ಶಾ(Amit Shah) ಪ್ರಯತ್ನ ಮಾಡಿದ್ದಾರೆ.
ಬುಧವಾರ ಸಂಜೆ ಏಳು ಗಂಟೆಗೆ ಸಂಸತ್ ಭವನದ ಲೈಬ್ರರಿ ಭವನದಲ್ಲಿ ಕರ್ನಾಟಕ ಸಿಎಂ ಬಸವರಾಜ ಬೊಮ್ಮಾಯಿ(Basavaraj Bommai), ಮಹಾರಾಷ್ಟ್ರ ಸಿಎಂ ಏಕನಾಥ್ ಶಿಂಧೆ(Eknath shinde) ಜೊತೆ ಅಮಿತ್ ಶಾ ಮಹತ್ವದ ಸಭೆ ನಡೆಸಿದ್ದಾರೆ.
Advertisement
ಗಡಿ ವಿಚಾರದಲ್ಲಿ ಸುಪ್ರೀಂಕೋರ್ಟ್(Supreme Court) ಆದೇಶವರೆಗೂ ಯಾವುದೇ ನಿರ್ಧಾರ ತೆಗೆದುಕೊಳ್ಳಲು ಸಾಧ್ಯವಿಲ್ಲ. ಹೀಗಾಗಿ ಗಡಿ ವಿಚಾರವನ್ನು ಎರಡು ರಾಜ್ಯಗಳು ರಾಜಕೀಯ ಚರ್ಚಾ ವಿಷಯವನ್ನಾಗಿ ಮಾಡಬಾರದು. ಈ ಸಮಸ್ಯೆ ಬಗೆಹರಿಸಲು ಶೀಘ್ರವೇ 6 ಮಂದಿ ಕೇಂದ್ರ ಸಚಿವರು ಇರುವ ತಟಸ್ಥ ಸಮಿತಿ ರಚಿಸಲಾಗುವುದು. ಅಲ್ಲಿಯವರೆಗೂ ನೀವು ಸುಮ್ಮನಿರಿ ಎಂದು ಇಬ್ಬರು ಸಿಎಂಗಳಿಗೆ ಅಮಿತ್ ಶಾ ಸೂಚನೆ ನೀಡಿದ್ದಾರೆ. ಇದನ್ನೂ ಓದಿ: ಹೈಕಮಾಂಡ್ ಕ್ಲಾಸ್ – ಕೊಪ್ಪಳ ಕಾರ್ಯಕ್ರಮಕ್ಕೆ ಬಿಜೆಪಿಯಿಂದ ಬಿಸ್‌ವೈಗೆ ಆಹ್ವಾನ
Advertisement
Addressing the media after the meeting on the Maharashtra-Karnataka border issue. Watch live! https://t.co/p9jN0m9ajB
— Amit Shah (@AmitShah) December 14, 2022
Advertisement
ರಾಜಕೀಯ ಭಿನ್ನಾಭಿಪ್ರಾಯ ಏನೇ ಇರಲಿ. ಗಡಿಯಲ್ಲಿ ಶಾಂತಿಯನ್ನು ಸ್ಥಾಪಿಸಬೇಕಿದೆ. ನೀವೆಲ್ಲರೂ ಇದಕ್ಕೆ ಸಹಕರಿಸ್ತೀರಿ ಎಂಬ ವಿಶ್ವಾಸ ನನಗಿದೆ ಎಂದು ಅಮಿತ್ ಶಾ ಹೇಳಿದ್ದಾರೆ.
Advertisement
ಸಭೆಯ ಬಳಿಕ ಬೊಮ್ಮಾಯಿ ಮಾತನಾಡಿ, ಜನವರಿಯಲ್ಲಿ ಕೋರ್ಟ್‌ನಲ್ಲಿ ವಿಚಾರಣೆಗೆ ಬರಲಿದೆ. ಸಣ್ಣ ಪುಟ್ಟ ವಿಚಾರಗಳ ಸಮಸ್ಯೆಗಳಿದ್ದರೆ ತಟಸ್ಥ ಸಮಿತಿಯಲ್ಲಿ ಚರ್ಚಿಸಿ ಸರಿ ಮಾಡಲು ಸೂಚಿಸಿದ್ದಾರೆ. ಎಲ್ಲಾ ರಾಜಕೀಯ ಪಕ್ಷಗಳಿಗೂ ಅವರು ಮನವಿ ಮಾಡಿದ್ದಾರೆ. ರಾಜಕೀಯ ಹೊರತಾಗಿ ಒಂದಾಗಿ ಇರುವ ಬಗ್ಗೆ ಹೇಳಿದ್ದಾರೆ. ಗಡಿಯಲ್ಲಿನ ಗಲಭೆ, ಪ್ರತಿಭಟನೆಗಳ ಬಗ್ಗೆ ನಿಗಾ ವಹಿಸಲು ಆಯಾ ರಾಜ್ಯದಲ್ಲಿ ಓರ್ವ ಐಪಿಎಸ್ ಅಧಿಕಾರಿಯನ್ನು ನೇಮಿಸಲು ಹೇಳಿದ್ದಾರೆ ಎಂದು ತಿಳಿಸಿದರು.