ಬೆಂಗಳೂರು: ಮಾಧ್ಯಮ ಕ್ಷೇತ್ರದಲ್ಲಿ ವಿಶೇಷ ಸಾಧನೆ ಪರಿಗಣಿಸಿ ಕರ್ನಾಟಕ ಮಾಧ್ಯಮ ಅಕಾಡೆಮಿ (Karnataka Media Academy) ಪ್ರಶಸ್ತಿ ಪ್ರಕಟವಾಗಿದೆ. ಪಬ್ಲಿಕ್ ಟಿವಿಯ ಐವರು ಪ್ರಶಸ್ತಿಗೆ ಭಾಜನರಾಗಿದ್ದಾರೆ.
ಪಬ್ಲಿಕ್ ಟಿವಿ ಸಂಪಾದಕರಾದ ಸಿ.ದಿವಾಕರ್, ಕಾರ್ಯನಿರ್ವಾಹಕ ಸಂಪಾದಕರಾದ ವಿ.ಆನಂದ್, ಮೈಸೂರು ಜಿಲ್ಲಾ ವರದಿಗಾರ ಕೆ.ಪಿ.ನಾಗರಾಜ್, ಬೆಳಗಾವಿ ಜಿಲ್ಲಾ ವರದಿಗಾರ ದಿಲೀಪ್ ಕುರಂದವಾಡೆ ಅವರು ಮಾಧ್ಯಮ ಅಕಾಡೆಮಿ ವಾರ್ಷಿಕ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ. ಇದನ್ನೂ ಓದಿ: ಆದಿಯೋಗಿ ಪ್ರತಿಮೆ ವಿವಾದ – ಪಿಐಎಲ್ ವಜಾ, ಇಶಾ ಫೌಂಡೇಷನ್‌ಗೆ ಬಿಗ್ ರಿಲೀಫ್
ಅತ್ಯುತ್ತಮ ಸಿನಿಮಾ ಪತ್ರಕರ್ತರಿಗೆ ನೀಡುವ ʼಅರಗಿಣಿ ಪ್ರಶಸ್ತಿʼಗೆ ಪಬ್ಲಿಕ್ ಟಿವಿಯ ಡಿಜಿಟಲ್ ಸಿನಿಮಾ ವಿಭಾಗದ ಶರಣು ಹುಲ್ಲೂರು ಅವರು ಭಾಜನರಾಗಿದ್ದಾರೆ.
ಕರ್ನಾಟಕ ಮಾಧ್ಯಮ ಅಕಾಡೆಮಿ ಅಧ್ಯಕ್ಷ ಸದಾಶಿವ ಶೆಣೈ ಕೆ. ಅವರ ಅಧ್ಯಕ್ಷತೆಯಲ್ಲಿ ಜರುಗಿದ ಸರ್ವ ಸದಸ್ಯರ ಸಭೆಯಲ್ಲಿ ಪ್ರಶಸ್ತಿ ಪುರಸ್ಕೃತರ ಪಟ್ಟಿ ಪ್ರಕಟಿಸಲಾಗಿದೆ. ಇದನ್ನೂ ಓದಿ: ಬೆಂಗಳೂರಿನಲ್ಲಿ 5 ಹೊಸ ಟ್ರಾಫಿಕ್ ಪೊಲೀಸ್ ಠಾಣೆ: ಬೊಮ್ಮಾಯಿ
ನಾಲ್ಕು ವರ್ಷಗಳ ಸಾಲಿನ (2019, 2020, 2021, 2022ನೇ ಸಾಲು) ನಾಡಿನ ವಿವಿಧ ಪತ್ರಕರ್ತರನ್ನು ʼಮಾಧ್ಯಮ ವಾರ್ಷಿಕ ಪ್ರಶಸ್ತಿʼ ಮತ್ತು ʼದತ್ತಿ ಪ್ರಶಸ್ತಿʼಗೆ ಆಯ್ಕೆ ಮಾಡಲಾಗಿದೆ.
ಜೀವಮಾನ ಸಾಧನೆ ವಿಶೇಷ ಪ್ರಶಸ್ತಿಗೆ 50,000 ರೂ. ನಗದು, ವಾರ್ಷಿಕ ಪ್ರಶಸ್ತಿ ಪುರಸ್ಕೃತರಿಗೆ ತಲಾ 25,000 ರೂ. ನಗದು ಹಾಗೂ ಪ್ರಶಸ್ತಿ ಫಲಕ ನೀಡಿ ಸನ್ಮಾನಿಸಲಾಗುವುದು. ನಾಲ್ಕು ವರ್ಷಗಳು ಸೇರಿ 124 ಮಂದಿ ಪತ್ರಕರ್ತರನ್ನು ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ. ಹಾಗೆಯೇ ಒಟ್ಟು 21 ಮಂದಿ ಪತ್ರಕರ್ತರು ʼದತ್ತಿ ಪ್ರಶಸ್ತಿʼಗೆ ಆಯ್ಕೆಯಾಗಿದ್ದಾರೆ.
ನಾಲ್ಕು ವರ್ಷಗಳ ದತ್ತಿ ಪ್ರಶಸ್ತಿಗಳು: ಆಂದೋಲನ ಸಂಸ್ಥೆಯವರು ಸ್ಥಾಪನೆ ಮಾಡಿರುವ ಅತ್ಯುತ್ತಮ ಜಿಲ್ಲಾ ಪತ್ರಿಕೆಗೆ ನೀಡುವ ʼಆಂದೋಲನ ಪ್ರಶಸ್ತಿʼ, ಅಭಿಮಾನಿ ಸಂಸ್ಥೆಯವರು ಸ್ಥಾಪನೆ ಮಾಡಿರುವ ʼಅಭಿಮಾನಿʼ ಮತ್ತು ʼಅರಗಿಣಿʼ ಪ್ರಶಸ್ತಿಗಳು, ಮೈಸೂರು ದಿಗಂತ ಪತ್ರಿಕೆ ಸ್ಥಾಪಿಸಿರುವ ʼಮೈಸೂರು ದಿಗಂತʼ ಪ್ರಶಸ್ತಿ ಹಾಗೂ ಪತ್ರಕರ್ತ ಕೆ.ಶಿವಕುಮಾರ್ ಸ್ಥಾಪಿಸಿರುವ ಡಾ.ಬಿ.ಆರ್.ಅಂಬೇಡ್ಕರ್ ʼಮೂಕನಾಯಕ ಪ್ರಶಸ್ತಿʼಗೂ ಆಯ್ಕೆ ಮಾಡಲಾಗಿದೆ. ಈ ಪ್ರಶಸ್ತಿಗಳ ಮೊತ್ತ ತಲಾ 10,000 ರೂ. ನಗದು ಬಹುಮಾನ ಒಳಗೊಂಡಿದೆ.
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹಾಗೂ ಇತರೆ ಸಚಿವರು ಪ್ರಶಸ್ತಿ ಪುರಸ್ಕೃತರಿಗೆ ಸಮಾರಂಭದಲ್ಲಿ ಪ್ರದಾನ ಮಾಡಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.
Live Tv
[brid partner=56869869 player=32851 video=960834 autoplay=true]
Join our Whatsapp group by clicking the below link
https://chat.whatsapp.com/E6YVEDajTzH06LOh77r25k