ಬೆಂಗಳೂರು: ಕರ್ನಾಟಕ ಮಾಧ್ಯಮ ಅಕಾಡೆಮಿಯ 2021-22ನೇ ಸಾಲಿನ ಮಹಿಳಾ ಉದ್ದೇಶಿತ ಆಯವ್ಯಯ ಯೋಜನೆಯಡಿಯಲ್ಲಿ, ಪತ್ರಿಕೋದ್ಯಮ ಸ್ನಾತಕೋತ್ತರ ಪದವಿ ಪಡೆದಿರುವ ಮಹಿಳಾ ಅಭ್ಯರ್ಥಿಗಳಿಗೆ ಎರಡು ತಿಂಗಳ ವೃತ್ತಿ ತರಬೇತಿಯನ್ನು ಹಮ್ಮಿಕೊಳ್ಳಲಾಗಿದೆ.
ಮಹಿಳಾ ಉದ್ದೇಶಿತ ಆಯವ್ಯಯ ಯೋಜನೆಯಡಿಯಲ್ಲಿ 15 ಮಂದಿ ಮಹಿಳಾ ಅಭ್ಯರ್ಥಿಗಳನ್ನು ಗರಿಷ್ಠ ಅಂಕಗಳ ಆಧಾರದ ಮೇಲೆ ಹಾಗೂ ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು. ಆಯ್ಕೆಯಾದ ಅಭ್ಯರ್ಥಿಗಳಿಗೆ ಪತ್ರಿಕಾಲಯಗಳಲ್ಲಿ ತರಬೇತಿ ನೀಡಿ ತಿಂಗಳಿಗೆ ರೂ.15,000/- ಗಳ ಸ್ಟೈಫಂಡ್ ನೀಡಲಾಗುವುದು. ಇದನ್ನೂ ಓದಿ: ಬೆಳಗ್ಗೆ 3-4 ಗಂಟೆಯವರೆಗೆ ನನ್ನ ಮಕ್ಕಳ ಹೋಮ್ ವರ್ಕ್ ಮಾಡಿಸುತ್ತಿದ್ದೆ: ಪ್ರಿಯಾಂಕಾ ಗಾಂಧಿ
Advertisement
Advertisement
ಮಹಿಳಾ ಅಭ್ಯರ್ಥಿಯು ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರಬೇಕು ಹಾಗೂ ಕಂಪ್ಯೂಟರ್ ಜ್ಞಾನ ಹೊಂದಿದ್ದು, ಕನ್ನಡ ಭಾಷೆಯಲ್ಲಿ ಪರಿಣಿತರಾಗಿರಬೇಕು. ಅರ್ಜಿಯೊಂದಿಗೆ ಎಸ್ಎಸ್ಎಲ್ಸಿ ಅಂಕಪಟ್ಟಿ, ಪದವಿ ಹಾಗೂ ಸ್ನಾತಕೋತ್ತರ ಪ್ರಮಾಣ ಪತ್ರಗಳೊಂದಿಗೆ ಪಾಸ್ಪೋರ್ಟ್ ಅಳತೆಯ ಭಾವಚಿತ್ರ ಹಾಗೂ ಇನ್ನಿತರೆ ಪೂರಕ ದಾಖಲೆಗಳನ್ನು(PDF) ಸ್ಕ್ಯಾನ್ ಮಾಡಿ ಇ-ಮೇಲ್ ವಿಳಾಸ [email protected] ಮೂಲಕ ಅಥವಾ ಅಂಚೆ ಮೂಲಕ ಜನವರಿ 29ರ ಒಳಗೆ ತಲುಪುವಂತೆ ಕಳುಹಿಸಬೇಕು. ದಿನಾಂಕ ಮುಗಿದ ಮೇಲೆ ಬಂದ ಅರ್ಜಿಗಳನ್ನು ತಿರಸ್ಕರಿಸಲಾಗುವುದು.
Advertisement
Advertisement
ಈ ಹಿಂದೆ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ಕರ್ನಾಟಕ ಮಾಧ್ಯಮ ಅಕಾಡೆಮಿ ಸೇರಿದಂತೆ ಯಾವುದೇ ಸರ್ಕಾರಿ ಇಲಾಖೆ/ಸಂಸ್ಥೆಗಳಲ್ಲಿ ಫಲಾನುಭವಿಗಳಾಗಿದ್ದರೆ ಅಂತಹವರು ಅರ್ಜಿ ಸಲ್ಲಿಸುವಂತಿಲ್ಲ. ಸರ್ಕಾರದಿಂದ ಈಗಾಗಲೇ ಸೌಲಭ್ಯ ಪಡೆದ ಅಭ್ಯರ್ಥಿಗಳು ಸುಳ್ಳು ಮಾಹಿತಿ ನೀಡಿ ಅರ್ಜಿ ಸಲ್ಲಿಸಿದಲ್ಲಿ ಅವರ ಅರ್ಜಿಯನ್ನು ತಿರಸ್ಕರಿಸಲಾಗುವುದು. ಅಂತಹವರ ವಿರುದ್ಧ ಕ್ರಿಮಿನಲ್ ಕೇಸ್ ಹೂಡಲಾಗುವುದು ಎಂದು ಮಾಧ್ಯಮ ಪ್ರಕಟಣೆಯಲ್ಲಿ ತಿಳಿಸಲಾಗಿದೆ. ಇದನ್ನೂ ಓದಿ: ಅಕ್ರಮವಾಗಿ ಒತ್ತುವರಿಯಾಗಿದ್ದ ಜಾಗ ಶಾಲೆಗೆ ವಾಪಸ್ – ತಹಶೀಲ್ದಾರ್ಗೆ ಗ್ರಾಮಸ್ಥರಿಂದ ಅಭಿನಂದನೆ
ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ: 080-22860164 ಕಾರ್ಯದರ್ಶಿಗಳು, ಕರ್ನಾಟಕ ಮಾಧ್ಯಮ ಅಕಾಡೆಮಿ, ಪೋಡಿಯಂ ಬ್ಲಾಕ್, ವಿಶ್ವೇಶ್ವರಯ್ಯ ಕೇಂದ್ರ, ಡಾ. ಅಂಬೇಡ್ಕರ್ ವೀಧಿ, ಬೆಂಗಳೂರು-560001 ಸಂಪರ್ಕಿಸಬಹುದಾಗಿದೆ.