ಬೆಂಗಳೂರು: ತಿರುಪತಿ ಲಡ್ಡು ಪಾವಿತ್ರ್ಯತೆಗೆ ಧಕ್ಕೆ ವಿವಾದದ (Tirupati Laddu Controversy) ಬೆನ್ನಲ್ಲೇ ತಿರುಪತಿಯಿಂದ ನಂದಿನಿ ತುಪ್ಪಕ್ಕೆ ಬೇಡಿಕೆ ಹೆಚ್ಚಾಗಿದೆ. ಟಿಟಿಡಿ (TTD) ಬೇರೆ ಭಾಗಗಳಿಂದ ತರಿಸುತ್ತಿದ್ದ ತುಪ್ಪವನ್ನು ನಿಲ್ಲಿಸಿ, ಪ್ರತಿ ನಿತ್ಯ ನಂದಿನಿ ತುಪ್ಪವನ್ನೇ ತರಿಸಿಕೊಳ್ಳಲು ಮುಂದಾಗಿದೆ. ನಿತ್ಯ ಒಂದೊಂದು ಟ್ಯಾಂಕರ್ ಆಮದು ಮಾಡಿಕೊಳ್ಳಲು ತಿರುಪತಿ ತಿರುಮಲ ದೇವಸ್ಥಾನ ಮಂಡಳಿ ಮುಂದಾಗಿದೆ.
Advertisement
ಈ ಹಿಂದೆ ವಾರಕ್ಕೆ ಮೂರು ಟ್ಯಾಂಕರ್‌ಗಳನ್ನ ಆಮದು ಮಾಡಿಕೊಳ್ಳಲಾಗುತ್ತಿತ್ತು. ಒಟ್ಟಾರೆ 3 ತಿಂಗಳಿಗೆ 350 ಟನ್ ತುಪ್ಪ ನೀಡುವಂತೆ ಕೆಎಂಎಫ್‌ನೊಂದಿಗೆ ಒಪ್ಪಂದ ಮಾಡಿಕೊಳ್ಳಲಾಗಿತ್ತು. ಹಿಂದೆ ಟಿಟಿಡಿ ಮಾಡಿಕೊಂಡ ಒಪ್ಪಂದ ಇನ್ನೂ ಒಂದೂವರೆ ತಿಂಗಳಲ್ಲಿ ಮುಕ್ತಾಯವಾಗಲಿದೆ. ಹಾಗಾಗಿ ಪ್ರತಿನಿತ್ಯ ಒಂದೊಂದು ಟ್ಯಾಂಕರ್ ತುಪ್ಪ ತರಿಸಿಕೊಳ್ಳಲು 6 ತಿಂಗಳ ಒಪ್ಪಂದ ಮಾಡಿಕೊಳ್ಳುವ ಚಿಂತನೆ ನಡೆದಿದೆ ಎಂದು ಕೆಎಂಎಫ್ ಉನ್ನತ ಮೂಲಗಳು ತಿಳಿಸಿವೆ. ಇದನ್ನೂ ಓದಿ: ಸ್ಪಿನ್ ಮಾಂತ್ರಿಕ ಅಶ್ವಿನ್ ಆಲ್‌ರೌಂಡ್ ಆಟ – ಭಾರತಕ್ಕೆ 280 ರನ್‌ಗಳ ಭರ್ಜರಿ ಜಯ; 1-0 ಸರಣಿ ಮುನ್ನಡೆ
Advertisement
Advertisement
ತಿರುಪತಿ ಲಡ್ಡು ವಿವಾದ ಬಳಿಕ ಕೆಎಂಎಫ್ ಅಲರ್ಟ್:
ತಿರುಪತಿ ಲಡ್ಡು ವಿವಾದದ ಬಳಿಕ ಕೆಎಂಎಫ್ ನಂದಿನಿ ತುಪ್ಪದ ಸುರಕ್ಷತಾ ಕ್ರಮಗಳ ಬಗ್ಗೆ ಮತ್ತಷ್ಟು ಎಚ್ಚರ ವಹಿಸಿದೆ. ತಿರುಪತಿಗೆ ನಂದಿನಿ ತುಪ್ಪ ಸಾಗಿಸುವ ಮಾರ್ಗ ಮಧ್ಯೆ ಯಾವುದೇ ಅಹಿತಕರ ಘಟನೆ ನಡೆಯದಂತೆ ಮುನ್ನೆಚ್ಚರಿಕೆ ವಹಿಸಲು ಎಲ್ಲಾ ವಾಹನಗಳಿಗೆ ಜಿಪಿಎಸ್ (GPS) ಅಳವಡಿಸಲು ಮುಂದಾಗಿದೆ ಎಂದು ತಿಳಿದುಬಂದಿದೆ. ಇದನ್ನೂ ಓದಿ: ತಿರುಪತಿ ಲಡ್ಡಿಗೆ ದನದ ಕೊಬ್ಬು ಬೆರಸುವುದು ಘೋರ ಅಪರಾಧ – ಎಂ.ಬಿ ಪಾಟೀಲ್ ವಿಷಾದ
Advertisement
ಕೆಎಂಎಫ್ ವಾಹನಗಳಿಗೆ ಅಳವಡಿಸುವ ಜಿಪಿಎಸ್ ವಿಶೇಷತೆ?
* ಟಿಟಿಡಿಗೆ ಕೆಎಂಎಫ್‌ನಿಂದ ಸರಕು ಸಾಗಿಸುವ ಎಲ್ಲಾ ವಾಹನಗಳಿಗೆ ಜಿಪಿಎಸ್ ಅಳವಡಿಕೆ.
* ತುಪ್ಪ ಇರುವ ಟ್ಯಾಂಕರ್‌ಗೆ ಜಿಪಿಎಸ್ ಸ್ಕ್ಯಾನರ್ ಲಾಕ್ ಅಳವಡಿಕೆ.
* ಇಲ್ಲಿ ಟ್ಯಾಂಕರ್ ಒಮ್ಮೆ ಲಾಕ್ ಆದ್ರೆ ಟಿಟಿಡಿಯಲ್ಲಿಯೇ ಓಪನ್ ಮಾಡಲು ಅವಕಾಶ.
* ಟಿಟಿಡಿಯಲ್ಲಿ ಓಪನ್ ಮಾಡಬೇಕು ಅಂದ್ರೆ ಪಾಸ್ ವರ್ಡ್ ಕಡ್ಡಾಯ.
* ಟ್ಯಾಂಕರ್ ನಲ್ಲಿರುವ ಕ್ಯೂಆರ್ ಕೋಡ್ ಸ್ಕ್ಯಾನ್ ಮಾಡಿದ ತಕ್ಷಣ ಕೆಎಂಎಫ್ ಅಧಿಕಾರಿಗಳಿಗೆ ಒಟಿಪಿ ರವಾನೆ.
* ಒಟಿಪಿ ನಂಬರ್ ಹೇಳಿದ್ರೆ ಮಾತ್ರ ಓಪನ್ ಆಗಲಿರುವ ತುಪ್ಪದ ಟ್ಯಾಂಕರ್.