Bengaluru CityKarnatakaLatestLeading NewsMain Post

ಹಾಲಿನ ದರ ಲೀ.3 ರೂ. ಏರಿಕೆಗೆ ಕರ್ನಾಟಕ ಹಾಲು ಒಕ್ಕೂಟ ಚಿಂತನೆ?

ಬೆಂಗಳೂರು: ಹಾಲಿನ ದರ ಲೀಟರ್‌ಗೆ 3 ರೂ. ಏರಿಕೆ ಮಾಡಲು ಕರ್ನಾಟಕ ಹಾಲು ಒಕ್ಕೂಟ ಚಿಂತನೆ ಮಾಡಿದೆ ಎಂಬ ಸುದ್ದಿ ಮೂಲಗಳಿಂದ ವರದಿಯಾಗಿದೆ.

ಪ್ರತಿ ಲೀಟರ್‌ಗೆ 3 ರೂ. ಏರಿಸಲು ನಿರ್ಧಾರ ಮಾಡಲಾಗಿದ್ದು, ಸದ್ಯ ಲೀಟರ್‌ಗೆ 37 ರೂ. ಇದ್ದು, ಅದನ್ನು 40 ರೂ.ಗೆ ಏರಿಕೆ ಮಾಡಲು ಚಿಂತನೆ ನಡೆಸಲಾಗಿದೆ. ಸಿಎಂ ಬಸವರಾಜ್ ಬೊಮ್ಮಾಯಿ ಜೊತೆ ಚರ್ಚಿಸಿ ಅಂತಿಮ ನಿರ್ಧಾರ ಕೈಗೊಳ್ಳುವ ಸಾಧ್ಯತೆ ಇದೆ. ಇದನ್ನೂ ಓದಿ: ಪೊಲೀಸರನ್ನು ನೋಡಿ ಮಾಸ್ಕ್ ಹಾಕಬೇಡಿ – ಬೈಕ್ ಸವಾರಗೆ ಮನವಿ ಮಾಡಿದ ಪೇದೆ

ಕರ್ನಾಟಕ ಹಾಲು ಒಕ್ಕೂಟದ ವಾರ್ಷಿಕ ಸಾಮಾನ್ಯ ಸಭೆಯಲ್ಲಿ (2020-21) ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ದರ ಏರಿಕೆ ಬಗ್ಗೆ ಪ್ರಸ್ತಾಪಿಸಿದ್ದರು. ದೇಶದ ಇತರೆ ಜಿಲ್ಲೆಗಳಿಗೆ ಹೋಲಿಸಿದ್ರೆ, ನಂದಿನಿ ಹಾಲಿನ ದರ ರಾಜ್ಯದಲ್ಲಿ ಅತಿ ಕಡಿಮೆ ಇದೆ. ಹಾಗಾಗಿ ಪ್ರತಿ ಲೀಟರ್‌ಗೆ 3 ರೂ. ಏರಿಕೆ ಮಾಡುವಂತೆ ಕೆಎಂಎಫ್ ಅಧ್ಯಕ್ಷರನ್ನು ಜಿಲ್ಲಾ ಹಾಲು ಒಕ್ಕೂಟಗಳ ಅಧ್ಯಕ್ಷರು ಮನವಿ ಮಾಡಿದ್ದರು. ಈ ಹಿನ್ನಲೆ, ಹಾಲಿನ ದರ ಏರಿಕೆ ಮಾಡುವ ಕುರಿತು ಸಿಎಂ ಜೊತೆ ಮುಂದಿನ ವಾರ ಚರ್ಚಿಸಿ, ಶಿಫಾರಸ್ಸು ಮಾಡಲು ಬಾಲಚಂದ್ರ ಜಾರಕಿಹೊಳಿ ಮುಂದಾಗಿದ್ದಾರೆ. ಇದನ್ನೂ ಓದಿ: ಕೋವಿಡ್ ಗೆದ್ದ ಒಂದು ತಿಂಗಳ ಮಗು – ಆಸ್ಪತ್ರೆಯಿಂದ ಡಿಸ್ಚಾರ್ಜ್

ಸಿಎಂ ರಿಂದ ಗ್ರೀನ್ ಸಿಗ್ನಲ್ ಸಿಕ್ಕಿದ್ರೆ, ರೈತರಿಗೆ ಲಾಭಾಂಶದ ಹಣ ಕೂಡ ಸಿಗಲಿದ್ದು, ಮುಂದಿನ ತಿಂಗಳು ಕೆಎಂಎಫ್‍ನ ಶಿಫಾರಸ್ಸನ್ನು ಸಿಎಂ ಬಹುತೇಕ ಒಪ್ಪುವ ಸಾಧ್ಯತೆ ಇದೆ. ಮುಖ್ಯಮಂತ್ರಿಗಳಿಂದ ದರ ಏರಿಕೆಗೆ ಅನುಮತಿ ಸಿಕ್ಕಿದ್ರೆ, ಅಧಿಕೃತ ದರ ಏರಿಕೆಯ ಬಗ್ಗೆ ಘೋಷಣೆ ಹೊರಬೀಳುವ ಸಾಧ್ಯತೆ ಇದೆ.

Leave a Reply

Your email address will not be published. Required fields are marked *

Back to top button