ಗದಗದಲ್ಲಿ ಬಿಜೆಪಿಗೆ ನವಚೈತನ್ಯ ನೀಡಿದ ಜಯ: ಸಚಿವ ಸಿ. ಸಿ.ಪಾಟೀಲ್

Public TV
1 Min Read
cc patil

ಗದಗ: ದಶಕದ ಬಳಿಕ ಗದಗ-ಬೆಟಗೇರಿ ನಗರಸಭೆಯಲ್ಲಿ ಬಿಜೆಪಿಯ ಜಯಭೇರಿಗೆ ಲೋಕೋಪಯೋಗಿ ಸಚಿವ ಸಿ.ಸಿ.ಪಾಟೀಲ್‌ ಹರ್ಷ ವ್ಯಕ್ತಪಡಿಸಿದ್ದಾರೆ. ಜಯಭೇರಿ ಬಾರಿಸಿ ಬಹುಮತದಿಂದ ಅಧಿಕಾರಕ್ಕೆ ಏರುತ್ತಿರುವುದು ಸಂತೋಷದ ಸಂಗತಿಯಾಗಿದೆ. ಪಕ್ಷದ ಎಲ್ಲಾ ವಿಜಯಿ ಅಭ್ಯರ್ಥಿಗಳಿಗೆ ಅಭಿನಂದನೆಗಳನ್ನು ಸಲ್ಲಿಸುವುದಾಗಿ ಹೇಳಿದರು.

BJP Flag Final 6

ಸಿ.ಸಿ.ಪಾಟೀಲ್‌ ಹೇಳಿದ್ದೇನು..?:‌ ದಶಕದ ಬಳಿಕ ಗದಗ-ಬೆಟಗೇರಿ ನಗರಸಭೆಯಲ್ಲಿ ಬಿಜೆಪಿಯು ಜಯಭೇರಿ ಬಾರಿಸಿ ಬಹುಮತದಿಂದ ಅಧಿಕಾರಕ್ಕೆ ಏರುತ್ತಿರುವುದು ಸಂತೋಷದ ಸಂಗತಿಯಾಗಿದೆ. ಈ ಬಗ್ಗೆ ನಮ್ಮ ಪಕ್ಷದ ಎಲ್ಲಾ ವಿಜಯಿ ಅಭ್ಯರ್ಥಿಗಳಿಗೆ ನನ್ನ ಹಾರ್ದಿಕ ಅಭಿನಂದನೆಗಳು. ಇದನ್ನೂ ಓದಿ: ನಾಳೆ ಬಂದ್ ಇಲ್ಲ – ವ್ಯಾಪಾರ, ವ್ಯವಹಾರ ನಡೆಸಬಹುದು: ಬೊಮ್ಮಾಯಿ

CC Patil 1

ಒಗ್ಗಟ್ಟಿನಲ್ಲಿ ಬಲವಿದೆ ಎಂಬುದಕ್ಕೆ ಗದಗ-ಬೆಟಗೇರಿ ಚುನಾವಣಾ ಫಲಿತಾಂಶವೇ ಸಾಕ್ಷಿಯಾಗಿದೆ. ಈ ಅಭೂತಪೂರ್ವ ವಿಜಯಕ್ಕೆ ಕಾರಣೀಕರ್ತರಾದ ಮತದಾರ ಪ್ರಭುಗಳಿಗೆ, ಬಿಜೆಪಿಯ ಗದಗ್ ಜಿಲ್ಲೆಯ ಶಾಸಕರಿಗೆ, ವಿಧಾನಪರಿಷತ್ ಸದಸ್ಯರಿಗೆ, ಸಂಸದರಿಗೆ, ಪಕ್ಷದ ಅಧ್ಯಕ್ಷರು ಮತ್ತು ಎಲ್ಲಾ ಪದಾಧಿಕಾರಿಗಳಿಗೆ, ಹಿತೈಷಿಗಳಿಗೆ, ಪಕ್ಷದ ಸರ್ವ ನಾಯಕರಿಗೆ ನನ್ನ ಹೃದಯಪೂರ್ವಕ ವಂದನೆಗಳು. ಇದನ್ನೂ ಓದಿ: ನಾಳೆಯ ಕರ್ನಾಟಕ ಬಂದ್ ವಾಪಸ್

BJP Flage

ಈ ಜಯವು ನಮ್ಮ ಜಿಲ್ಲೆಯಲ್ಲಿ ಬಿಜೆಪಿಗೆ ಮತ್ತಷ್ಟು ಹೊಸ ಚೈತನ್ಯ ಮೂಡಿಸಲಿದೆ ಮತ್ತು ಬಿಜೆಪಿಯು ತಳಮಟ್ಟದಿಂದ ಕೇಂದ್ರದವರೆಗೆ ಎಷ್ಟೊಂದು ಸುಭದ್ರವಾಗಿದೆ ಎಂಬುದಕ್ಕೆ ಇದು ನಿದರ್ಶನವಾಗಿದೆ. ನಮ್ಮ ನೂತನ ಜನಪ್ರತಿನಿಧಿಗಳು ಸ್ಥಳೀಯ ಸಮಸ್ಯೆಗಳನ್ನು ಪರಿಹರಿಸಿ, ಜನಪರವಾಗಿ ಸ್ಪಂದಿಸುತ್ತಾ ಬಿಜೆಪಿಯ ವರ್ಚಸ್ಸನ್ನು ಎತ್ತಿಹಿಡಿಯುತ್ತಾರೆ ಎಂಬ ವಿಶ್ವಾಸ ನನಗಿದೆ. ಈ ನಿಟ್ಟಿನಲ್ಲಿ ಅವರು ಸಂಪೂರ್ಣವಾಗಿ ಯಶಸ್ವಿಯಾಗಲಿ ಎಂದು ನಾನು ಮತ್ತೊಮ್ಮೆ ಹಾರೈಸುತ್ತೇನೆ ಎಂದು ಅವರು ಹೇಳಿದ್ದಾರೆ.

Share This Article
Leave a Comment

Leave a Reply

Your email address will not be published. Required fields are marked *