ಬೆಳಗಾವಿ: ಸೆಲ್ಫಿ ಕ್ಲಿಕ್ಕಿಸಲು ಬಂದಿದ್ದ ವಿದ್ಯಾರ್ಥಿಯೊಬ್ಬನಿಗೆ ಇಂಧನ ಸಚಿವ ಡಿಕೆ ಶಿವಕುಮಾರ್ ಏಟು ಕೊಟ್ಟಿರುವ ಘಟನೆ ನಗರದಲ್ಲಿ ನಡೆದಿದೆ.
ನಗರದ ಶೇಖ್ ಹೋಮಿಯೋಪತಿ ಕಾಲೇಜಿನಲ್ಲಿ ಅಂತಾರಾಷ್ಟ್ರೀಯ ಮಕ್ಕಳ ಹಕ್ಕು ದಿನಾಚರಣೆ ಕಾರ್ಯಕ್ರಮ ಆಯೋಜನೆಗೊಂಡಿತ್ತು. ಈ ಕಾರ್ಯಕ್ರಮಕ್ಕೆ ಆಗಮಿಸಿದ ವೇಳೆ ಡಿಕೆ ಶಿವಕುಮಾರ್ ಅವರು ಮಾಧ್ಯಮಗಳ ಜೊತೆ ಮಾತನಾಡುತ್ತಿದ್ದರು.
Advertisement
ಈ ವೇಳೆ ವಿದ್ಯಾರ್ಥಿಯೊಬ್ಬ ಹಿಂದಿನಿಂದ ಸೆಲ್ಫಿ ಕ್ಲಿಕ್ಕಿಸಲು ಮುಂದಾಗಿದ್ದಾನೆ. ಇದನ್ನು ನೋಡಿದ ಡಿಕೆ ಶಿವಕುಮಾರ್ ಸಿಟ್ಟಾಗಿ ಆತನ ಕೈಗೆ ಹೊಡೆದಿದ್ದಾರೆ. ಕೂಡಲೇ ವಿದ್ಯಾರ್ಥಿ ಆ ಸ್ಥಳದಿಂದ ಓಡಿ ಹೋಗಿದ್ದಾನೆ.
Advertisement
https://youtu.be/uJyAgNhH1MQ