ಬೆಂಗಳೂರು: ಕಂದಾಯ ಸಚಿವ ಆರ್. ಅಶೋಕ್‍ಗೆ ಕೊರೊನಾ ಸೋಂಕು ದೃಢಪಟ್ಟಿದೆ.
ಅಶೋಕ್ ಅವರಿಗೆ ಕೊರೊನಾ ಸೋಂಕು ತಗಲಿರುವ ಹಿನ್ನೆಲೆ ನಗರದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಅಲ್ಲದೇ ಗುರುವಾರ ಇದ್ದ ಬಿಜೆಪಿ ಕ್ಯಾಬಿನೆಟ್ ಸಭೆಗೂ ಸಹ ಅಶೋಕ್ ಅವರು ಗೈರಾಗಿದ್ದರು.
Advertisement
Advertisement
ಎರಡು ದಿನದ ಹಿಂದೆ ಅಂದರೆ ಜನವರಿ 5 ರಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹಾಗೂ ಇತರೆ ಸಚಿವರೊಂದಿಗೆ ಕಚೇರಿಯಲ್ಲಿ ಕೊರೊನಾ ಜಾಗೃತಿ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು. ಜನ ಸಾಮಾನ್ಯರಿಗೆ ಕೊರೊನಾ ಬಂದರೆ ಪ್ರಾಥಮಿಕ ದ್ವಿತೀಯ ಸಂಪರ್ಕಿತರಿಗೆ ಏಳು ದಿನ ಕ್ವಾರಂಟೈನ್ ಮತ್ತು ಟೆಸ್ಟಿಂಗ್ ಇದೆ. ಸದ್ಯ ಅಶೋಕ್ ಅವರೊಂದಿಗೆ ಸಂಪರ್ಕಕ್ಕೆ ಬಂದಿದ್ದ ಸಿಎಂ ಮತ್ತು ಇನ್ನಿತರ ಸದಸ್ಯರು ಕ್ವಾರಂಟೈನ್ ಆಗಲಿದ್ದಾರಾ ಕಾದು ನೋಡಬೇಕಾಗಿದೆ. ಇದನ್ನೂ ಓದಿ: ವಧು ಬೇಕಾಗಿದ್ದಾಳೆ- ರಸ್ತೆ ಬದಿ ಜಾಹೀರಾತು ಹಾಕಿದ ವರ
Advertisement
ರಾಜ್ಯದಲ್ಲಿ ಕೊರೊನಾ ದಿನದಿಂದ ದಿನೇ ಕೊರೊನಾ ಹೆಚ್ಚಾಗುತ್ತಿದೆ. ಈ ಮಧ್ಯೆ ಸೋಂಕು ನಿಯಂತ್ರಿಸಲು ಸರ್ಕಾರ ರಾಜ್ಯದಲ್ಲಿ ನೈಟ್ ಕರ್ಫ್ಯೂ ವಿಧಿಸಿದ್ದು, ಶುಕ್ರವಾರ ರಾತ್ರಿ 10ಗಂಟೆಯಿಂದ ಸೋಮವಾರ ಬೆಳಗಿನ ಜಾವ 5 ಗಂಟೆಯವರೆಗೂ ಕರ್ಫ್ಯೂ ಘೋಷಿಸಿದೆ. ಇದನ್ನೂ ಓದಿ: ನನ್ನ ಹೆಸರು Kovid, ಆದ್ರೆ ನಾನು ವೈರಸ್ ಅಲ್ಲ: ಬೆಂಗಳೂರು ಉದ್ಯಮಿ