ಬೆಳಗಾವಿ: ಸಿದ್ದಗಂಗಾ ಶ್ರೀಗಳಿಗೆ ಚಿಕಿತ್ಸೆ ನೀಡುತ್ತಿರುವ ಚೆನ್ನೈನ ರೆಲಾ ಆಸ್ಪತ್ರೆ ವಿಚಾರದಲ್ಲಿ ತಾವು ನೀಡಿದ ಹೇಳಿಕೆಯನ್ನು ಬಿಜೆಪಿ ಮುಖಂಡರು ತಿರುಚಿದ್ದು, ನನ್ನ ಹೇಳಿಕೆಯನ್ನು ಯಾರೂ ತಪ್ಪಾಗಿ ಭಾವಿಸುವುದು ಬೇಡ. ಒಂದೊಮ್ಮೆ ಹೇಳಿಕೆಯಿಂದ ಯಾರ ಮನಸ್ಸಿಗಾದರೂ ನೋವಾಗಿದ್ದರೆ ಕ್ಷಮೆ ಕೋರುತ್ತೇನೆ ಎಂದು ಜಲ ಸಂಪನ್ಮೂಲ ಹಾಗೂ ವೈದ್ಯಕೀಯ ಶಿಕ್ಷಣ ಸಚಿವ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ.
ತಮ್ಮ ಹೇಳಿಕೆ ಕುರಿತು ಸ್ಪಷ್ಟನೆ ನೀಡಿ ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿರುವ ಸಚಿವ ಡಿಕೆಶಿ, ತಮ್ಮ ಹೇಳಿಕೆಯನ್ನು ರಾಜಕೀಯವಾಗಿ ಬಳಸಿಕೊಳ್ಳಲು ಬಿಜೆಪಿ ಮುಖಂಡರು ಪ್ರಯತ್ನಿಸುತ್ತಿದ್ದಾರೆ. ಒಂದು ಉತ್ತಮ ಆಸ್ಪತ್ರೆ ನಿರ್ಮಾಣ, ನಿರ್ವಹಣೆಗೆ ಯಾವುದೇ ಜಾತಿ, ಧರ್ಮದ ಲೇಪ ಇರುವುದಿಲ್ಲ ಎಂಬುದು ನನ್ನ ಮಾತಿನ ತಿರುಳಾಗಿತ್ತು. ನೈಜ ಭಾವನೆಯ ಈ ಹೇಳಿಕೆಯನ್ನು ಬಿಜೆಪಿಯವರು ತಿರುಚಿದ್ದಾರೆ ಎಂದು ಆರೋಪಿಸಿದರು.
Advertisement
Advertisement
ತಮ್ಮ ಹೇಳಿಕೆಯನ್ನು ಯಾರೂ ತಪ್ಪಾಗಿ ಭಾವಿಸುವುದು ಬೇಡ. ಒಂದೊಮ್ಮೆ ತಮ್ಮ ಹೇಳಿಕೆಯಿಂದ ಯಾರ ಮನಸ್ಸಿಗಾದರೂ ನೋವಾಗಿದ್ದರೆ ಕ್ಷಮೆ ಯಾಚಿಸುತ್ತೇನೆ ಎಂದು ಸ್ಪಷ್ಟನೆ ನೀಡಿದ್ದಾರೆ.
Advertisement
ಡಿಕೆಶಿ ಹೇಳಿದ್ದೇನು?
ಬೆಳಗಾವಿ ವಿಮಾನ ನಿಲ್ದಾಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ್ದ ಸಚಿವರು, ಆಸ್ಪತ್ರೆಯಲ್ಲಿ ಮುಸ್ಲಿಮ್ ಆಡಳಿತವಿದ್ದರೂ ಶ್ರೀಗಳಿಗೆ ಉತ್ತಮ ಚಿಕಿತ್ಸೆ ನೀಡಲಾಗುತ್ತಿದೆ. ಅಲ್ಪಸಂಖ್ಯಾತ ಆಡಳಿತ ಮಂಡಳಿ ಇದ್ದರೂ ಶ್ರೀಗಳನ್ನ ಚೆನ್ನಾಗಿ ನೋಡ್ಕೊಂಡಿದ್ದಾರೆ. ಡಾಕ್ಟರ್ ಮೊಹಮ್ಮದ್ ರೆಲಾ ಮಾಲೀಕತ್ವದ ರೆಲಾ ಆಸ್ಪತ್ರೆಯಲ್ಲಿ ಶ್ರೀಗಳಿಗೆ ಚಿಕಿತ್ಸೆ ನೀಡಲಾಗುತ್ತಿದೆ. ಮೊಹಮ್ಮದ್ ರೇಲಾ ಎಂಬಂತಹ ಮುಸಲ್ಮಾನ ಅಲ್ಪಸಂಖ್ಯಾತರು. ಅವರ ಹೆಸರಿನಲ್ಲಿ ರೇಲಾ ಅನ್ನುವ ಆಸ್ಪತ್ರೆಯೊಂದನ್ನು ಮಾಡಿದ್ದಾರೆ. ಅವರು ಒಬ್ಬ ಜಗತ್ತಿನ ಫೇಮಸ್ ಸರ್ಜನ್ ಆಗಿದ್ದಾರೆ. ನಮ್ಮ ಶ್ರೀಗಳಿಗೆ ಅವರು ಶಸ್ತ್ರಚಿಕಿತ್ಸೆಯನ್ನು ಮಾಡಿದ್ದಾರೆ ಅಂತ ಹೇಳಿದ್ರು.
Advertisement
ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv ಮತ್ತು Live ವೀಕ್ಷಿಸಲು ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv