ಬೆಳಗಾವಿ/ಬೆಂಗಳೂರು: ಆಹಾರ, ಅರಣ್ಯ ಸಚಿವ ಉಮೇಶ್ ಕತ್ತಿ (Umesh Katti) ನಿಧನದ ಹಿನ್ನೆಲೆಯಲ್ಲಿ ಬೆಳಗಾವಿಯ ಎಲ್ಲಾ ಶಾಲಾ ಕಾಲೇಜು ಹಾಗೂ ಸರ್ಕಾರಿ ಕಚೇರಿಗೆ ರಜೆ ಘೋಷಿಸಲಾಗಿದೆ.
ಸಚಿವರ ನಿಧಾನಕ್ಕೆ ಸಂತಾಪ ಸೂಚಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ(Basavaraj Bommai) ಮಾತನಾಡಿ, ಆಹಾರ ಸಚಿವ ಉಮೇಶ್ ಕತ್ತಿ ನಿಧನ ಹಿನ್ನೆಲೆಯಲ್ಲಿ ಇಂದು ಬೆಳಗಾವಿ ಜಿಲ್ಲೆಯಾದ್ಯಂತ ರಜೆ ಘೋಷಣೆ ಮಾಡಲಾಗಿದೆ. ಈ ಹಿನ್ನೆಲೆಯಲ್ಲಿ ಬೆಳಗಾವಿಯ(Belagavi) ಎಲ್ಲಾ ಶಾಲಾ, ಕಾಲೇಜು, ಸರ್ಕಾರಿ ಕಚೇರಿಗಳಿಗೆ ರಜೆ ಘೋಷಣೆ ಮಾಡಿದರು.
ನಿನ್ನೆ ರಾತ್ರಿ ಹೃದಯ ಸ್ತಂಭನದಿಂದ ಆಸ್ಪತ್ರೆ ಸೇರಿದ್ದ ಆಹಾರ, ಅರಣ್ಯ ಸಚಿವ ಉಮೇಶ್ ಕತ್ತಿ ಅವರು ಕೊನೆಯುಸಿರೆಳೆದಿದ್ದಾರೆ. ಸಚಿವರ ಅಗಲಿಕೆಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ವಿಪಕ್ಷ ನಾಯಕ ಸಿದ್ದರಾಮಯ್ಯ ಸೇರಿದಂತೆ ಅನೇಕ ಗಣ್ಯರು ಸಂತಾಪವನ್ನು ಸೂಚಿಸಿದ್ದಾರೆ. ಇದನ್ನೂ ಓದಿ: 6 ಪಕ್ಷ, 8 ಬಾರಿ ಶಾಸಕ – ಉತ್ತರ ಕರ್ನಾಟಕ ಪ್ರತ್ಯೇಕ ರಾಜ್ಯದ ಸಿಎಂ ಕನಸು ಕಂಡಿದ್ದ ಕತ್ತಿ
ಉಮೇಶ್ ಕತ್ತಿ ಅವರ ಪಾರ್ಥಿವ ಶರೀರವನ್ನು ಇಂದು ಬೆಳಗ್ಗೆ ಬೆಂಗಳೂರಿನಿಂದ ಬೆಳಗಾವಿಗೆ ಏರ್‌ಲಿಫ್ಟ್ ಮಾಡಲಾಗುವುದು. ಸಂಕೇಶ್ವರದ ಸಕ್ಕರೆ ಕಾರ್ಖಾನೆ ಆವರಣದಲ್ಲಿ ಸಾರ್ವಜನಿಕರ ದರ್ಶನಕ್ಕೆ ಇಡಲಿದ್ದಾರೆ. ಮಧ್ಯಾಹ್ನ 2 ಗಂಟೆವರೆಗೂ ಸಾರ್ವಜನಿಕರ ದರ್ಶನಕ್ಕೆ ಅವಕಾಶವಿದ್ದು, ನಂತರ ಸ್ವಗ್ರಾಮ ಬೆಲ್ಲದ ಬಾಗೇವಾಡಿಯಲ್ಲಿ ಅಂತ್ಯಕ್ರಿಯೆ ನಡೆಯಲಿದೆ. ಸರ್ಕಾರದ ಗೌರವದೊಂದಿಗೆ ಸಂಜೆ 5 ಗಂಟೆಗೆ ಉಮೇಶ್ ಕತ್ತಿ ತೋಟದಲ್ಲಿ ಅಂತ್ಯಕ್ರಿಯೆ ನಡೆಯಲಿದೆ. ಇದನ್ನೂ ಓದಿ: ಉಮೇಶ್ ಕತ್ತಿ ಇನ್ನಿಲ್ಲ – ನಿನ್ನೆ ರಾತ್ರಿ ಡಾಲರ್ಸ್ ಕಾಲೋನಿ ನಿವಾಸದಲ್ಲಿ ಏನಾಯ್ತು?