ಚಿಕ್ಕಬಳ್ಳಾಪುರ: ನಾಳೆ ದೊಡ್ಡಬಳ್ಳಾಪುರದಲ್ಲಿ ಆಯೋಜಿಸಲಾಗಿದ್ದ ಬಿಜೆಪಿ ಜನೋತ್ಸವ ಕಾರ್ಯಕ್ರಮ ಸೆಪ್ಟೆಂಬರ್ 11 ಭಾನುವಾರಕ್ಕೆ ಮುಂದೂಡಿಕೆ ಮಾಡಲಾಗಿದೆ ಎಂದು ಸಚಿವ ಮುನಿರತ್ನ ಸ್ಪಷ್ಟಪಡಿಸಿದ್ದಾರೆ.
Advertisement
ಬೆಂಗಳೂರು ಗ್ರಾಮಾಂತರ ಜಿಲ್ಲೆ ದೊಡ್ಡಬಳ್ಳಾಪುರದಲ್ಲಿ ನಾಳೆ ಜನೋತ್ಸವ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಈ ಸಂಬಂಧ ಮಾಧ್ಯಮಗಳೊಂದಿಗೆ ಮಾತನಾಡಿದ ಸಚಿವರು, ಕತ್ತಿಯವರು ನಮ್ಮನ್ನೆಲ್ಲ ಅಗಲಿದ್ದಾರೆ. ಬಹಳ ನೋವಿನ ಸಂಗತಿ ಇದು. ನಾವೆಲ್ಲ ಶೋಕದಲ್ಲಿದೀವಿ, ರಾಜ್ಯದಲ್ಲಿ ಶೋಕಾಚರಣೆ ಇದೆ. ಈ ಕಾರಣದಿಂದ ನಾಳೆ ಜನೋತ್ಸವ ನಡೆಯಲ್ಲ. ಜನೋತ್ಸವ ಕಾರ್ಯಕ್ರಮವನ್ನು ಸೆಪ್ಟೆಂಬರ್ 11 ಭಾನುವಾರ ನಡೆಸಲು ನಿರ್ಧರಿಸಿದ್ದೇವೆ. ಜನೋತ್ಸವಕ್ಕೆ ಬರುವ ಕಾರ್ಯಕರ್ತರು ಮುಖಂಡರು ಭಾನುವಾರ ಬರಬೇಕಾಗಿ ವಿನಂತಿ ಮಾಡಿಕೊಳ್ಳುತ್ತೇವೆ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ನನ್ನಿಷ್ಟದಂತೆ ಬದುಕದಿದ್ದರೆ ಏಕೆ ಇರಬೇಕು? – ಫಿಲ್ಟರ್ ಇಟ್ಕೊಂಡು ಬದುಕುವ ಮಗ ನಾನಲ್ಲ ಎಂದಿದ್ದರು ಉಮೇಶ್ ಕತ್ತಿ
Advertisement
ಇದರೊಂದಿಗೆ ಉಮೇಶ್ ಕತ್ತಿ ನಿಧನಕ್ಕೆ 3 ದಿನ ಶೋಕಾಚರಣೆ ನಡೆಸಲು ಸರ್ಕಾರ ತೀರ್ಮಾನಿಸಿದೆ. ಈ ಹಿಂದೆ 1 ದಿನ ಶೋಕಾಚರಣೆ ನಡೆಸಲು ಸರ್ಕಾರ ನಿರ್ಧರಿಸಿತ್ತು. ಉಮೇಶ್ ಕತ್ತಿ ನಿಧನದ ನಡುವೆಯೂ ನಾಳೆ ಜನೋತ್ಸವ ಬೇಡ ಎಂಬ ಅಭಿಪ್ರಾಯವನ್ನು ಹಲವು ಬಿಜೆಪಿ ನಾಯಕರು ವ್ಯಕ್ತಪಡಿಸಿದ್ದರು ಎಂಬ ವಿಚಾರ ಮೂಲಗಳಿಂದ ತಿಳಿದು ಬಂದಿತ್ತು. ಹಾಗಾಗಿ ಸರ್ಕಾರ ಈ ನಿರ್ಧಾರಕ್ಕೆ ಬಂದಿದೆ.
Advertisement
Advertisement
ಪ್ರವೀಣ್ ನೆಟ್ಟಾರು ಹತ್ಯೆಯಾದ ಹಿನ್ನೆಲೆಯಲ್ಲಿ ಈ ಮೊದಲು ನಿಗದಿಯಾಗಿದ್ದ ಜನೋತ್ಸವ ಕಾರ್ಯಕ್ರಮವನ್ನು ಮುಂದೂಡಲಾಗಿತ್ತು. ಜುಲೈ 28 ಹಾಗೂ ಆಗಸ್ಟ್ 28 ಎರಡು ಬಾರಿ ಬಿಜೆಪಿ ಜನೋತ್ಸವ ಕಾರ್ಯಕ್ರಮ ರದ್ದು ಮಾಡಲಾಗಿತ್ತು. ಇದೀಗ ಮತ್ತೊಮ್ಮೆ ಜನೋತ್ಸವ ಕಾರ್ಯಕ್ರಮ ರದ್ದಾಗಿದೆ. ಇದನ್ನೂ ಓದಿ: ಪ್ರವೀಣ್ ಹತ್ಯೆಯನ್ನು ಭಯೋತ್ಪಾದನಾ ಘಟನೆಯೆಂದು ತಿರುಚಲು ಎನ್‌ಐಎಗೆ ಸೂಚನೆ: ಪಿಎಫ್‌ಐ