ಮೈಸೂರು: ವಿಧಾನ ಪರಿಷತ್ ಚುನಾವಣೆಯಲ್ಲಿ ಮೈಸೂರು, ಮಂಡ್ಯದಲ್ಲಿ ಕಾಂಗ್ರೆಸ್ ಭರ್ಜರಿ ಗೆಲುವು ಸಾಧಿಸಿದೆ.
ಮೈಸೂರು-ಚಾಮರಾಜನಗರ ದ್ವಿಸದಸ್ಯ ಕ್ಷೇತ್ರದಲ್ಲಿ ಸಿದ್ದರಾಮಯ್ಯ ಆಪ್ತ ಕಾಂಗ್ರೆಸ್‍ನ ಡಾ. ಡಿ.ತಿಮ್ಮಯ್ಯ ಗೆಲುವು ಸಾಧಿಸಿದ್ದಾರೆ. ಎರಡನೇ ಸ್ಥಾನಕ್ಕೆ ಜೆಡಿಎಸ್-ಬಿಜೆಪಿ ನಡುವೆ ಪೈಪೋಟಿ ನಡೆಯುತ್ತಿದೆ. ಬಿಜೆಪಿಯಿಂದ ಆರ್.ರಘು (ಕೌಟಿಲ್ಯ), ಜೆಡಿಎಸ್‍ನಿಂದ ಸಿ.ಎನ್.ಮಂಜೇಗೌಡ ಕಣದಲ್ಲಿದ್ದರು. ಇದನ್ನೂ ಓದಿ: ಗೆಲುವಿಗೆ ಕಾರಣರಾದ ನನ್ನ ತಾಯಿಯ ತ್ಯಾಗಕ್ಕೆ ಧನ್ಯವಾದ : ಸೂರಜ್ ರೇವಣ್ಣ
- Advertisement
ಕ್ಷೇತ್ರದ ಅಸಿಂಧು ಮತಗಳನ್ನು ಬೇರ್ಪಡಿಸುವ ವೇಳೆ ಕಾಂಗ್ರೆಸ್‍ಗೆ ಮೊದಲ ಪ್ರಾಶಸ್ತ್ಯ ಮತಗಳು ಹೆಚ್ಚು ಇವೆ. ಎರಡನೇ ಸ್ಥಾನಕ್ಕೆ ಜೆಡಿಎಸ್ ಮತ್ತು ಬಿಜೆಪಿ ಪೈಪೋಟಿ ನಡೆಸುತ್ತಿವೆ.
- Advertisement
ಇನ್ನು ಜೆಡಿಎಸ್ ಭದ್ರಕೋಟೆಯೇ ಆಗಿದ್ದ ಮಂಡ್ಯದಲ್ಲಿ ಜೆಡಿಎಸ್ ಸೋಲನುಭವಿಸಿದೆ. ಪಕ್ಷದ ಅಭ್ಯರ್ಥಿ ಅಪ್ಪಾಜಿಗೌಡ ಸೋತಿದ್ದು, ಕಾಂಗ್ರೆಸ್‍ನ ದಿನೇಶ್ ಗೂಳಿಗೌಡ ಗೆಲುವು ಸಾಧಿಸಿದ್ದಾರೆ. ಇದನ್ನೂ ಓದಿ: ದಕ್ಷಿಣ ಕನ್ನಡದಲ್ಲಿ ಕೋಟ, ಮಂಜುನಾಥ ಭಂಡಾರಿಗೆ ಜಯ