ಬೆಂಗಳೂರು: ವಿಧಾನ ಪರಿಷತ್ ಚುನಾವಣೆಯಲ್ಲಿ ಸಾವಿರಾರು ಕೋಟಿ ಆದಾಯ ಘೋಷಿಸಿಕೊಂಡಿದ್ದ ಕೆಜಿಎಫ್ ಬಾಬು ಎಂದೇ ಪ್ರಸಿದ್ಧಿ ಪಡೆದಿದ್ದ ಯೂಸೂಫ್ ಷರೀಫ್ ಸೋಲನ್ನು ಅನುಭವಿಸಿದ್ದಾರೆ.
ಬೆಂಗಳೂರು ನಗರ ಕ್ಷೇತ್ರದಿಂದ ಕಣಕ್ಕೆ ಇಳಿದಿದ್ದ ಯೂಸೂಫ್ ಷರೀಫ್ 830 ಮತಗಳನ್ನು ಪಡೆದರೆ ಬಿಜೆಪಿಯ ಗೋಪಿನಾಥ್ ರೆಡ್ಡಿ 1227 ಮತಗಳನ್ನು ಪಡೆದಿದ್ದಾರೆ. ಈ ಮೂಲಕ ಗೋಪಿನಾಥ್ ರೆಡ್ಡಿ 397 ಮತಗಳಿಂದ ಗೆದ್ದು ಮೇಲ್ಮನೆಗೆ ಆಯ್ಕೆ ಆಗಿದ್ದಾರೆ. ಈ ಮೂಲಕ ಕಾಂಗ್ರೆಸ್ ತೆಕ್ಕೆಯಲ್ಲಿದ್ದ ಸ್ಥಾನವನ್ನು ಬಿಜೆಪಿ ಗೆದ್ದುಕೊಂಡಿದೆ.
Advertisement
Advertisement
ಒಟ್ಟು 2,057 ಮತಗಳನ್ನು ಎಣಿಕೆ ಮಾಡಿದ್ದು 13 ಮತಗಳನ್ನು ತಿರಸ್ಕೃತಗೊಳಿಸಲಾಗಿದೆ. ಪಕ್ಷೇತರ ಅಭ್ಯರ್ಥಿ ಶೀನಪ್ಪಗೆ ಒಂದು ಮತ ಬಿದ್ದಿಲ್ಲ. 2015ರ ಚುನಾವಣೆಯಲ್ಲಿ ಕಾಂಗ್ರೆಸ್ ನ ಎಂ.ನಾರಾಯಣ ಸ್ವಾಮಿಗೆ 1,384 ಮತಗಳು ಬಿದ್ದಿದ್ದರೆ ಬಿಜೆಪಿಯ ದೊಡ್ಡ ಬಸವರಾಜ 1,302 ಮತಗಳನ್ನು ಪಡೆದಿದ್ದರು.ಗೋಪಿನಾಥ್ ರೆಡ್ಡಿ 2009 ರ ಚುನಾವಣೆಯಲ್ಲಿ ಸ್ಪರ್ಧಿಸಿದ್ದರು. ಈ ವೇಳೆ 9 ಮತಗಳ ಅಂತರದಲ್ಲಿ ಸೋತಿದ್ದರು. 2015ರ ಚುನಾವಣೆಯಲ್ಲಿ ಗೋಪಿನಾಥ್ ರೆಡ್ಡಿಗೆ ಟಿಕೆಟ್ ಸಿಕ್ಕಿರಲಿಲ್ಲ. ಇದನ್ನೂ ಓದಿ: ಹಾಸನದಲ್ಲಿ ಜೆಡಿಎಸ್ ಅಭ್ಯರ್ಥಿ ಸೂರಜ್ ರೇವಣ್ಣ ಗೆಲುವು
Advertisement
ನಾಮಪತ್ರ ಸಲ್ಲಿಸುವ ವೇಳೆ ಯೂಸೂಫ್ ಷರೀಫ್ ಬರೋಬ್ಬರಿ 1,743 ಕೋಟಿ ರೂ. ಆಸ್ತಿ ಘೋಷಣೆ ಮಾಡಿದ್ದರು. ಇಲ್ಲಿಯವರೆಗೆ ರಾಜ್ಯದ ಚುನಾವಣೆಯ ಇತಿಹಾಸದಲ್ಲಿ ಹೊಸಕೋಟೆ ಉಪಚುನಾವಣೆಯಲ್ಲಿ ಸ್ಪರ್ಧಿಸಿದ್ದ ಎಂಟಿಬಿ ನಾಗರಾಜ್ ಶ್ರೀಮಂತ ಅಭ್ಯರ್ಥಿ ಎನಿಸಿಕೊಂಡಿದ್ದರು. 2019 ರಲ್ಲಿ ನಡೆದ ಉಪಚುನಾವಣೆಯ ವೇಳೆ ಎಂಟಿಬಿ 1200 ಕೋಟಿ ರೂ. ಆಸ್ತಿ ಘೋಷಿಸಿದ್ದರು. ಈಗ ಎಂಟಿಬಿ ಹೆಸರಿನಲ್ಲಿದ್ದ ʼಶ್ರೀಮಂತ ಅಭ್ಯರ್ಥಿʼ ದಾಖಲೆಯನ್ನು ಯೂಸುಫ್ ಷರೀಫ್ ತಮ್ಮ ಹೆಸರಿಗೆ ವರ್ಗಾಯಿಸಿಕೊಂಡಿದ್ದಾರೆ. ಇದನ್ನೂ ಓದಿ: ಒಳ್ಳೆಯ ಫಲಿತಾಂಶ ಬರುವ ನಿರೀಕ್ಷೆ ಇದೆ: ಬೊಮ್ಮಾಯಿ