ಬೆಂಗಳೂರು: ವಿಧಾನ ಪರಿಷತ್ ಚುನಾವಣೆ ಹಿನ್ನೆಲೆಯಲ್ಲಿ ಕಾಂಗ್ರೆಸ್ 5 ಅಭ್ಯರ್ಥಿಯನ್ನು ಕಣಕ್ಕಿಳಿಸಿದೆ.
5 ನೇ ಅಭ್ಯರ್ಥಿಯಾಗಿ ವಿನಯ್ ಕಾರ್ತಿಕ್ ಹೆಸರು ಘೋಷಣೆ ಮಾಡಿದೆ. ಈಚೆಗೆ ನಾಲ್ಕು ಅಭ್ಯರ್ಥಿಗಳ ಹೆಸರನ್ನು ಕಾಂಗ್ರೆಸ್ ಘೋಷಿಸಿತ್ತು.
ವಿಧಾನಪರಿಷತ್‌ನ 7 ಸ್ಥಾನಗಳಿಗೆ ಚುನಾವಣೆ ನಡೆಯಲಿದೆ. ಒಂದು ಸ್ಥಾನ ಗೆಲ್ಲಲು 28 ಮತಗಳ ಅಗತ್ಯವಿದೆ. ಒಟ್ಟು 135 ಶಾಸಕರ ಬಲ ಹೊಂದಿರುವ ಕಾಂಗ್ರೆಸ್ 112 ಮತಗಳೊಂದಿಗೆ ತನ್ನ ನಾಲ್ವರು ಅಭ್ಯರ್ಥಿಗಳನ್ನು ಸುಲಭವಾಗಿ ಗೆಲ್ಲಿಸಿಕೊಳ್ಳಬಹುದು. ಕಾಂಗ್ರೆಸ್‌ನಿಂದ ಐದನೇ ಅಭ್ಯರ್ಥಿ ಘೋಷಿಸಲಾಗುವುದು ಎಂದು ಸಿಎಂ ಡಿ.ಕೆ.ಶಿವಕುಮಾರ್ ಹೇಳಿದ್ದರು. ಅದರಂತೆ 5ನೇ ಅಭ್ಯರ್ಥಿಯನ್ನು ಪಕ್ಷ ಕಣಕ್ಕಿಳಿಸಿದೆ.
