– ಪ್ರವೀಣ್ ನೆಟ್ಟಾರು, ಹರ್ಷ ಹತ್ಯೆ ಆರೋಪಿಗಳನ್ನು ಎನ್‌ಕೌಂಟರ್ ಮಾಡದಕ್ಕೆ ಅಸಮಾಧಾನ
ಮಂಗಳೂರು: ಕರ್ನಾಟಕಕ್ಕೆ (Karnataka) ಒಬ್ಬ ಯೋಗಿ ಆದಿತ್ಯನಾಥ್ (Yogi Adityanath) ಬೇಕೇ ಹೊರತು ಜಾತಿವಾದಿ ನಾಯಕರಲ್ಲ ಎಂದು ಮೈಸೂರಿನ ಮಾಜಿ ಸಂಸದ ಪ್ರತಾಪ್ ಸಿಂಹ (Pratap Simha) ಪಕ್ಷದ ನಾಯಕರ ವಿರುದ್ಧವೇ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
Advertisement
ಸುಳ್ಯದಲ್ಲಿ ವಿಶ್ವ ಹಿಂದೂ ಪರಿಷದ್ (VHP) ಮತ್ತು ಮೊಸರು ಕುಡಿಕೆ ಉತ್ಸವ ಸಮಿತಿ ಆಯೋಜಿಸಿದ್ದ 11ನೇ ವರ್ಷದ ಮೊಸರು ಕುಡಿಕೆ ಉತ್ಸವ ಮತ್ತು ಶೋಭಾಯಾತ್ರೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
Advertisement
ಪ್ರವೀಣ್ ನೆಟ್ಟಾರು (Praveen Nettaru) ಮತ್ತು ಹರ್ಷನ (Harsha) ಹತ್ಯೆ ಆರೋಪಿಗಳನ್ನು ಎನ್‌ಕೌಂಟರ್ ಮಾಡದ್ದಕ್ಕೆ ಅಸಮಾಧಾನ ವ್ಯಕ್ತಪಡಿಸಿದ ಅವರು, ಪರೋಕ್ಷವಾಗಿ ಜಾತಿವಾದಿ ಬಿಜೆಪಿ ನಾಯಕರ (BJP Leaders) ಮತ್ತು ಅಂದು ಅಧಿಕಾರದಲ್ಲಿದ್ದ ಬಿಜೆಪಿ ಸರಕಾರದ ವಿರುದ್ಧ ಕಿಡಿಕಾರಿದರು. ಇದನ್ನೂ ಓದಿ: ತಿಂಗಳಿಗೆ 10 ಸಾವಿರ ಕೊಡ್ತೀನಿ, ಲಿವ್‌ಇನ್ ರಿಲೇಷನ್‌ಶಿಪ್‌ನಲ್ಲಿ ಇರ್ತೀಯಾ ಅಂತ ಕೇಳಿದ್ದ ರೇಣುಕಾ – ಚಾರ್ಜ್‌ಶೀಟ್‌ನಲ್ಲಿ ಉಲ್ಲೇಖ
Advertisement
Advertisement
ಬಿಜೆಪಿ ಕಾರ್ಯಕರ್ತರು ಮನೆ ಮನೆಗೆ ಹೋಗಿ ಬಾವುಟ, ಕರಪತ್ರ ಹಂಚಿ 2018 ರಲ್ಲಿ ಸರ್ಕಾರವನ್ನು ತಂದಿದ್ದೀರಿ. ಬಿಜೆಪಿ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಹತ್ಯೆಯಾಯಿತು. ಮರ್ಡರ್ ಮಾಡಿದವರು ಎಲ್ಲಿ ಇದ್ದಾರೆ ಎಂದು ಪೊಲೀಸರಿಗೆ ಗೊತ್ತಿತ್ತು. ಪೊಲೀಸರ ಕೈಯಲ್ಲಿ ಬಂದೂಕು ಇತ್ತು. ಟ್ರಿಗರ್ ಎಳೆಯಲು ಬೆರಳು ಇತ್ತು. ಆದರೆ ಟ್ರಿಗರ್ ಎಳೆಯಬೇಡಿ ಎಂದು ಬಿಜೆಪಿ ಸರಕಾರಕ್ಕೆ ಆರ್ಡರ್ ಮಾಡಿದವರು ಯಾರು? ಪೊಲೀಸ್ ಇಲಾಖೆಯು ರಾಜಕಾರಣಿಗಳು ಎಂಬ ದುಷ್ಟ ವ್ಯವಸ್ಥೆಯಡಿ ಸಿಲುಕಿದೆ ಎಂದು ಆರೋಪಿಸಿದರು.
ಅಂದು ಬಿಜೆಪಿ ಸರಕಾರ ಆರ್ಡರ್ ಕೊಟ್ಟಿದ್ದರೆ, ದುರುಳರು ಇವತ್ತು ಸತ್ತಿರುತ್ತಿದ್ದರು. ಶಿವಮೊಗ್ಗ ಹರ್ಷನ ಮರ್ಡರ್ ಕೇಸ್‌ನಲ್ಲಿದ್ದ ಆರೋಪಿಗಳು ಒಂದು ಮನೆಯಲ್ಲಿದ್ದರು. ಅವರನ್ನು ಎನ್‌ಕೌಂಟರ್ ಮಾಡಿಸುವುದಕ್ಕೆ ತೊಂದರೆ ಏನಿತ್ತು ಎಂದು ಪ್ರಶ್ನಿಸಿದರು.