ಬೆಂಗಳೂರು: ರಾಜ್ಯದಲ್ಲಿ ಕೊರೊನಾ ಪ್ರಕರಣಗಳ ಸಂಖ್ಯೆಯಲ್ಲಿ ಇಂದು ಇಳಿಕೆಯಾಗಿದ್ದು, ಕಳೆದ 24 ಗಂಟೆಯಲ್ಲಿ 397 ಕೊರೊನಾ ಪ್ರಕರಣಗಳು ವರದಿಯಾಗಿದೆ. ಇದರೊಂದಿಗೆ ಸೋಂಕಿತರ ಸಂಖ್ಯೆ 29,80,170ಕ್ಕೆ ಏರಿಕೆಯಾಗಿದೆ. ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಈ ಬಗ್ಗೆ ಮಾಹಿತಿ ನೀಡಿದೆ.
ಕರ್ನಾಟಕ ರಾಜ್ಯದಲ್ಲಿ ಇಂದು ಹೊಸದಾಗಿ 397 ಜನರಿಗೆ ಕೊರೊನಾ ಸೋಂಕು ದೃಢವಾಗಿದೆ. ರಾಜ್ಯದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 29,80,170 ಕ್ಕೆ ಏರಿಕೆಯಾಗಿದೆ. ಸೋಂಕಿತರ ಪೈಕಿ 29,30,867 ಜನ ಗುಣಮುಖರಾಗಿ ಡಿಸ್ಚಾರ್ಜ್ ಹೊಂದಿದ್ದಾರೆ. ರಾಜ್ಯದಲ್ಲಿ ಇಂದು ಕೊರೊನಾ ಸೋಂಕಿನಿಂದ 5 ಜನರ ಸಾವನ್ನಪಿದ್ದಾರೆ. ರಾಜ್ಯದಲ್ಲಿ ಈವರೆಗೆ ಕೊರೊನಾದಿಂದ 37,866 ಜನ ಸಾವನ್ನಪ್ಪಿದ್ದಾರೆ. ರಾಜ್ಯದಲ್ಲಿ 11,408 ಜನರಲ್ಲಿ ಕೊರೊನಾ ಸೋಂಕು ಸಕ್ರಿಯವಾಗಿದೆ. ಇದನ್ನೂ ಓದಿ: ಉಪ ಚುನಾವಣೆ ಗೆಲ್ಲುವ ವಿಶ್ವಾಸ ಇದೆ: ದೇವೇಗೌಡ
ಬೆಂಗಳೂರಿನಲ್ಲಿ ಇಂದು ಒಂದೇ ದಿನ 140 ಜನರಿಗೆ ಕೋವಿಡ್-19 ಸೋಂಕು ದೃಢಪಟ್ಟಿದೆ. ಬೆಂಗಳೂರಲ್ಲಿ ಕೊರೊನಾ ಪೀಡಿತರ ಸಂಖ್ಯೆ 12,47,970 ಕ್ಕೆ ಏರಿಕೆಯಾಗಿದೆ. 12,47,970 ಸೋಂಕಿತರ ಪೈಕಿ 12,24,237 ಜನರು ಗುಣಮುಖರಾಗಿದ್ದಾರೆ. ರಾಜ್ಯ ರಾಜಧಾನಿಯಲ್ಲಿ ಇಂದು ಕೊರೊನಾ ಸೋಂಕಿನಿಂದ 3 ಮಂದಿ ಸಾವನ್ನಪ್ಪಿದ್ದಾರೆ. ನಗರದಲ್ಲಿ ಕೊರೊನಾದಿಂದ ಈವರೆಗೆ 16,180 ಜನರ ಸಾವು ಸಂಭವಿಸಿದೆ. ಬೆಂಗಳೂರಲ್ಲಿ 7,552 ಜನರಲ್ಲಿ ಕೊರೊನಾ ಸೋಂಕು ಸಕ್ರಿಯವಾಗಿದೆ. ಇದನ್ನೂ ಓದಿ: ನನಗೆ ಅಕ್ರಮ ಸಂಬಂಧ ಇಲ್ಲ- ಟ್ರೋಲಿಗರ ವಿರುದ್ಧ ಕುಟುಕಿದ ಸಮಂತಾ
ಇಂದಿನ 08/10/2021 ಸಂಪೂರ್ಣ ಪತ್ರಿಕಾ ಪ್ರಕಟಣೆಗಾಗಿ ಇಲ್ಲಿ ನೀಡಲಾಗಿರುವ ಲಿಂಕ್ ಅನ್ನು ಕ್ಲಿಕ್ ಮಾಡಿ.https://t.co/lrm52CPp72
@CMofKarnataka @BSBommai @mla_sudhakar @BBMPCOMM @mysurucitycorp @mangalurucorp @DDChandanaNews @AIRBENGALURU1 @KarnatakaVarthe @PIBBengaluru pic.twitter.com/wfcYay0hfA
— K’taka Health Dept (@DHFWKA) October 8, 2021
ಬಾಗಲಕೋಟೆ 0, ಬಳ್ಳಾರಿ 5, ಬೆಳಗಾವಿ 5, ಬೆಂಗಳೂರು ಗ್ರಾಮಾಂತರ 6, ಬೆಂಗಳೂರು ನಗರ 140, ಬೀದರ್ 1, ಚಾಮರಾಜನಗರ 1, ಚಿಕ್ಕಬಳ್ಳಾಪುರ 1, ಚಿಕ್ಕಮಗಳೂರು 12, ಚಿತ್ರದುರ್ಗ 4, ದಕ್ಷಿಣ ಕನ್ನಡ 39, ದಾವಣಗೆರೆ 2, ಧಾರವಾಡ 6, ಗದಗ 0, ಹಾಸನ 27, ಹಾವೇರಿ 0, ಕಲಬುರಗಿ 1, ಕೊಡಗು 6, ಕೋಲಾರ 4, ಕೊಪ್ಪಳ 0, ಮಂಡ್ಯ 3, ಮೈಸೂರು 53, ರಾಯಚೂರು 0, ರಾಮನಗರ 3, ಶಿವಮೊಗ್ಗ 11, ತುಮಕೂರು 20, ಉಡುಪಿ 23, ಉತ್ತರ ಕನ್ನಡ 23, ವಿಜಯಪುರ 1, ಯಾದಗಿರಿ ಜಿಲ್ಲೆಯಲ್ಲಿ 0 ಕೋವಿಡ್ 19 ಪ್ರಕರಣಗಳು ದಾಖಲಾಗಿವೆ.