ಬೆಂಗಳೂರು: ಕೊರೊನಾ ನಿಯಂತ್ರಣಕ್ಕಾಗಿ ರಾಜ್ಯ ಸರ್ಕಾರ ಹೇರಿದ್ದ ನೈಟ್ ಕರ್ಫ್ಯೂವನ್ನು ರದ್ದುಗೊಳಿಸಿದೆ.
Advertisement
ಸಿಎಂ ಬಸವರಾಜ ಬೊಮ್ಮಾಯಿ ನೇತೃತ್ವದಲ್ಲಿ ನಡೆದ ಕೋವಿಡ್ ಸಭೆಯ ಬಳಿಕ ಈ ಬಗ್ಗೆ ಮಾಧ್ಯಮಗಳೊಂದಿಗೆ ಮಾತನಾಡಿದ ಸಚಿವ ಆರ್.ಅಶೋಕ್, ರಾಜ್ಯದಲ್ಲಿ ಜಾರಿಯಾಗಿದ್ದ ನೈಟ್ ಕರ್ಫ್ಯೂ ರದ್ದುಗೊಳಿಸಲಾಗಿದೆ. ಜನವರಿ 31ರಿಂದ ನೈಟ್ ಕರ್ಫ್ಯೂ ಇರುವುದಿಲ್ಲ. ರಾಜ್ಯದಲ್ಲಿ ಒಟ್ಟು 4,28,570 ಕೇಸ್ ಇದೆ. 146 ಜನ ಮಕ್ಕಳು ಕೊರೊನಾದಿಂದ ಮೃತಪಟ್ಟಿದ್ದಾರೆ. ಕರ್ನಾಟಕದ ಕೋವಿಡ್ ಪಾಸಿಟಿವಿಟಿ ರೇಟ್ 18.8 ದಾಖಲಾಗಿದೆ. ಈ ಹಿಂದೆ ಶೇ.33 ಏರಿಕೆ ಕಂಡಿತ್ತು. ಈಗ ಶೇ.21.2ಕ್ಕೆ ಬಂದು ನಿಂತಿದೆ ಹಾಗಾಗಿ ಕೋವಿಡ್ ನಿಯಮಗಳಲ್ಲಿ ಕೆಲ ಸಡಿಲಿಕೆಗಳನ್ನು ರಾಜ್ಯದಲ್ಲಿ ಮಾಡುತ್ತಿದ್ದೇವೆ ಎಂದರು.
Advertisement
Advertisement
ಪಬ್, ಬಾರ್, ರೆಸ್ಟೋರೆಂಟ್ ಹೋಟೆಲ್‍ನಲ್ಲಿ 100% ಅವಕಾಶ ಕಲ್ಪಿಸಿ ಕೊಡುತ್ತಿದ್ದೇವೆ. ಆದರೆ ಸಿನಿಮಾ ಮಂದಿರಕ್ಕೆ ಶೇ.50 ರಷ್ಟು ನಿರ್ಬಂಧ ಮುಂದುವರಿಕೆ ಮಾಡುತ್ತಿದ್ದೇವೆ. ಉಳಿದಂತೆ ಮದುವೆ ಹೊರಾಂಗಣದಲ್ಲಿ 300 ಮತ್ತು ಒಳಾಂಗಣದಲ್ಲಿ 200 ಜನರಿಗೆ ಅವಕಾಶ ಕಲ್ಪಿಸಿಕೊಡುತ್ತಿದ್ದೇವೆ. ಕಚೇರಿಗಳಲ್ಲಿ ಶೇ.100 ಸಿಬ್ಬಂದಿಯೊಂದಿಗೆ ಕಾರ್ಯನಿರ್ವಹಿಸಲು ಅನುಮತಿ ಕೋಡುತ್ತಿದ್ದೇವೆ. ಧಾರ್ಮಿಕ ಕ್ಷೇತ್ರಗಳಲ್ಲಿ ಸೇವೆಗಳು ಮತ್ತೆ ಆರಂಭವಾಗುತ್ತಿದ್ದು, ಎಲ್ಲಾ ರೀತಿ ಸೇವೆಗಳಿಗೆ ಅವಕಾಶ ಕೊಡಲಾಗಿದೆ. ಆದರೆ ದೇವಾಲಯಗಳಲ್ಲಿ ಒಮ್ಮೆಲೆ 50 ಜನ ಮಾತ್ರ ಪ್ರವೇಶ ನಿಯಮ ಮುಂದುವರಿಸುತ್ತಿದ್ದೇವೆ ಎಂದು ಮಾಹಿತಿ ಹಂಚಿಕೊಂಡರು.
Advertisement
ಸಭೆಯ ಮುಖ್ಯಾಂಶಗಳು:
ಗುಣಮುಖರಾಗುತ್ತಿರುವವರ ಪ್ರಮಾಣ ಹೆಚ್ಚಾಗಿದ್ದು, ಸಕ್ರಿಯ ಪ್ರಕರಣಗಳ ಸಂಖ್ಯೆಯೂ ಕಡಿಮೆಯಾಗುತ್ತಿದೆ. ಆಸ್ಪತ್ರೆಗೆ ದಾಖಲಾಗುತ್ತಿರುವವರ ಸಂಖ್ಯೆ ಶೇ. 2ಕ್ಕೆ ಇಳಿದಿದೆ. ಈ ಹಿನ್ನೆಲೆಯಲ್ಲಿ ಈ ಕೆಳಕಂಡ ಕ್ರಮಗಳನ್ನು ಕೈಗೊಳ್ಳಲು ತಜ್ಞರ ಸಭೆಯಲ್ಲಿ ತೀರ್ಮಾನಿಸಲಾಯಿತು. ಮೆಟ್ರೋ ರೈಲು ಸೇರಿದಂತೆ ಸಾರ್ವಜನಿಕ ಸಾರಿಗೆ ವ್ಯವಸ್ಥೆಗಳು ತಮ್ಮ ಆಸನ ಸಾಮರ್ಥ್ಯದಷ್ಟೇ ಪ್ರಯಾಣಿಕರೊಂದಿಗೆ ಕಾರ್ಯಾಚರಣೆ ನಡೆಸಬಹುದು. ಸಿನೆಮಾ, ಮಲ್ಟಿಪ್ಲೆಕ್ಸ್, ಥಿಯೇಟರ್ ಗಳು, ರಂಗಮಂದಿರಗಳು, ಆಡಿಟೋರಿಯಂ ಗಳು ಮತ್ತು ಇಂತರ ಸ್ಥಳಗಳಲ್ಲಿ ಶೇ. 50 ರ ಆಸನ ಸಾಮರ್ಥ್ಯದೊಂದಿಗೆ ಕಾರ್ಯ ನಿರ್ವಹಿಸಲಿವೆ. ಎಲ್ಲ ಸಾಮಾಜಿಕ, ಧಾರ್ಮಿಕ ಮತ್ತು ರಾಜಕೀಯ ರ್ಯಾಲಿ, ಧರಣಿ, ಸಮಾವೇಶ, ಪ್ರತಿಭಟನೆಗಳಿಗೆ ಅವಕಾಶವಿಲ್ಲ. ಸ್ವಿಮ್ಮಿಂಗ್ ಪೂಲ್, ಜಿಮ್ ಗಳು ಶೇ.50 ಸಾಮರ್ಥ್ಯದೊಂದಿಗೆ ಕಾರ್ಯನಿರ್ವಹಿಸುವುದು. ಸ್ಪೋಟ್ಸ್ ಕಾಂಪ್ಲೆಕ್ಸ್ ಮತ್ತು ಕ್ರೀಡಾಂಗಣಗಳಲ್ಲಿ ಶೇ.50 ಸಾಮರ್ಥ್ಯದೊಂದಿಗೆ ಕಾರ್ಯನಿರ್ವಹಿಸುವುದು. ಕೇರಳ, ಮಹಾರಾಷ್ಟ್ರ, ಗೋವಾ ಗಡಿಗಳಲ್ಲಿ ತೀವ್ರ ನಿಗಾ ವಹಿಸುವುದು. ಖಾಸಗಿ ಆಸ್ಪತ್ರೆಗಳಲ್ಲಿ ಕೋವಿಡ್ ಚಿಕಿತ್ಸೆಗೆ ಶೇ.25 ರಷ್ಟು ಹಾಸಿಗೆಗಳನ್ನು ನಿಗದಿಪಡಿಸಲು ನಿರ್ಧರಿಸಲಾಯಿಗಿದ್ದು, ಕೋವಿಡ್ ಹೊರತು ಪಡಿಸಿ, ಇತರ ಚಿಕಿತ್ಸೆಗಳನ್ನು ಸಮರ್ಪಕವಾಗಿ ಒದಗಿಸಲು ಕ್ರಮ ಕೈಗೊಳ್ಳುವಂತೆ ಸೂಚಿಸಲಾಗಿದೆ.
ಗೃಹ ಕಚೇರಿ ಕೃಷ್ಣಾದಲ್ಲಿ ನಡೆದ ಸಭೆಯಲ್ಲಿ ಸಚಿವರಾದ ಆರ್ ಅಶೋಕ್, ಬಿ.ಸಿ ನಾಗೇಶ್, ಬಿ.ಸಿ ಪಾಟೀಲ್, ಆನಂದ್ ಸಿಂಗ್, ಸರ್ಕಾರದ ಮುಖ್ಯ ಕಾರ್ಯದರ್ಶಿ ರವಿಕುಮಾರ್, ನಗರ ಪೊಲೀಸ್ ಆಯುಕ್ತ ಕಮಲ್ ಪಂಥ್, ಡಾ.ಸುದರ್ಶನ್ ಸೇರಿ ಪ್ರಮುಖರು ಭಾಗಿಯಾಗಿದ್ದರು.