ಬೆಂಗಳೂರು: ರಾಜ್ಯದಲ್ಲಿ ಸದ್ಯಕ್ಕೆ ಲೋಡ್ ಶೆಡ್ಡಿಂಗ್ ಮಾಡುವ ಪರಿಸ್ಥಿತಿ ಇಲ್ಲ ಎಂದು ಇಂಧನ ಸಚಿವ ಸುನಿಲ್ ಕುಮಾರ್ ಸ್ಪಷ್ಟಪಡಿಸಿದ್ದಾರೆ.
Advertisement
ವಿಧಾನ ಪರಿಷತ್ ಕಲಾಪದ ಶೂನ್ಯವೇಳೆಯಲ್ಲಿ ಕಾಂಗ್ರೆಸ್‍ನ ಹರೀಶ್ ಕುಮಾರ್ ವಿಷಯ ಪ್ರಸ್ತಾಪ ಮಾಡಿದರು. ಇದಕ್ಕೆ ಪ್ರತಿಕ್ರಿಯೆ ನೀಡಿದ ಸಚಿವರು, ಸದ್ಯಕ್ಕೆ ರಾಜ್ಯದಲ್ಲಿ ಲೋಡ್ ಶೆಡ್ಡಿಂಗ್ ಇಲ್ಲ ಎಂದು ಸ್ಪಷ್ಟಪಡಿಸಿದರು. ಇದನ್ನೂ ಓದಿ: ಕತ್ತಿಗೆ ಮಚ್ಚು ಹಿಡಿದು ಮನೆಯ ಸದಸ್ಯರ ಕೂಡಿ ಹಾಕಿ ಫಿಲ್ಮಿ ಸ್ಟೈಲ್ ದರೋಡೆ
Advertisement
Advertisement
ಬೇಸಿಗೆ ಕಾಲ ಶುರುವಾಗಿದೆ. ರಾಜ್ಯದಲ್ಲಿ ಕಲ್ಲಿದ್ದಲು ಕೊರತೆ ಇದೆ. ಹೀಗಾಗಿ ರಾಜ್ಯದಲ್ಲಿ ಲೋಡ್ ಶೆಡ್ಡಿಂಗ್ ಆಗುತ್ತಿದೆ. ಸರ್ಕಾರ ಕೂಡಲೇ ಕಲ್ಲಿದ್ದಲಿನ ಕೊರತೆ ನೀಗಿಸಿಕೊಳ್ಳಬೇಕು ಅಂತ ಹರೀಶ್ ಕುಮಾರ್ ಒತ್ತಾಯ ಮಾಡಿದರು. ಇದಕ್ಕೆ ಉತ್ತರ ನೀಡಿದ ಸುನೀಲ್ ಕುಮಾರ್, ರಾಜ್ಯದಲ್ಲಿ ಲೋಡ್ ಶೆಡ್ಡಿಂಗ್ ಮಾಡುವ ಪ್ರಸ್ತಾಪ ಸರ್ಕಾರದ ಮುಂದೆ ಇಲ್ಲ ಎಂದು ತಿಳಿಸಿದರು. ಇದನ್ನೂ ಓದಿ: ಮುಸ್ಲಿಮ್ ವ್ಯಾಪಾರಿಗಳಿಗೆ ನಿರ್ಬಂಧದ ಬ್ಯಾನರ್ ಹಾಕಿದವರು ಹೇಡಿಗಳು: ಖಾದರ್
Advertisement
ರಾಜ್ಯದಲ್ಲಿ ಕಲ್ಲಿದ್ದಲ ಸಮಸ್ಯೆ ಇಲ್ಲ. ಪ್ರಾರಂಭದಲ್ಲಿ ಸ್ವಲ್ಪ ಕಲ್ಲಿದ್ದಲಿನ ಸಮಸ್ಯೆ ಆಗಿತ್ತು. ಆದರೆ ಕೂಡಲೇ ಕೇಂದ್ರ ಸಚಿವರ ಭೇಟಿಯಾಗಿ ರಾಜ್ಯದ ಪಾಲಿನ ಕಲ್ಲಿದ್ದಲು ಪಡೆಯಲು ಕ್ರಮವಹಿಸುವ ಕೆಲಸ ಆಗಿದೆ. ಸಿಎಂ ಕೂಡಾ ಉತ್ತಮವಾಗಿ ಈ ವಿಚಾರವಾಗಿ ಕಾರ್ಯನಿರ್ವಹಣೆ ಮಾಡಿದ್ದಾರೆ. ಹೀಗಾಗಿ ನಮಗೆ ಸದ್ಯ ಕಲ್ಲಿದ್ದಲಿನ ಕೊರತೆ ಇಲ್ಲ. ಹೀಗಾಗಿ ಸದ್ಯಕ್ಕೆ ರಾಜ್ಯದಲ್ಲಿ ಕೋಡ್ ಶೆಡ್ಡಿಂಗ್ ಮಾಡುವ ಪ್ರಸ್ತಾಪ ನಮ್ಮ ಮುಂದೆ ಇಲ್ಲ. ರೈತರಿಗೆ 7 ಗಂಟೆ ವಿದ್ಯುತ್ ಕೊಡಲಾಗುತ್ತಿದೆ. ಎಲ್ಲಾದರೂ ಸಮಸ್ಯೆ ಆಗಿದೆ ಎಂದು ತಿಳಿಸಿದರೆ ಅಲ್ಲಿ ಸಮಸ್ಯೆ ಪರಿಹಾರ ಮಾಡುತ್ತೇವೆ ಎಂದು ಭರವಸೆ ನೀಡಿದರು.