ಒಟ್ಟಾವಾ: ಕೆನಡಾದ (Canadaa) ಪ್ರಧಾನಿ ಹುದ್ದೆಗೆ ಕರ್ನಾಟಕ ಮೂಲದ ಚಂದ್ರ ಆರ್ಯ ಅಧಿಕೃತವಾಗಿ ನಾಮಪತ್ರ ಸಲ್ಲಿಕೆ ಮಾಡಿದ್ದಾರೆ. ಲಿಬರಲ್ ಪಕ್ಷದಿಂದ ಪ್ರಧಾನಿ ಹುದ್ದೆಗೆ ಉಮೇದುವಾರಿಕೆ ಸಲ್ಲಿಸಿದ ಬಳಿಕ ಕನ್ನಡದಲ್ಲಿ (Kannada) ಮಾತನಾಡಿ ಚಂದ್ರ ಆರ್ಯ (Indian-origin MP Chandra Arya) ಗಮನ ಸೆಳೆದಿದ್ದಾರೆ.
ಸದನವನ್ನು ಉದ್ದೇಶಿಸಿ ಆರ್ಯ ಅವರು ತಮ್ಮ ಪರಂಪರೆಯ ಬಗ್ಗೆ ಅಪಾರ ಹೆಮ್ಮೆಯಿಂದ ಮಾತನಾಡಿದರು. ಕರ್ನಾಟಕದ (Karnataka) ತುಮಕೂರು ಜಿಲ್ಲೆಯ ಶಿರಾ ತಾಲೂಕಿನ ದ್ವಾರಲು ಗ್ರಾಮದ ವ್ಯಕ್ತಿಯೊಬ್ಬರು ಕೆನಡಾದಲ್ಲಿ ಸಂಸದರಾಗಿ ಆಯ್ಕೆಯಾಗಿದ್ದು, ಈಗ ಈ ಗೌರವಾನ್ವಿತ ಸಂಸ್ಥೆಯಲ್ಲಿ ಕನ್ನಡದಲ್ಲಿ ಮಾತನಾಡುತ್ತಿರುವುದು ಸುಮಾರು 5 ಕೋಟಿ ಕನ್ನಡಿಗರಿಗೆ ಹೆಮ್ಮೆಯ ಕ್ಷಣವಾಗಿದೆ ಎಂದು ತಿಳಿಸಿದರು.
Advertisement
ಭಾಷಣದ ಕೊನೆಯಲ್ಲಿ ರಾಷ್ಟ್ರಕವಿ ಕುವೆಂಪು ಅವರ ಹಾಗೂ ನಟ ಡಾ.ರಾಜ್‌ಕುಮಾರ್ ಅವರು ಹಾಡಿದ್ದ ಪ್ರಸಿದ್ಧ ಹಾಡಿನ ಸಾಲನ್ನು ಹೇಳಿದರು. ಎಲ್ಲಾದರೂ ಇರು ಎಂಥಾದರು ಇರು ಎಂದೆಂದಿಗೂ ನೀ ಕನ್ನಡವಾಗಿರು, ಕನ್ನಡವೇ ಸತ್ಯ ಕನ್ನಡವೇ ನಿತ್ಯ ಎಂದು ಹೇಳಿ ತಮ್ಮ ಮಾತಿಗೆ ಪೂರ್ಣ ವಿರಾಮ ಹಾಕಿದರು. ಈ ಹಿಂದೆ ಸಂಸದರಾಗಿ ಆಯ್ಕೆಯಾದ ವೇಳೆಯೂ ಸಂಸತ್‌ನಲ್ಲಿ ಕನ್ನಡದಲ್ಲಿ ಮಾತನಾಡಿ ಗಮನ ಸೆಳೆದಿದ್ದರು.
Advertisement
Advertisement
ರಾಷ್ಟ್ರವನ್ನು ಪುನರ್ನಿರ್ಮಿಸಲು ಮತ್ತು ಭವಿಷ್ಯದ ಪೀಳಿಗೆಗೆ ಉತ್ತಮ ವಾತಾವರಣ ನಿರ್ಮಿಸಲು ಹೆಚ್ಚು ಪರಿಣಾಮಕಾರಿ ಸರ್ಕಾರವನ್ನು ಮುನ್ನಡೆಸಲು ಕೆನಡಾದ ಮುಂದಿನ ಪ್ರಧಾನಿಯಾಗಲು ನಾನು ಸ್ಪರ್ಧಿಸುತ್ತಿದ್ದೇನೆ ಎಂದು ಅವರು ಎಕ್ಸ್‌ನಲ್ಲಿ ಹೇಳಿಕೊಂಡಿದ್ದಾರೆ.
Advertisement
ನಮ್ಮ ಮಕ್ಕಳು ಮತ್ತು ಮೊಮ್ಮಕ್ಕಳ ಹಿತದೃಷ್ಟಿಯಿಂದ, ನಾವು ಸಂಪೂರ್ಣವಾಗಿ ಅಗತ್ಯವಾದ ದಿಟ್ಟ ನಿರ್ಧಾರಗಳನ್ನು ತೆಗೆದುಕೊಳ್ಳಬೇಕು. ಲಿಬರಲ್ ಪಕ್ಷದ ಮುಂದಿನ ನಾಯಕರಾಗಿ ಆಯ್ಕೆಯಾದರೆ, ನನ್ನ ಜ್ಞಾನ ಮತ್ತು ಪರಿಣತಿಯ ಮೇಲೆ ಉತ್ತಮ ಆಡಳಿತ ನೀಡುತ್ತೇನೆ ಎಂದು ಅವರು ಪೋಸ್ಟ್‌ನಲ್ಲಿ ಉಲ್ಲೇಖಿಸಿದ್ದಾರೆ.
ಆರ್ಯ ಅವರು 2015 ರಲ್ಲಿ ಮೊದಲ ಬಾರಿಗೆ ಹೌಸ್ ಆಫ್ ಕಾಮನ್ಸ್‌ಗೆ ಆಯ್ಕೆಯಾದರು ಮತ್ತು 2019 ರಲ್ಲಿ ಮರು ಆಯ್ಕೆಯಾದರು. 2022 ರಲ್ಲಿ ಹೌಸ್ ಆಫ್ ಕಾಮನ್ಸ್‌ನಲ್ಲಿ ಮಾತೃಭಾಷೆ ಕನ್ನಡದಲ್ಲಿ ಮಾತನಾಡುವ ಮೂಲಕ ಗಮನ ಸೆಳೆದರು. ಹಿಂದೂ ಕೆನಡಿಯನ್ನರ ಪರವಾಗಿ ವಾದಿಸುವ ವಕೀಲರಾಗಿ, ಆರ್ಯ ಆಗಾಗ ದೃಢವಾದ ನಿಲುವುಗಳನ್ನು ತೆಗೆದುಕೊಂಡಿದ್ದಾರೆ.
Chandra Arya throws in his hat for the nomination to be Prime Minister of Canada. Speaks in Kannada in the Canada House. Arya is native of Tumkur district, Karnataka. Got his MBA from Dharwad before immigrating to Canada. pic.twitter.com/OBymUmucme
— Smita Prakash (@smitaprakash) January 17, 2025
2024 ರಲ್ಲಿ ಸಂಸತ್ತಿನ ಹೊರಗೆ ‘ಓಂ’ ಚಿಹ್ನೆಯನ್ನು ಹೊಂದಿರುವ ಕೇಸರಿ ಧ್ವಜವನ್ನು ಹಾರಿಸಿದ್ದರು. ಇದು ಚರ್ಚೆಗೆ ಗ್ರಾಸವಾಗಿತ್ತು. ಹಿಂದೂ ಸಮುದಾಯ ರಾಜಕೀಯದಲ್ಲಿ ಪಾಲ್ಗೊಳ್ಳುವಂತೆ ಪ್ರೋತ್ಸಾಹಿಸಲು ಅವರು ಈ ಸಂದರ್ಭವನ್ನು ಬಳಸಿಕೊಂಡಿದ್ದರು.
ತುಮಕೂರು ಮೂಲದ ಆರ್ಯ ಅವರು, ಧಾರವಾಡದಲ್ಲಿರುವ ಕೌಸಾಲಿ ಇನ್‌ಸ್ಟಿಟ್ಯೂಟ್ ಆಫ್ ಮ್ಯಾನೇಜ್‌ಮೆಂಟ್ ಸ್ಟಡೀಸ್‌ನಿಂದ ಎಂಬಿಎ ಪದವಿ ಪಡೆದಿದ್ದಾರೆ. ಅವರು 20 ವರ್ಷಗಳ ಹಿಂದೆ ಒಟ್ಟಾವಾಕ್ಕೆ ತೆರಳಿದ್ದರು. ರಾಜಕೀಯ ಪ್ರವೇಶಿಸುವ ಮೊದಲು ಎಂಜಿನಿಯರ್, ಹೂಡಿಕೆ ಸಲಹೆಗಾರ ಮತ್ತು ಉದ್ಯಮಿಯಾಗಿ ಕೆಲಸ ಮಾಡಿದ್ದರು.