ಬೆಂಗಳೂರು: ಎಂಬಿಎ, ಎಂಸಿಎ, ಎಂ.ಇ, ಎಂ.ಟೆಕ್, ಎಂ.ಆರ್ಕಿಟೆಕ್ಚರ್ ಕೋರ್ಸ್‌ಗಳ ಪ್ರವೇಶಕ್ಕೆ ಸೆಪ್ಟೆಂಬರ್ 23 ಮತ್ತು 24ರಂದು ಪಿಜಿ ಸಿಇಟಿ ಪರೀಕ್ಷೆ (PGCET Exam) ನಡೆಸಲಾಗುವುದು ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ತಿಳಿಸಿದೆ.
ಕರ್ನಾಟಕ ಪರೀಕ್ಷಾ ಪ್ರಾಧಿಕಾರದ (KEA) ಕಾರ್ಯ ನಿರ್ವಾಹಕ ನಿರ್ದೇಶಕರಾದ ಎಸ್.ರಮ್ಯಾ (S Ramya) ಅವರಿಂದು ಪತ್ರಿಕಾ ಪ್ರಕಟಣೆ ಹೊರಡಿಸಿದ್ದು, ಸೆ.23ರ ಶನಿವಾರ ಮಧ್ಯಾಹ್ನ 2.30ರಿಂದ 4.30ರ ವರೆಗೆ ಎಂ.ಇ, ಎಂ.ಟೆಕ್ ಮತ್ತು ಎಂ.ಆರ್ಕ್ ಕೋರ್ಸ್‌ಗಳಿಗೆ, ಸೆ.24ರ ಭಾನುವಾರ ಬೆಳಿಗ್ಗೆ 10.30 ರಿಂದ 12.30ರ ವರೆಗೆ ಎಂಸಿಎ ಕೋರ್ಸ್‌ಗೆ (MCA Course) ಮತ್ತು ಅಂದು ಮಧ್ಯಾಹ್ನ 2.30ರಿಂದ 4.30ರ ವರೆಗೆ MBA ಕೋರ್ಸ್‌ಗೆ ಗರಿಷ್ಠ 100 ಅಂಕಗಳಿಗೆ ಪರೀಕ್ಷೆಗಳು ನಡೆಯಲಿವೆ ಎಂದಿದ್ದಾರೆ.
ಈ ಮೊದಲು ಸೆಪ್ಟೆಂಬರ್ 9 ಮತ್ತು 10ರಂದು ಈ ಪರೀಕ್ಷೆಯನ್ನ ನಡೆಸಲು ನಿರ್ಧರಿಸಲಾಗಿತ್ತು. ಆದರೆ ರಾಜ್ಯದ ವಿವಿಧ ವಿಶ್ವವಿದ್ಯಾಲಯಗಳ ವ್ಯಾಪ್ತಿಯಲ್ಲಿ ಪದವಿ ಕೋರ್ಸುಗಳ ಅಂತಿಮ ಸೆಮಿಸ್ಟರ್ ಪರೀಕ್ಷೆ ನಡೆಯುತ್ತಿರುವ ಹಿನ್ನೆಲೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ ಎಂದು ಪ್ರಕಟಣೆ ತಿಳಿಸಿದೆ. ಇದನ್ನೂ ಓದಿ: ಬಿಬಿಎಂಪಿ ಮುಖ್ಯ ಕಚೇರಿಯಲ್ಲಿ ಬೆಂಕಿ ಪ್ರಕರಣ; ಗಂಭೀರ ಸ್ಥಿತಿಯಲ್ಲಿದ್ದ ಚೀಫ್ ಎಂಜಿನಿಯರ್ ಶಿವಕುಮಾರ್ ನಿಧನ
ಹೆಚ್ಚಿನ ಮಾಹಿತಿಗೆ ಪ್ರಾಧಿಕಾರದ ವೆಬ್‌ಸೈಟ್ http://kea.kar.nic.in ನೋಡಬಹುದು ಎಂದು ಮಾಹಿತಿ ನೀಡಿದ್ದಾರೆ. ಇದನ್ನೂ ಓದಿ: 7,000 ರಾಖಿ ಕಟ್ಟಿಸಿಕೊಂಡು ವಿಶ್ವ ದಾಖಲೆ ಬರೆದ ಜನಪ್ರಿಯ ಆನ್‌ಲೈನ್ ಬೋಧಕ ಖಾನ್ ಸರ್
Web Stories