ಬೆಂಗಳೂರು: ಕಳೆದ ವಾರ ರಾಷ್ಟ್ರೀಯ ತನಿಖಾ ದಳ(NIA) ರಾಜ್ಯದ ಹಲವು ಭಾಗಗಳಲ್ಲಿ ದಾಳಿ ನಡೆಸಿ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ(PFI) ನಾಯಕರನ್ನು ಬಂಧಿಸಿತ್ತು. ಈಗ ರಾಜ್ಯಾದ್ಯಂತ ಕರ್ನಾಟಕ ಪೊಲೀಸರು ಪಿಎಫ್ಐ ಮತ್ತು ಎಸ್ಡಿಪಿಐಗೆ(SDPI) ಶಾಕ್ ನೀಡಿದ್ದಾರೆ.
ಬಿದರ್ನಿಂದ ಚಾಮರಾಜನಗರದವರೆಗೆ ದಾಳಿ ನಡೆಸಿ 40ಕ್ಕೂ ಅಧಿಕ ಮಂದಿಯನ್ನು ವಶಕ್ಕೆ ಪಡೆಯಲಾಗಿದೆ. ರಾಮನಗರ, ಮಂಗಳೂರು, ಬಾಗಲಕೋಟೆ, ಕೊಪ್ಪಳ, ಬಳ್ಳಾರಿ, ಬೆಂಗಳೂರು ಗ್ರಾಮೀಣ, ಕೋಲಾರ, ಮೈಸೂರು, ಚಾಮರಾಜ ನಗರದಲ್ಲಿ ದಾಳಿ ನಡೆದಿದೆ. ಇದನ್ನೂ ಓದಿ: ವಿಧವೆಯ ಹಿಂದೆ ಬಿದ್ದು ಮಸಣ ಸೇರಿದ ವಿಚ್ಚೇದಿತ – ಅವಳು ನನ್ನ ಮಾತು ಕೇಳ್ತಿಲ್ಲ ಅಂತ ಆತ್ಮಹತ್ಯೆಗೆ ಶರಣಾದ
Advertisement
Advertisement
ಕಾನೂನು ಸುವ್ಯವಸ್ಥೆ ಎಡಿಜಿಪಿ ಅಲೋಕ್ ಕುಮಾರ್ ಮತ್ತು ಆಯಾ ಜಿಲ್ಲೆಗಳ ಎಸ್ಪಿ ಹಾಗೂ ಕಮಿಷನರ್ಗಳ ನೇತೃತ್ವದಲ್ಲಿ ಈ ಕಾರ್ಯಾಚರಣೆ ನಡೆದಿದೆ. ವಶಕ್ಕೆ ಪಡೆದವರು ಪಿಎಫ್ಐ ಪ್ರತಿಭಟನೆ ಹಾಗೂ ಪಿಎಫ್ಐಗೆ ಸೇರಿದ ಕಾರ್ಯಕ್ರಮದಲ್ಲಿ ಸಕ್ರಿಯವಾಗಿದ್ದರು. ಇದರ ಜೊತೆ ಇವರು ಭಾರೀ ಫಂಡಿಂಗ್ ಮಾಡುತ್ತಿದ್ದ ಆರೋಪ ಕೇಳಿ ಬಂದ ಹಿನ್ನೆಲೆಯಲ್ಲಿ ದಾಳಿ ನಡೆಸಲಾಗಿದೆ.
Advertisement
Advertisement
ಬೀದರ್ನಲ್ಲಿ ಪಿಎಫ್ಐ ಜಿಲ್ಲಾಧ್ಯಕ್ಷ ಅಬ್ದುಲ್ ಕರೀಂ, ಎಸ್ಡಿಪಿಐ ಜಿಲ್ಲಾ ಕಾರ್ಯದರ್ಶಿ ಶೇಕ್ ಮಕ್ಸೂದ್ ವಶಕ್ಕೆ ಪಡೆಯಲಾಗಿದೆ. ಚಿತ್ರದುರ್ಗದಲ್ಲಿ ಪಿಎಫ್ಐ ಮುಖಂಡ ಅಫನ್ ಅಲಿಯನ್ನು ಪೊಲೀಸರ ವಶಕ್ಕೆ ಪಡೆದಿದ್ದಾರೆ.
ಬಾಗಲಕೋಟೆಯಲ್ಲಿ 6 ಪಿಎಫ್ಐ ಕಾರ್ಯಕರ್ತರು, ಚಾಮರಾಜನಗರದಲ್ಲಿ ಪಿಎಫ್ಐ ಜಿಲ್ಲಾಧ್ಯಕ್ಷ ಕಪಿಲ್, ಕಾರ್ಯದರ್ಶಿ ಸುಯೇಬ್ ಅವರನ್ನು ವಶಕ್ಕೆ ಪಡೆಯಲಾಗಿದೆ. ಶಾಂತಿ ಕದಡುವ ಕೃತ್ಯದಲ್ಲಿ ಭಾಗಿಯಾದ ಆರೋಪದ ಹಿನ್ನೆಲೆ ವಶಕ್ಕೆ ಪಡೆಯಲಾಗಿದೆ ಎಂದು ತಿಳಿದು ಬಂದಿದೆ.