ಬೆಂಗಳೂರು: ಇಲ್ಲಿನ ನಾಯಂಡಹಳ್ಳಿ ಫ್ಲೈಓವರ್ ಮೇಲಿನಿಂದ ಜಿಗಿದು ಕರ್ನಾಟಕ ವಿದ್ಯುತ್ ಕಾರ್ಖಾನೆಯ (Karnataka Power Factory )ಗುತ್ತಿಗೆ ನೌಕರ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ.
ನವೀನ್ ಕುಮಾರ್ (30) ಆತ್ಮಹತ್ಯೆಗೆ ಶರಣಾದ ವ್ಯಕ್ತಿ. ತನ್ನ ಬೈಕನ್ನ ಫ್ಲೈಓವರ್ (Nayandahalli Flyover) ಮೇಲೆ ಪಾರ್ಕಿಂಗ್ ಮಾಡಿ ಏಕಾಏಕಿ ಕೆಳಗೆ ಜಿಗಿದಿದ್ದಾನೆ. ಸದ್ಯ ಘಟನಾ ಸ್ಥಳಕ್ಕೆ ಬ್ಯಾಟರಾಯನಪುರ ಪೊಲೀಸರು ದೌಡಾಯಿಸಿದ್ದು, ಪರಿಶೀಲನೆ ನಡೆಸಿದ್ದಾರೆ. ಇದನ್ನೂ ಓದಿ: I.N.D.I.A ಒಕ್ಕೂಟ ಅಧಿಕಾರಕ್ಕೆ ಬಂದ್ರೆ ಮೋದಿ ಜೈಲಿಗೆ – ಮಿಸಾ ಭಾರತಿ
ಕಳೆದ 3-4 ತಿಂಗಳಿನಿಂದ ಕರ್ನಾಟಕ ವಿದ್ಯುತ್ ಕಾರ್ಖಾನೆಯಲ್ಲಿ ಕೆಲಸ ಮಾಡುತ್ತಿದ್ದ ನವೀನ್, ಕೆಲಸಕ್ಕೆ ಹೋಗುವುದಾಗಿ ಹೇಳಿ ಹೊರಟಿದ್ದಾನೆ. ಬಳಿಕ ಬೈಕ್ ಪಾರ್ಕ್ (Bike Parking) ಮಾಡಿ, ಫ್ಲೈಓವರ್ ಮೇಲಿಂದ ಜಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ. ಇದನ್ನೂ ಓದಿ: ಚನ್ನಪಟ್ಟಣದಲ್ಲಿ ಜೆಡಿಎಸ್‌ಗೆ ಬಿಗ್ ಶಾಕ್- ಕಾಂಗ್ರೆಸ್‌ನಿಂದ ಮಿಡ್‍ನೈಟ್ ಆಪರೇಷನ್
2 ತಿಂಗಳ ಹಿಂದೆಯಷ್ಟೇ ಮದುವೆ:
ಆತ್ಮಹತ್ಯೆ ಮಾಡಿಕೊಂಡ ನವೀನ್ 2 ತಿಂಗಳ ಹಿಂದೆ ಮದುವೆಯಾಗಿದ್ದ, ಕವಿಕಾ (ಕರ್ನಾಟಕ ವಿದ್ಯುತ್ ಕಾರ್ಖಾನೆ)ದಲ್ಲಿ ಗುತ್ತಿಗೆ ಆಧಾರದಲ್ಲಿ ಕೆಲಸ ಮಾಡುತ್ತಿದ್ದ. ಕೆಲಸದ ಮೇಲೆ ಹೋಗಿ ಬರ್ತೀನಿ ಅಂತಾ ಏಪ್ರಿಲ್ 11ರಂದು ಮನೆಯಿಂದ ಹೊರಟಿದ್ದ ನವೀನ್, ಇಂದು (ಏ.12) ಬೆಳಗ್ಗೆ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ. ಸದ್ಯ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ.
ಆತ್ಮಹತ್ಯೆ ಪ್ರಕರಣದ ಕುರಿತು ಬ್ಯಾಟರಾಯನಪುರ ಪೊಲೀಸರು ತನಿಖೆ ಮುಂದುವರಿಸಿದ್ದಾರೆ. ಇದನ್ನೂ ಓದಿ: War 2: ಹೃತಿಕ್ ರೋಷನ್ ಜೊತೆಗಿನ ಸಿನಿಮಾಗಾಗಿ ಮುಂಬೈಗೆ ಬಂದಿಳಿದ ಜ್ಯೂ.ಎನ್‌ಟಿಆರ್