Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಇಬ್ಬರೂ ಒಟ್ಟಿಗೆ ಸಾಗುವುದೇ ನಮ್ಮ ನಡುವೆ ಆಗಿರುವ ಒಪ್ಪಂದ: ಸಿದ್ದರಾಮಯ್ಯ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಇಬ್ಬರೂ ಒಟ್ಟಿಗೆ ಸಾಗುವುದೇ ನಮ್ಮ ನಡುವೆ ಆಗಿರುವ ಒಪ್ಪಂದ: ಸಿದ್ದರಾಮಯ್ಯ

Bengaluru City

ಇಬ್ಬರೂ ಒಟ್ಟಿಗೆ ಸಾಗುವುದೇ ನಮ್ಮ ನಡುವೆ ಆಗಿರುವ ಒಪ್ಪಂದ: ಸಿದ್ದರಾಮಯ್ಯ

Public TV
Last updated: November 29, 2025 2:58 pm
Public TV
Share
3 Min Read
Siddaramaiah D.K Shivakumar
SHARE

–  ವರಿಷ್ಠರು ಸೂಚಿಸಿದಂತೆ ನಡೆದುಕೊಳ್ಳುತ್ತೇವೆ

ಬೆಂಗಳೂರು: ಪಕ್ಷದ ವರಿಷ್ಠರ ತೀರ್ಮಾನ, ಸೂಚನೆಯಂತೆ ನಾನು ಹಾಗೂ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ (D.K Shivakumar) ನಡೆದುಕೊಳ್ಳುತ್ತೇವೆ ಎಂದು ನಾನು ಹಾಗೂ ಅವರು ತೀರ್ಮಾನಿಸಿದ್ದೇವೆ. ಸಚಿವರಾಗಲಿ, ಶಾಸಕರಾಗಿ ಸರ್ಕಾರದ ವಿರುದ್ಧವಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಸ್ಪಷ್ಟಪಡಿಸಿದರು.

ತಮ್ಮ ನಿವಾಸದಲ್ಲಿ ಡಿ.ಕೆ ಶಿವಕುಮಾರ್ ಅವರೊಂದಿಗೆ ಜಂಟಿ ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿದ ಅವರು, ನಾವಿಬ್ಬರೂ ಪಕ್ಷದ ವರಿಷ್ಠರು ಸೂಚಿಸಿದಂತೆ ನಡೆದುಕೊಳ್ಳುತ್ತೇವೆ ಎಂದು ತೀರ್ಮಾನಿಸಿದ್ದೇವೆ. ಅಧಿವೇಶನ ಇರುವುದರಿಂದ ಇಬ್ಬರಿಗೂ ಗೊಂದಲಗಳನ್ನು ತಿಳಿಗೊಳಿಸುವ ಕೆಲಸ ಮಾಡಲು ಸೂಚಿಸಿದ್ದಾರೆ. ನಾಳೆಯಿಂದ ಯಾವುದೇ ಗೊಂದಲ ಇರುವುದಿಲ್ಲ. ಈಗಲೂ ಇಲ್ಲ. ನಮ್ಮ ನಡುವೆ ಆಗಿರುವ ಒಪ್ಪಂದದ ಬಗ್ಗೆ ಹೈ ಕಮಾಂಡಿಗೆ ಮಾಹಿತಿ ನೀಡಲಾಗುವುದು. ಗೊಂದಲ ಸೃಷ್ಟಿಯಾಗಿದೆ, ಕೆಲವು ಮಾಧ್ಯಮಗಳು ಇದನ್ನು ಸೃಷ್ಟಿಸಿವೆ ಎಂದರು. ಇದನ್ನೂ ಓದಿ: ಕೊಟ್ಟ ಮಾತು ಉಳಿಸಿಕೊಳ್ಬೇಕು ಅಂತಾ ನಾನು ಹೇಳಿದ್ದು ಬೇರೆ, ನನ್ನ ಹೇಳಿಕೆ ತಿರುಚಲಾಗಿದೆ – ಡಿಕೆ ಸುರೇಶ್

DK Shivakumar 3 1

ಕೆಲವು ಶಾಸಕರು ಸಚಿವ ಸಂಪುಟ ಪುನರ್ ರಚನೆಗೆ ಸಂಬಂಧಿಸಿದಂತೆ ದೆಹಲಿಗೆ ಭೇಟಿ ನೀಡಿರಬಹುದು. ಹಾಗೆಂದು ಬೇರೆ ಅರ್ಥ ಕಲ್ಪಿಸಬೇಕಿಲ್ಲ. ಕೆಲವರು ಇಂಥ ಕಾರಣಕ್ಕೆ ಭೇಟಿ ನೀಡಿರುವುದಾಗಿ ತಿಳಿಸಿದ್ದಾರೆ ಎಂದರು.

ಬ್ರೇಕ್‌ಫಾಸ್ಟ್‌ ಮೀಟಿಂಗ್‌ನಲ್ಲಿ ಡಿ.ಕೆ.ಶಿವಕುಮಾರ್, ಹಾಗೂ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರ ಪೊನ್ನಣ್ಣ ಉಪಸ್ಥಿತರಿದ್ದರು. ಉಪಹಾರ ಸಭೆಯಲ್ಲಿ ಏನೂ ಮಾತನಾಡಿಲ್ಲ. ಇಬ್ಬರೂ ನಮ್ಮ ಮನೆಯಲ್ಲಿ ಒಟ್ಟಿಗೆ ಉಪಹಾರ ಸೇವಿಸಿದ್ದೇವೆ. ಪಕ್ಷದ ವರಿಷ್ಠರಾದ ವೇಣುಗೋಪಾಲ್ ಅವರು ಪೊನ್ನಣ್ಣ ಅವರಿಗೆ ಕರೆ ಮಾಡಿ ಶಿವಕುಮಾರ್ ಅವರನ್ನು ಉಪಾಹಾರಕ್ಕೆ ಕರೆಯಲು ಸೂಚಿಸಿದ್ದರು. ಡಿಸಿಎಂ ಅವರಿಗೂ ಇದನ್ನೇ ತಿಳಿಸಿದ್ದರು. ಅವರೇ, ನಮ್ಮ ಮನೆಗೆ ಊಟಕ್ಕೆ ಬನ್ನಿ ಎಂದು ಆಹ್ವಾನತ್ತಿದ್ದರು. ಮತ್ತೊಂದು ದಿನ ಊಟಕ್ಕೆ ಬರೋಣ ಎಂದು ತಿಳಿಸಿ ನಮ್ಮ ಮನೆಗೇ ಉಪಾಹಾರಕ್ಕೆ ಕರೆದೆ ಎಂದರು.

ಪಕ್ಷದ ವರಿಷ್ಠರ ತೀರ್ಮಾನ, ಸೂಚನೆಯಂತೆ ನಾನು ಹಾಗೂ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ನಡೆದುಕೊಳ್ಳುತ್ತೇವೆ ಎಂದು ನಾವಿಬ್ಬರೂ ತೀರ್ಮಾನಿಸಿದ್ದೇವೆ. ಸಚಿವರಾಗಲಿ, ಶಾಸಕರಾಗಲೀ ಯಾರೂ ನಮ್ಮ ಸರ್ಕಾರದ ವಿರುದ್ಧವಿಲ್ಲ. pic.twitter.com/SunFoXJ0g9

— Siddaramaiah (@siddaramaiah) November 29, 2025

2028 ಕಾಂಗ್ರೆಸ್‌ ಮತ್ತೆ ಅಧಿಕಾರಕ್ಕೆ ತರಲು ಕಾರ್ಯತಂತ್ರ
ಇತ್ತೀಚಿನ ದಿನಗಳಲ್ಲಿ ಅನಗತ್ಯವಾಗಿ ಕೆಲವು ಗೊಂದಲಗಳು (Karnataka Power Tussle) ನಿರ್ಮಾಣವಾಗಿವೆ. ನಾವು ಈ ಬಗ್ಗೆ ಮಾತನಾಡಿದ್ದೇವೆ. 2028ರ ಚುನಾವಣೆ ಹಾಗೂ ಸ್ಥಳೀಯ ಸಂಸ್ಥೆಗಳ ಕಾರ್ಪೋರೇಷನ್, ತಾಲೂಕು, ಜಿಲ್ಲಾ ಹಾಗೂ ಗ್ರಾಮ ಪಂಚಾಯತ್ ಚುನಾವಣೆಗಳು ಬಹಳ ಮುಖ್ಯವಾಗಿದ್ದು, ಈ ಬಗ್ಗೆ ಚರ್ಚೆ ಮಾಡಿದ್ದೇವೆ. 2028 ರಲ್ಲಿ ಕಾಂಗ್ರೆಸ್‌ನ್ನು ಮತ್ತೆ ಅಧಿಕಾರಕ್ಕೆ ತರಬೇಕೆಂದು ಚರ್ಚಿಸಲಾಗಿದೆ. 2022ರ ವಿಧಾನ ಸಭಾ ಚುನಾವಣೆಯಲ್ಲಿ ಕೆಲಸ ಮಾಡಿದಂತೆಯೇ ಮುಂದೆಯೂ ಒಟ್ಟಿಗೆ ಸಾಗುವ ತೀರ್ಮಾನ ಮಾಡಿದ್ದೇವೆ ಎಂದರು.

ನಮ್ಮಲ್ಲಿ ಯಾವುದೇ ಭಿನ್ನಾಭಿಪ್ರಾಯಗಳಿಲ್ಲ. ಈಗಲೂ ಇಲ್ಲ, ಮುಂದೆಯೂ ಇರುವುದಿಲ್ಲ. ಚಳಿಗಾಲದ ಅಧಿವೇಶನ ಬೆಳಗಾವಿಯಲ್ಲಿ ಡಿಸೆಂಬರ್ 8 ರಿಂದ ಪ್ರಾರಂಭವಾಗಲಿದೆ. ನಾವು ವಿರೋಧ ಪಕ್ಷದವರನ್ನು ಸಮರ್ಥವಾಗಿ ಇವರಿಗೆ ಎದುರಿಸಿದ್ದೇವೆ ಮುಂದೆಯೂ ಎದುರಿಸುತ್ತೇವೆ. ಬಿಜೆಪಿ, ಜೆಡಿಎಸ್ ಅಪಪ್ರಚಾರ, ಸುಳ್ಳು ಆರೋಪಗಳನ್ನು, ಅಪವಾದಗಳನ್ನು ಮಾಡುವುದು ಬಿಜೆಪಿ ಹಾಗೂ ಜೆಡಿಎಸ್ ಅವರ ಚಾಳಿ. ಇವರಿಬ್ಬರನ್ನೂ ಸಮರ್ಥವಾಗಿ ನಾನು ಮತ್ತು ಉಪಮುಖ್ಯಮಂತ್ರಿಗಳು ಎದುರಿಸುತ್ತೇವೆ. ಅದಕ್ಕೆ ಅಗತ್ಯವಿರುವ ಕಾರ್ಯತಂತ್ರಗಳನ್ನು ರೂಪಿಸಿಕೊಂಡಿದ್ದೇವೆ ಎಂದರು.

ಇತ್ತೀಚೆಗೆ ಅಧಿಕಾರ ಹಸ್ತಾತ್ಮ್ಯರದ ಬಗ್ಗೆ ಉಂಟಾಗಿರುವ ಗೊಂದಲಗಳಿಗೆ ಮಾಧ್ಯಮಗಳೇ ಕಾರಣ ಎಂದು ಆರೋಪಿಸಿದ ಸಿಎಂ, ಬಿಜೆಪಿ , ಜೆಡಿಎಸ್ ಪಕ್ಷಗಳು ಪತ್ರಿಕೆಗಳಲ್ಲಿ ಅವಿಶ್ವಾಸ ನಿರ್ಣಯ ತೆಗೆದುಕೊಳ್ಳುವುದಾಗಿ ಹೇಳಿಕೆ ನೀಡಿದ್ದಾರೆ. ಇದು ಅಸಂಭವವಾಗಿದ್ದು, ನಾವು 142 ಜನರಿದ್ದು, ಅವರು 64 ಜನ ಮಾತ್ರ, ಜೆಡಿಎಸ್ 18 ಇದ್ದಾರೆ. ಅವರಿಬ್ಬರೂ ಸೇರಿ 82 ಜನರಾಗುತ್ತಾರೆ.ಇದೊಂದು ವಿಫಲ ಪ್ರಯತ್ನ ಎಂದು ಭಾವಿಸಿದ್ದೇನೆ ವಿರೋಧ ಪಕ್ಷಗಳು ಏನೇ ಸುಳ್ಳು ಆರೋಪಗಳನ್ನು ಮಾಡಿದರೂ ಅವನ್ನೆಲ್ಲಾ ಸಮರ್ಥವಾಗಿ ಎದುರಿಸುವ ಕೆಲಸ ಮಾಡುತ್ತೇವೆ ಎಂದರು. ಇದನ್ನೂ ಓದಿ: ನಮ್ಮದು ಒಂದೇ ಗುಂಪು, ಕಾಂಗ್ರೆಸ್‌ ಗುಂಪು – ಡಿಕೆ ಶಿವಕುಮಾರ್‌

TAGGED:congressd k shivakumarKarnataka power tusslesiddaramaiah
Share This Article
Facebook Whatsapp Whatsapp Telegram

Cinema news

Ramayana
`ರಾಮಾಯಣ’ ಟೀಸರ್ ರಿಲೀಸ್ – ಮರ್ಯಾದಾ ಪುರುಷೋತ್ತಮನ ಗೆಟಪ್‌ನಲ್ಲಿ ಕಂಗೊಳಿಸಿದ ರಣಬೀರ್
Bollywood Cinema Latest Top Stories
Malayalam director Ranjith
ನಟಿ ಮೇಲೆ ಲೈಂಗಿಕ ದೌರ್ಜನ್ಯ ಆರೋಪ – ಮಲಯಾಳಂ ನಿರ್ದೇಶಕ ರಂಜಿತ್ ಅರೆಸ್ಟ್
Cinema Latest Main Post National South cinema
vijay thalapathy
ನಟ ವಿಜಯ್‌ ವಿರುದ್ಧ ಪ್ರಕರಣ ದಾಖಲು
Cinema Latest South cinema Top Stories
Delhi Rain
ದೆಹಲಿ-ಎನ್‌ಸಿಆರ್‌ನ ಹಲವೆಡೆ ಭಾರೀ ಮಳೆ – ಯೆಲ್ಲೋ ಅಲರ್ಟ್ ಜಾರಿ
Cinema Latest National Top Stories

You Might Also Like

RCB Fans Bengaluru Chinnaswamy
Bengaluru City

ಐಪಿಎಲ್ ನಕಲಿ ಟಿಕೆಟ್ ದಂಧೆಗೆ ಬೆಂಗಳೂರು ಪೊಲೀಸರ ಡಿಜಿಟಲ್ ಬ್ರೇಕ್!

Public TV
By Public TV
1 minute ago
Supreme Court 1
Court

ಜಡ್ಜ್‌ಗಳ ಮೇಲೆ ಪೂರ್ವಯೋಜಿತ ದಾಳಿ – ಪಶ್ಚಿಮ ಬಂಗಾಳದಲ್ಲಿ ಕಾನೂನು ಸುವ್ಯವಸ್ಥೆ ಕುಸಿದಿದೆ: ಸುಪ್ರೀಂ ಕೆಂಡಾಮಂಡಲ

Public TV
By Public TV
10 minutes ago
karnataka High Court
Bengaluru City

ಹಿಂದಿಗೆ ಅಂಕಗಳ ಬದಲಿಗೆ ಗ್ರೇಡ್ – ಸರ್ಕಾರದ ನಿರ್ಧಾರ ಪ್ರಶ್ನಿಸಿ ಹೈಕೋರ್ಟ್‌ಗೆ PIL

Public TV
By Public TV
58 minutes ago
pvc pipe
Latest

ಕೈಗಾರಿಕೆಗಳಿಗೆ ರಿಲೀಫ್‌ – 40 ಪೆಟ್ರೋಕೆಮಿಕಲ್ ಉತ್ಪನ್ನಗಳ ಮೇಲಿನ ಕಸ್ಟಮ್ಸ್ ಸುಂಕ ಮನ್ನಾ

Public TV
By Public TV
2 hours ago
Yatnal
Districts

ನಾನು ಸಿಎಂ ಆಗಿ ಮೊದಲ ಕ್ಯಾಬಿನೆಟ್‌ನಲ್ಲೇ ಮುಸ್ಲಿಮರನ್ನು ಅಲ್ಪಸಂಖ್ಯಾತ ಪಟ್ಟಿಯಿಂದ ಹೊರಹಾಕ್ತೇನೆ – ಯತ್ನಾಳ್

Public TV
By Public TV
2 hours ago
IPL 2026 DC vs LSG Sanjiv Goenka–Rishabh Pant exchange goes viral after lucknow loss sparks fresh IPL storm
Cricket

ಅಂದು ರಾಹುಲ್‌, ಇಂದು ಪಂತ್ – ಸೋಲಿನ ಬೆನ್ನಲ್ಲೇ ಗೋಯೆಂಕಾ ಭಾರೀ ಚರ್ಚೆ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?