ಬೆಂಗಳೂರು: ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಹಾಗೂ ಸಕಾಲ ಸಚಿವರಾದ ಬಿ.ಸಿ. ನಾಗೇಶ್ ಅವರಿಗೆ ಕೋವಿಡ್-19 ಪಾಸಿಟಿವ್ ಆಗಿರುವ ಬಗ್ಗೆ ವರದಿಯಾಗಿದೆ.
Advertisement
ಈ ಬಗ್ಗೆ ಟ್ವಿಟ್ಟರ್ ಮೂಲಕ ಮಾಹಿತಿ ಹಂಚಿಕೊಂಡ ಸಚಿವರು, ಕೋವಿಡ್-19 ಲಘು ಲಕ್ಷಣಗಳು ಕಾಣಿಸಿದ ಕಾರಣ ನಾನು ಇಂದು ಪರೀಕ್ಷೆಗೆ ಒಳಪಟ್ಟಿದ್ದು, ಕೋವಿಡ್-19 ವರದಿ ಪಾಸಿಟಿವ್ ಬಂದಿದೆ. ಕ್ವಾರಂಟೈನ್‍ನಲ್ಲಿದ್ದು ಅಗತ್ಯ ವೈದ್ಯಕೀಯ ಚಿಕಿತ್ಸೆ ಪಡೆಯುತ್ತಿದ್ದೇನೆ. ನನ್ನ ಸಂಪರ್ಕಕ್ಕೆ ಬಂದ ಎಲ್ಲರೂ ಪರೀಕ್ಷೆ ಮಾಡಿಸಿಕೊಳ್ಳಿ ಎಂದು ಪೋಸ್ಟ್ ಮಾಡಿದ್ದಾರೆ. ಇದನ್ನೂ ಓದಿ: ಜನರನ್ನು ಸಜ್ಜುಗೊಳಿಸಬೇಕಾದ ಸಚಿವರು, ಶಾಸಕರಿಗೆ ಸೋಂಕು ತಗುಲಿರುವುದು ಆತಂಕಕಾರಿ: ಅಜಿತ್ ಪವಾರ್
Advertisement
Advertisement
ಈ ಬಗ್ಗೆ ಮಾಧ್ಯಮ ಪ್ರಕಟಣೆ ಕೂಡ ಹೊರಡಿಸಿದ್ದು, ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಹಾಗೂ ಸಕಾಲ ಸಚಿವರಾದ ಬಿ.ಸಿ. ನಾಗೇಶ್ ಅವರಿಗೆ ಕೋವಿಡ್-19 ಲಘು ಲಕ್ಷಣಗಳು ಕಾಣಿಸಿದ ಕಾರಣ ಇಂದು ಕೋವಿಡ್-19 ಪರೀಕ್ಷೆಗೆ ಒಳಪಟ್ಟಿದ್ದರು. ವರದಿ ಪಾಸಿಟಿವ್ ಬಂದಿದೆ. ಈ ಹಿನ್ನೆಲೆಯಲ್ಲಿ ಸಚಿವರ ಸಂಪರ್ಕಕ್ಕೆ ಬಂದ ಎಲ್ಲರೂ ಪರೀಕ್ಷೆ ಮಾಡಿಸಿಕೊಳ್ಳುವಂತೆ ಕೋರಲಾಗಿದೆ. ಇದನ್ನೂ ಓದಿ: ಜೆಸಿಬಿಗೆ ಬಲಿಯಾದ ಮೂರು ವರ್ಷದ ಮಗು
Advertisement
ಇಂದು ಮಹಾರಾಷ್ಟ್ರ ಸರ್ಕಾರದ 10ಕ್ಕೂ ಹೆಚ್ಚು ಸಚಿವರು ಮತ್ತು ಸುಮಾರು 20ಕ್ಕೂ ಹೆಚ್ಚು ಶಾಸಕರಿಗೆ ಕೊರೊನಾ ಪಾಸಿಟಿವ್ ಬಂದು ಆತಂಕ ಸೃಷ್ಟಿಸಿದೆ.