ಬೆಂಗಳೂರು: ರಾಜ್ಯದಲ್ಲಿ ಕೋವಿಡ್ ಪ್ರಮಾಣದಲ್ಲಿ ಭಾರೀ ಕುಸಿತ ಕಂಡಿರುವ ಹಿನ್ನೆಲೆಯಲ್ಲಿ ಸೋಮವಾರದಿಂದ ನಿಗದಿಯಂತೆ ಪ್ರಾಥಮಿಕ ಶಾಲೆಗಳು ಆರಂಭಗೊಳ್ಳಲಿವೆ.
ಕೋವಿಡ್ ನಿಯಮಗಳ ಅನುಸಾರ ಸರಿಸುಮಾರು ಎರಡು ವರ್ಷಗಳ ಬಳಿಕ ಇದೇ ಮೊದಲ ಬಾರಿಗೆ 1ನೇ ತರಗತಿಯಿಂದ ಐದನೇ ತರಗತಿವರೆಗೆ ಸ್ಕೂಲ್ ಶುರುವಾಗುತ್ತಿದೆ. ಇದಕ್ಕಾಗಿ ಸರ್ಕಾರಿ ಮತ್ತು ಖಾಸಗಿ ಶಾಲೆಗಳಲ್ಲಿ ಸಕಲ ತಯಾರಿಗಳು ನಡೆದಿವೆ. ಪ್ರಾಥಮಿಕ ಶಾಲೆ ತೆರೆಯುತ್ತಿರೋದನ್ನು ಪೋಷಕರು ಸ್ವಾಗತಿಸಿದ್ದಾರೆ. ಇದನ್ನೂ ಓದಿ: ತೇಗದ ಮರ ಕಡಿದ ಮಾಲೀಕನ ವಿರುದ್ಧ ಕೇಸ್ ದಾಖಲು
Advertisement
Advertisement
ಅ.25ರಿಂದ ನ.2ರವರೆಗೆ ಮಾತ್ರ ಅರ್ಧ ದಿನ ತರಗತಿ ಮಾತ್ರ ನಡೆಯಲಿದ್ದು, ನವೆಂಬರ್ 2ರಿಂದ ದಿನಪೂರ್ತಿ ಶಾಲೆ ನಡೆಯಲಿದೆ. ಮಕ್ಕಳು ಶಾಲೆಗೆ ಬರಲು ಪೋಷಕರ ಅನುಮತಿ ಕಡ್ಡಾಯವಾಗಿದ್ದು ಹಾಜರಾತಿ ಕಡ್ಡಾಯವಲ್ಲ. ಇದನ್ನೂ ಓದಿ: ಆರ್ಯನ್ ಖಾನ್ ಡ್ರಗ್ಸ್ ಕೇಸ್‍ಗೆ ಟ್ವಿಸ್ಟ್ – NCB ಮುಖ್ಯಸ್ಥರ ವಿರುದ್ಧ ಗಂಭೀರ ಆರೋಪ
Advertisement
ಒಂದು ತರಗತಿಯಲ್ಲಿ 20 ಮಕ್ಕಳಿಗೆ ಮಾತ್ರ ಅವಕಾಶವಿದ್ದು ನ.2ರಿಂದ ಶಾಲೆಯಲ್ಲೇ ಮಧ್ಯಾಹ್ನದ ಬಿಸಿಯೂಟ ವ್ಯವಸ್ಥೆ ಜಾರಿಯಾಗಲಿದೆ. ಇದನ್ನೂ ಓದಿ: ಜಮ್ಮು ಕಾಶ್ಮೀರ ಅಭಿವೃದ್ಧಿ ತಡೆಯಲು ಯಾರಿಂದಲೂ ಸಾಧ್ಯವಿಲ್ಲ: ಅಮಿತ್ ಶಾ