ಕಲಬುರಗಿ: ಪಿಎಸ್ಐ ನೇಮಕಾತಿ ಹಗರಣದ (PSI Recruitment Scam) ಪ್ರಮುಖ ಕಿಂಗ್ ಪಿನ್ ರುದ್ರಗೌಡ ಪಾಟೀಲ್ (Rudragowda Patil) ಸಿಐಡಿ ಅಧಿಕಾರಿಗಳನ್ನು ನೂಕಿ ಪರಾರಿಯಾಗಿದ್ದಾನೆ.
ಜಾಮೀನು ಸಿಕ್ಕ ಮೇಲೆ ಸಿಐಡಿ (CID) ವಿಚಾರಣೆಗೆ ರುದ್ರಗೌಡ ಪಾಟೀಲ್ ನಿರಂತರ ಗೈರಾಗಿದ್ದ. ತುಮಕೂರು ಪೊಲೀಸ್ ಠಾಣೆಯಲ್ಲಿ ದಾಖಲಾದ ಪ್ರಕರಣದ ವಿಚಾರಣೆಗಾಗಿ ವಶಕ್ಕೆ ಪಡೆಯಲು ಸಿಐಡಿ ಪೊಲೀಸರು ಮುಂದಾಗಿದ್ದರು.
Advertisement
Advertisement
ಗುರುವಾರ ರಾತ್ರಿ ಕಲಬುರಗಿ ನಗರದ ಅಕ್ಕಮಹಾದೇವಿ ಕಾಲೋನಿಯಲ್ಲಿರುವ ನಿವಾಸಕ್ಕೆ ತೆಳಿದ್ದಾಗ ಸಿಐಡಿ ಪಿಎಸ್ಐ ಆನಂದ್ ಅವರನ್ನು ತಳ್ಳಿ ರುದ್ರಗೌಡ ಪಾಟೀಲ್ ಓಡಿ ಹೋಗಿದ್ದಾನೆ. ಈ ಬಗ್ಗೆ ಅಶೋಕ ನಗರ ಠಾಣೆಯಲ್ಲಿ ಸಿಐಡಿ ಪಿಎಸ್ಆ ಆನಂದ್ ದೂರು ದಾಖಲಿಸಿದ್ದಾರೆ. ಇದನ್ನೂ ಓದಿ: ವಿದೇಶಗಳಿಗೆ ಹಣಕಾಸು ಸಚಿವಾಲಯದ ಮಾಹಿತಿ ರವಾನೆ – ಓರ್ವ ಉದ್ಯೋಗಿ ಅರೆಸ್ಟ್
Advertisement
ಗುರುವಾರ ಜಾರಿ ನಿರ್ದೇಶನಾಲಯದ ಅಧಿಕಾರಿಗಳು ರುದ್ರಗೌಡ ಪಾಟೀಲ್ ಮನೆ ಮೇಲೆ ದಾಳಿ ನಡೆಸಿದ್ದರು. ದಾಳಿ ನಂತರ ಸಿಐಡಿ ಅಧಿಕಾರಿಗಳು ಆತನನ್ನು ವಶಕ್ಕೆ ಪಡೆಯಲು ಮುಂದಾಗಿದ್ದರು.
Advertisement
ಅಫಜಲಪುರ ಬ್ಲಾಕ್‍ನ ಕಾಂಗ್ರೆಸ್ ಅಧ್ಯಕ್ಷನ ಸಹೋದರನಾಗಿರುವ ಆರ್.ಡಿ.ಪಾಟೀಲ್ ಪಿಎಸ್‍ಐ ನೇಮಕಾತಿಯಲ್ಲಿ ಎಲೆಕ್ಟ್ರಾನಿಕ್ ಡಿವೈಸ್ ಮೂಲಕ ಅಭ್ಯರ್ಥಿಗಳಿಗೆ ಆನ್ಸರ್ ಕೀ ರವಾನಿಸಿದ್ದನು.
Live Tv
[brid partner=56869869 player=32851 video=960834 autoplay=true]
Join our Whatsapp group by clicking the below link
https://chat.whatsapp.com/E6YVEDajTzH06LOh77r25k