Bengaluru CityDistrictsKarnatakaLatestMain Post

ತನಿಖೆಗೆ ಸಹಕರಿಸದ ಪ್ರಿಯಾಂಕ್‌ ಖರ್ಗೆಯಿಂದ ಪಲಾಯನವಾದ: ಅರಗ ಜ್ಞಾನೇಂದ್ರ ಕಿಡಿ

ಬೆಂಗಳೂರು: ಸಿಐಡಿ ಅಧಿಕಾರಿಗಳ ಮುಂದೆ ಹಾಜರಾಗಿ ಪ್ರಿಯಾಂಕ್‌ ಖರ್ಗೆಯವರು ತನಿಖೆಗೆ ಸಹಕರಿಸುವುವದರ ಬದಲು, ಪಲಾಯನವಾದ ನೀತಿಯನ್ನು, ಅನುಸರಿಸಿದ್ದಾರೆ ಎಂದು ಗೃಹ ಸಚಿವ ಅರಗ ಜ್ಞಾನೇಂದ್ರ ಕಿಡಿ ಕಾರಿದ್ದಾರೆ.

ಈ ಸಂಬಂಧ ಮಾಧ್ಯಮ ಹೇಳಿಕೆಯನ್ನು ಬಿಡುಗಡೆ ಮಾಡಿದ ಅವರು, ಸಿಐಡಿ ಅಧಿಕಾರಿಗಳ ಮುಂದೆ ಹಾಜರಾಗಿ ಸಾಕ್ಷ್ಯಾಧಾರ ಗಳನ್ನು ನೀಡದೆ ಇರುವ ನಿರ್ಧಾರದ ಹಿಂದೆ, ಬಂಧನಕ್ಕೆ ಒಳಗಾಗಿರುವ ತಮ್ಮ ಆಪ್ತರನ್ನು ರಕ್ಷಿಸುವ ಇರಾದೆ ಇದೆ ಎಂಬ ಸಂಶಯ ಮೂಡುತ್ತದೆ ಎಂದು ಗಂಭೀರ ಆರೋಪ ಮಾಡಿದ್ದಾರೆ.

ಹೇಳಿಕೆಯಲ್ಲಿ ಏನಿದೆ?
ತಮ್ಮ ಬಳಿ ಇರಬಹುದಾದ ಪಿಎಸ್‌ಐ(ಪೊಲೀಸ್‌ ಸಬ್‌ ಇನ್ಸ್‌ಪೆಕ್ಟರ್‌) ಹುದ್ದೆಗಳ ಅಕ್ರಮ ನೇಮಕಾತಿಗೆ ಸಂಬಂಧಿಸಿದಂತೆ ಸಾಕ್ಷ್ಯಾಧಾರ ಗಳನ್ನು, ಹಾಗೂ ಮಾಹಿತಿಗಳನ್ನು, ಹಂಚಿ ಕೊಳ್ಳಬೇಕು ಎಂದು ಸಿಐಡಿ ಅಧಿಕಾರಿಗಳು, ಕಾಂಗ್ರೆಸ್ ಶಾಸಕ  ಪ್ರಿಯಾಂಕ್ ಖರ್ಗೆ ಯವರಿಗೆ ನೋಟಿಸ್ ನೀಡಿದ್ದರು.

ಮಾನ್ಯ ಶಾಸಕರು, ತಮ್ಮ ಬಳಿ ಅಕ್ರಮ ನೇಮಕಾತಿಗೆ ಸಂಬಂಧಿಸಿದಂತೆ ಬಹಳಷ್ಟು ಸಾಕ್ಷ್ಯಾಧಾರ ಗಳೂ, ವ್ಯಕ್ತಿಗಳ ಹೆಸರುಗಳು ಗೊತ್ತು, ಎಂದು ಮಾಧ್ಯಮದವರ ಮುಂದೆ ಬಿಂಬಿಸಿಕೊಂಡಿದ್ದರು.

ಈಗ ಸಿಐಡಿ ಅಧಿಕಾರಿಗಳ ಮುಂದೆ ಹಾಜರಾಗಲು ಹಿಂಜರಿಯುತ್ತಿದ್ದಾರೆ. ಹಾಗೂ ತಮ್ಮ ಹೊಣೆಗಾರಿಕೆಯನ್ನು ಮರೆತು, ತಮ್ಮಲ್ಲಿ ಯಾವುದೇ ಸಾಕ್ಷ್ಯಾಧಾರ ಗಳಿಲ್ಲ, ಕೇವಲ ಸಾಮಾಜಿಕ ಜಾಲತಾಣ ದಲ್ಲಿರುವ ಮಾಹಿತಿಯನ್ನು ಮಾತ್ರ ಪ್ರಕಟಿಸಿದ್ದೆ, ಎಂಬ ಬಾಲಿಶ ಹೇಳಿಕೆ ನೀಡಿದ್ದಾರೆ.

ಸಿಐಡಿ ಅಧಿಕಾರಿಗಳ ಮುಂದೆ ಹಾಜರಾಗಿ, ಖರ್ಗೆಯವರು ತನಿಖೆಗೆ ಸಹಕರಿಸುವುವದರ ಬದಲು, ಪಲಾಯನವಾದ ನೀತಿಯನ್ನು, ಅನುಸರಿಸಿದ್ದಾರೆ. ಪ್ರಾಮಾಣಿಕವಾಗಿ ಪರೀಕ್ಷೆ ಬರೆದರೂ, ಹುದ್ದೆಯಿಂದ ವಂಚಿತರಾದ ಅಭ್ಯರ್ಥಿಗಳಿಗೆ, ನ್ಯಾಯ ಒದಗಿಸಲು, ಸಿಐಡಿ ತನಿಖೆಗೆ ನಾನೇ ಸ್ವತಃ ಆಸಕ್ತಿ ತೋರಿಸಿ, ಮುಖ್ಯಮಂತ್ರಿಗಳ ಜತೆ ಸಮಾಲೋಚಿಸಿ, ತನಿಖೆಗೆ ಆದೇಶ ನೀಡಿದ್ದೆ.

ಬಡ ಕುಟುಂಬದಿಂದ ಬಂದಂಥ, ಸಾವಿರಾರು, ಪ್ರಾಮಾಣಿಕ ಹಾಗೂ ಪ್ರತಿಭಾವಂತ ಆಕಾಂಕ್ಷಿ ಗಳು, ಮೂಲೆ ಗುಂಪಾದರೆ, ಸಮಾಜಕ್ಕೆ ಆಗುವ ನಷ್ಟದ ಅಂದಾಜನ್ನು ಖರ್ಗೆಯವರು, ಅರಿಯಬೇಕಿತ್ತು. ಇದನ್ನೂ ಓದಿ: ಪಿಎಸ್‍ಐ ಅಕ್ರಮ ದಾಖಲೆ ಬಹಿರಂಗ ಪಡಿಸಿದವರನ್ನು ಹೆದರಿಸ್ತೀರಾ? ಈ ಆಟ ನಮ್ಮಲ್ಲಿ ನಡೆಯಲ್ಲ: ಡಿಕೆಶಿ

ಸಿಐಡಿ ಅಧಿಕಾರಿಗಳ ಮುಂದೆ ಹಾಜರಾಗಿ ಸಾಕ್ಷ್ಯಾಧಾರ ಗಳನ್ನು ನೀಡದೆ ಇರುವ ನಿರ್ಧಾರದ ಹಿಂದೆ, ಬಂಧನಕ್ಕೆ ಒಳಗಾಗಿರುವ ತಮ್ಮ ಆಪ್ತರನ್ನು ರಕ್ಷಿಸುವ ಇರಾದೆ ಇದೆ ಎಂಬ ಸಂಶಯ ಮೂಡುತ್ತದೆ.

ತನಿಖೆಯು ನಿಷ್ಪಕ್ಷಪಾತವಾಗಿ, ನಡೆಯುತ್ತಿದ್ದು, ಅಕ್ರಮದಲ್ಲಿ ಒಳಗಾಗಿದವರು, ಎಷ್ಟೇ ದೊಡ್ಡವರಾದರೂ ರಕ್ಷಿಸುವ ಪ್ರಶ್ನೆಯಿಲ್ಲ.

Leave a Reply

Your email address will not be published.

Back to top button