ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರು (Bengaluru) ಸೇರಿದಂತೆ ರಾಜ್ಯದ ವಿವಿಧೆಡೆ ಆಗಸ್ಟ್ 12ರ ವರೆಗೆ ಹಗುರದಿಂದ ಸಾಧಾರಣ ಮಳೆಯಾಗಲಿದೆ ಎಂದು ರಾಜ್ಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಕರಾವಳಿ ಜಿಲ್ಲೆಗಳಲ್ಲಿ (Karavali Districts) ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಅಲ್ಲದೇ ಉತ್ತರ ಮತ್ತು ದಕ್ಷಿಣ ಒಳನಾಡಿನ ಎಲ್ಲಾ ಜಿಲ್ಲೆಗಳಲ್ಲೂ ಚದುರಿದಂತೆ ಮಳೆಯಾಗುವ ಸಾಧ್ಯತೆಯಿದೆ ಎಂದು ರಾಜ್ಯ ಹವಾಮಾನ ಇಲಾಖೆಯ ನಿರ್ದೇಶಕ ಸಿ.ಎಸ್ ಪಾಟೀಲ್ ಮಾಹಿತಿ ನೀಡಿದ್ದಾರೆ. ಇದನ್ನೂ ಓದಿ: ಮಾತೃತ್ವದ ರಜೆ ವೇಳೆ ಬೇರೆಯವರ ನೇಮಕ – ಹುದ್ದೆಯಲ್ಲಿ ಮುಂದುವರೆಯುವಂತೆ ಹೈಕೋರ್ಟ್ ತೀರ್ಪು
Advertisement
Advertisement
ಆಗಸ್ಟ್-ಸೆಪ್ಟೆಂಬರ್‌ನಲ್ಲಿ ಭರ್ಜರಿ ಮಳೆ ಸಾಧ್ಯತೆ:
ಸದ್ಯಕ್ಕಂತೂ ಮಳೆ ನಿಲ್ಲುವ ಲಕ್ಷಣ ಕಾಣುತ್ತಿಲ್ಲ, ಹೀಗಿರುವಾಗ ಆಗಸ್ಟ್ ಮತ್ತು ಸೆಪ್ಟೆಂಬರ್ ತಿಂಗಳಲ್ಲಿಯೂ ಉತ್ತಮ ಮಳೆಯಾಗುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ. ಹಾಗಾಗಿ ಕಳೆದ ಜುಲೈ ತಿಂಗಳಲ್ಲಿ ಆರ್ದ್ರತೆ ಮತ್ತು ಶಾಖ ಎದುರಿಸುತ್ತಿದ್ದ ಜನರು ಮುಂದಿನ ದಿನಗಳಲ್ಲಿ ಭಾರೀ ಮಳೆ ಎದುರಿಸುವ ಸಾಧ್ಯತೆ ಇದೆ.
Advertisement
Advertisement
ಜೊತೆಗೆ ಆಗಸ್ಟ್ ಮತ್ತು ಸೆಪ್ಟೆಂಬರ್‌ನಲ್ಲಿ ದೇಶದಲ್ಲಿ ವಾಡಿಕೆಗಿಂತ ಹೆಚ್ಚು ಮಳೆಯಾಗುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮಾಹಿತಿ ನೀಡಿದೆ. ಒಂದು ವೇಳೆ ನಿರೀಕ್ಷೆಗೂ ಮೀರಿ ಮಳೆ ಬಂದರೆ ಅವಾಂತರಗಳೂ ಸಂಭವಿಸುವ ಸಾಧ್ಯತೆಗಳಿವೆ. ಇದನ್ನೂ ಓದಿ: ಬಿಜೆಪಿ, ಎನ್‌ಡಿಎ ಸರ್ಕಾರ ಅಲ್ಪಸಂಖ್ಯಾತ ವಿರೋಧಿಗಳು – ವಕ್ಫ್ ಕಾಯ್ದೆ ತಿದ್ದುಪಡಿ ಮಸೂದೆ ಮಂಡನೆಗೆ ಸಿಎಂ ಆಕ್ಷೇಪ