ಬೆಂಗಳೂರು: ಕರಾವಳಿ ಭಾಗದಲ್ಲಿ ಇನ್ನೂ ಮೂರು ದಿನ ಮಳೆ ಅಬ್ಬರಿಸುವ ಸಾಧ್ಯತೆಯಿದೆ.
ಕರಾವಳಿಯ ಎಲ್ಲಾ ಜಿಲ್ಲೆಗಳಿಗೂ ಇಂದು ಆರೆಂಜ್ ಅಲರ್ಟ್, ನಾಳೆ ರೆಡ್ ಅಲರ್ಟ್, ಆ.6 ರಂದು ಆರೆಂಜ್ ಅಲರ್ಟ್, ಅ.7 ಮತ್ತು 8 ರಂದು ಯಲ್ಲೋ ಅಲರ್ಟ್ ಜಾರಿಯಾಗಿದೆ.
Advertisement
Advertisement
ಇಂದು ಉತ್ತರ ಒಳನಾಡಿನ ಬಾಗಲಕೋಟೆ, ಬೆಳಗಾವಿ, ಬೀದರ್, ಗದಗ, ಕಲಬುರಗಿ ವಿಜಯಪುರ ಜಿಲ್ಲೆಗಳಿಗೆ ಯಲ್ಲೋ ಅಲರ್ಟ್, ನಾಳೆ ಬೆಳಗಾವಿ, ಧಾರವಾಡ, ಗದಗ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಣೆಯಾಗಿದೆ.
Advertisement
ಇಂದು ದಕ್ಷಿಣ ಒಳನಾಡಿನ ಬೆಂಗಳೂರು ನಗರ, ಗ್ರಾಮಾಂತರ, ಹಾಸನ, ಮಂಡ್ಯ, ಮೈಸೂರು, ತುಮಕೂರು, ಚಾಮರಾಜನಗರ ಜಿಲ್ಲೆಗಳಿಗೆ ಯಲ್ಲೋ ಅಲರ್ಟ್ ಜಾರಿಯಾಗಿದ್ದರೆ, ಗುರುವಾರ ಕೊಡಗು, ಚಿಕ್ಕಮಗಳೂರು ಜಿಲ್ಲೆಗಳಿಗೆ ರೆಡ್ ಅಲರ್ಟ್ ಜಾರಿಯಾಗಿದೆ. ಇದನ್ನೂ ಓದಿ: ಕೊಡಗಿನ ದಬ್ಬಡ್ಕದಲ್ಲಿ ಮಧ್ಯರಾತ್ರಿ ಜಲಸ್ಫೋಟ – ಭಾರೀ ಶಬ್ದದೊಂದಿಗೆ ಸಮುದ್ರದಂತೆ ಉಕ್ಕಿ ಬಂದ ಪ್ರವಾಹ
Advertisement
ಎಷ್ಟು ಮಳೆಯಾಗುತ್ತೆ?
64.5 ಮಿ.ಮೀ ನಿಂದ 115.5 ಮಿ.ಮೀ ಒಳಗಡೆ ಮಳೆಯಾಗುವ ಸಾಧ್ಯತೆ ಇದ್ದರೆ ಯೆಲ್ಲೋ ಅಲರ್ಟ್ ಘೋಷಣೆಯಾಗುತ್ತದೆ. 115.6 ಮಿ.ಮೀ ನಿಂದ 204.4 ಮಿ.ಮೀ. ಒಳಗಡೆ ಮಳೆಯಾಗಲಿದ್ದರೆ ಆರೆಂಜ್ ಅಲರ್ಟ್ ಎಂದು ಪ್ರಕಟಿಸಲಾಗುತ್ತದೆ. 204.5 ಮಿ.ಮೀಗಿಂತ ಹೆಚ್ಚು ಮಳೆ ಬೀಳುವ ಸಾಧ್ಯತೆ ಇದ್ದರೆ ರೆಡ್ ಅಲರ್ಟ್ ಘೋಷಣೆ ಮಾಡಲಾಗುತ್ತದೆ.