ಬೆಂಗಳೂರು: ನಗರದ (Bengaluru) ಹಲವೆಡೆ ಸಂಜೆಯಾಗುತ್ತಿದ್ದಂತೆ ಮಳೆ (Rain) ಆರಂಭಗೊಂಡಿದ್ದು, ವಾಹನ ಸವಾರರು ಪರದಾಡಿದ್ದಾರೆ.
ಸದಾಶಿವನಗರ, ಮೆಖ್ರಿ ಸರ್ಕಲ್ ಸುತ್ತಮುತ್ತ, ಮೆಜೆಸ್ಟಿಕ್, ಶೇಷಾದ್ರಿಪುರಂ, ರೇಸ್ ಕೋರ್ಸ್, ರಾಜಾಜಿನಗರ, ಮಲ್ಲೇಶ್ವರಂ, ಶಿವಾಜಿನಗರ, ವಸಂತನಗರ ಭಾಗದಲ್ಲಿ ಗುಡುಗು-ಮಿಂಚು ಸಹಿತ ಜೋರು ಮಳೆಯಾಗುತ್ತಿದೆ. ಕೆಲಸ ಮುಗಿಸಿ ಮನೆಗೆ ಹೊರಟವರು ಮಳೆಯಿಂದ ಪರದಾಡಿದ್ದಾರೆ. ಇದನ್ನೂ ಓದಿ: ನೇರಳೆ ಮಾರ್ಗದ ಪ್ರಯಾಣಿಕರೇ ಗಮನಿಸಿ – ಭಾನುವಾರ ಬೆಳಿಗ್ಗೆ ಮೆಟ್ರೋ ಸಂಚಾರ ತಾತ್ಕಾಲಿಕ ವ್ಯತ್ಯಯ
ಕಾರ್ಪೋರೇಶನ್, ಕೆಆರ್ ಮಾರ್ಕೆಟ್, ಯುಬಿ ಸಿಟಿ, ರಿಚ್ಮಂಡ್ ಸರ್ಕಲ್, ಶಿವಾನಂದ ಸರ್ಕಲ್, ಜಯನಗರ, ಪ್ಯಾಲೇಸ್ ಗುಟ್ಟಹಳ್ಳಿ, ಲಾಲ್ ಬಾಗ್, ಜೆಪಿ ನಗರ, ಬನ್ನೇರುಘಟ್ಟ ರೋಡ್, ಮಲ್ಲೇಶ್ವರಂ, ರಾಜಾಜಿನಗರ, ಯಶವಂತಪುರ, ವಿಜಯನಗರ ಸೇರಿದಂತೆ ಹಲವೆಡೆ ಮಳೆಯಾಗುತ್ತಿದೆ.
ಶೇಷಾದ್ರಿಪುರಂ ಮುಖ್ಯ ರಸ್ತೆ ಜಲಾವೃತಗೊಂಡಿದ್ದು, ರಸ್ತೆ ತುಂಬಾ ನೀರು ಹರಿಯುತ್ತಿದೆ. ರಾಜಾಜಿನಗರ ವೆಸ್ಟ್ ಆಫ್ ಕಾರ್ಡ್ ರೋಡ್, ಶಿವಾನಂದ ಸರ್ಕಲ್ ಅಂಡರ್ ಪಾಸ್‌ನಲ್ಲಿ ಮಳೆ ನೀರು ಉಕ್ಕಿ ಹರಿಯುತ್ತಿದೆ. ಇದರಿಂದ ಶಿವಾನಂದ ಸರ್ಕಲ್ ಸುತ್ತಮುತ್ತ ಭಾರೀ ಟ್ರಾಫಿಕ್ ಜಾಮ್ ಉಂಟಾಗಿದೆ.
ನಗರದಲ್ಲಿ ಮುಂದಿನ 3 ಗಂಟೆ ಜೋರು ಮಳೆಯ ಮುನ್ಸೂಚನೆ ನೀಡಲಾಗಿದೆ. ಬೆಂಗಳೂರು ನಗರ, ಗ್ರಾಮಾಂತರ, ರಾಮನಗರ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಇದನ್ನೂ ಓದಿ: ಬೆಂಗಳೂರಿನ ಹಲವೆಡೆ ಭಾರೀ ಮಳೆ – ರಸ್ತೆ ಮೇಲೆ ಹರಿದ ನೀರು, ವಾಹನ ಸವಾರರ ಪರದಾಟ
