ಮಂಗಳೂರು: ಸರಣಿ ಹತ್ಯೆಯಿಂದ ಬೂದಿ ಮುಚ್ಚಿದ ಕೆಂಡದಂತಿರುವ ದಕ್ಷಿಣ ಕನ್ನಡದಲ್ಲಿ ಈಗ ವರುಣ ಅಬ್ಬರಿಸುತ್ತಿದ್ದಾನೆ.
ಜಿಲ್ಲೆಯಲ್ಲಿ ಗುಡುಗು ಸಹಿತ ಭಾರಿ ಮಳೆ ಆಗುತ್ತಿದ್ದು, ಮಂಗಳೂರು, ಉಳ್ಳಾಲ, ಬಂಟ್ವಾಳ, ಮೂಡುಬಿದ್ರೆ ಅಂಗನವಾಡಿ, ಪ್ರಾಥಮಿಕ, ಪ್ರೌಢಶಾಲೆಗಳಿಗೆ ರಜೆ ಜಿಲ್ಲಾಧಿಕಾರಿ ಡಾ.ಕೆ.ವಿ ರಾಜೇಂದ್ರ ರಜೆ ಘೋಷಿಸಿದ್ದಾರೆ.
Advertisement
Advertisement
ಪುತ್ತೂರು, ಸುಳ್ಯ, ಬೆಳ್ತಂಗಡಿ ವ್ಯಾಪ್ತಿಯ ತಹಶೀಲ್ದಾರರು, ಬಿಇಒ ಪರಿಸ್ಥಿತಿ ನೋಡಿ ರಜೆ ನಿರ್ಧರಿಸುವಂತೆ ಸೂಚಿಸಲಾಗಿದೆ. ಮುನ್ನೆಚ್ಚರಿಕೆ ಕ್ರಮವಾಗಿ ಇಂದು ಜಿಲ್ಲಾಡಳಿತ ರಜೆ ಘೋಷಿಸಿದೆ. ಇದನ್ನೂ ಓದಿ: 1,100 ಎನ್‌ಕೌಂಟರ್ ಪೊಲೀಸರಿಂದಲೇ ಮಾಡಿಸ್ತೇವೆ – ಹಿಂದೂ ಸಮಾಜದ ಮುಖಂಡ
Advertisement
ರಾಜ್ಯದ ದಕ್ಷಿಣ ಒಳನಾಡಿನಲ್ಲಿ ಮುಂದಿನ 2 ದಿನಗಳ ಕಾಲ ಭಾರೀ ಮಳೆ ಆಗುವ ಬಗ್ಗೆ ಹವಾಮಾನ ಇಲಾಖೆ ಮುನ್ನೆಚ್ಚರಿಕೆ ನೀಡಿದೆ.