ಬೆಂಗಳೂರು: ರಾಜ್ಯಕ್ಕೆ ಜೂ.5 ರಂದು ಮುಂಗಾರು ಪ್ರವೇಶಿಸಲಿದೆ ಎಂದು ಹವಾಮಾನ ಇಲಾಖೆ (IMD) ಮುನ್ಸೂಚನೆ ನೀಡಿದೆ.
ಈ ಬಾರಿ ಮುಂಗಾರು ಪ್ರವೇಶ ತಡ ಆಗಲಿದೆ ಎನ್ನಲಾಗಿತ್ತು. ಆದರೆ ತಡ ಆಗಿಲ್ಲ ಸರಿಯಾದ ಸಮಯಕ್ಕೆ ಮುಂಗಾರು ಪ್ರವೇಶಿಸುತ್ತಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ. ಇದನ್ನೂ ಓದಿ: ಕರಾವಳಿಯಲ್ಲಿ ಜೂ.3 ರಿಂದ 5ರ ವರೆಗೆ ಭಾರೀ ಮಳೆ ಮುನ್ಸೂಚನೆ – ಯೆಲ್ಲೋ ಅಲರ್ಟ್ ಘೋಷಣೆ
ಇಂದಿನಿಂದ (ಜೂ.2) ಮುಂದಿನ ಐದು ದಿನಗಳ ಕಾಲ ರಾಜ್ಯದ ಹಲವೆಡೆ (Rain) ಮಳೆಯಾಗಲಿದೆ. ಗದಗ, ಮೈಸೂರು ಸೇರಿ ಎಂಟು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಜೂ.3 ರಂದು ಬೆಂಗಳೂರಿನಲ್ಲಿ (Bengaluru) ಸಾಧಾರಣ ಮಳೆ ಆಗುವ ಸಾಧ್ಯತೆ ಇದೆ ಎಂದು ಇಲಾಖೆ ಮುನ್ಸೂಚನೆ ನೀಡಿದೆ.
ರಾಜ್ಯದ ಕರಾವಳಿ ಜಿಲ್ಲೆಗಳಲ್ಲಿ ಜೂ.3 ರಿಂದ ಜೂ.5ರ ವರೆಗೆ ಹಾಗೂ ಒಳನಾಡು ಜಿಲ್ಲೆಗಳಲ್ಲಿ ಜೂ.1 ರಿಂದ 4ರ ವರೆಗೆ ಒಂದು ಅಥವಾ ಎರಡು ಸ್ಥಳಗಳಲ್ಲಿ ಭಾರಿ ಮಳೆಯಾಗುವ (Rain) ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ (IMD) ಮಾಹಿತಿ ನೀಡಿದೆ. ಇದನ್ನೂ ಓದಿ: ರಾಜ್ಯದ ಹಲವೆಡೆ ಗುಡುಗು, ಬಿರುಗಾಳಿ ಸಹಿತ ಭಾರೀ ಮಳೆ – ಜನಜೀವನ ಅಸ್ತವ್ಯಸ್ತ
