ರಾಜ್ಯಸಭೆ ಚುನಾವಣೆ ಫೈಟ್: ಗುರು, ಶಿಷ್ಯರ ಕಾಳಗದಲ್ಲಿ ಗೆದ್ದು ಬೀಗಿದ ಸಿದ್ದರಾಮಯ್ಯ – ಹೆಚ್‍ಡಿಡಿಗೆ ಹಿನ್ನಡೆ

Advertisements

ನವದೆಹಲಿ: ರಾಜ್ಯದಲ್ಲಿ ರಾಜ್ಯಸಭೆ ಚುನಾವಣೆ ಕಾವು ಜೋರಾಗುತ್ತಿದ್ದು, ಕಾಂಗ್ರೆಸ್‍ನ ಎರಡನೇ ಅಭ್ಯರ್ಥಿ ಹಿಂದೆ ಸರಿಸುವ ಪ್ರಯತ್ನದಲ್ಲಿ ಮಾಜಿ ಪ್ರಧಾನಿ ಹೆಚ್.ಡಿ ದೇವೇಗೌಡರಿಗೆ ಹಿನ್ನಡೆಯಾಗಿದೆ. ಎರಡನೇ ಅಭ್ಯರ್ಥಿಯನ್ನು ಹಿಂದೆ ಸರಿಸುವ ವಿಚಾರದಲ್ಲಿ ಮಧ್ಯಪ್ರವೇಶಿಸಲು ಸಾಧ್ಯವಿಲ್ಲ ಎಂದು ಕಾಂಗ್ರೆಸ್ ಹೈಕಮಾಂಡ್ ಹೇಳಿದೆ.

Advertisements

ರಾಜ್ಯಸಭೆಯ ನಾಲ್ಕನೇ ಸ್ಥಾನಕ್ಕಾಗಿ ಮೂರು ಪಕ್ಷಗಳ ನಡುವೆ ಬಾರಿ ಪೈಪೋಟಿ ಏರ್ಪಟ್ಟಿದೆ. ಬಿಜೆಪಿ ಮೂರು ಅಭ್ಯರ್ಥಿಗಳನ್ನು ಕಣಕ್ಕಿಳಿಸದರೆ, ಜೆಡಿಎಸ್‍ನ ಇಕ್ಕಟ್ಟಿಗೆ ಸಿಲುಕಿಸಲು ಕಾಂಗ್ರೆಸ್ ಎರಡನೇ ಅಭ್ಯರ್ಥಿಯನ್ನು ಕಣಕ್ಕಿಳಿಸಿದೆ. ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಒತ್ತಡದ ಮೇರೆಗೆ ಹೈಕಮಾಂಡ್ ಎರಡನೇ ಅಭ್ಯರ್ಥಿಯಾಗಿ ಮನ್ಸೂರ್ ಅಲಿ ಖಾನ್ ಅವರನ್ನು ಕಣಕ್ಕಿಳಿಸಿತ್ತು. ಇದನ್ನೂ ಓದಿ:  ಉಪಚುನಾವಣೆ: ಉತ್ತರಾಖಂಡ್ ಸಿಎಂಗೆ ಧಾಮಿಗೆ ಭರ್ಜರಿ ಗೆಲುವು

Advertisements

ಮನ್ಸೂರ್ ಅಲಿ ಖಾನ್ ಸ್ಪರ್ಧೆಯಿಂದ ತನ್ನ ಪಾಲಿಗೆ ಬರಬಹುದಾದ ಒಂದು ಸ್ಥಾನವನ್ನು ಕಳೆದುಕೊಳ್ಳುವ ಭೀತಿಯಲ್ಲಿ ಜೆಡಿಎಸ್ ಇದ್ದು, ಈ ಹಿನ್ನೆಲೆ ಎಐಸಿಸಿ ಅಧ್ಯಕ್ಷೆ ಸೋನಿಯಾಗಾಂಧಿ ಜೊತೆಗೆ ಹೆಚ್.ಡಿ ದೇವೇಗೌಡ ದೂರವಾಣಿಯಲ್ಲಿ ಮಾತುಕತೆ ನಡೆಸಿದ್ದರು. ಇತ್ತ ದೆಹಲಿಯಲ್ಲಿ ಜೆಡಿಎಸ್ ಅಭ್ಯರ್ಥಿ ಕುಪೇಂದ್ರ ರೆಡ್ಡಿ ಕಾಂಗ್ರೆಸ್ ಹಿರಿಯ ನಾಯಕ ಮಲ್ಲಿಕಾರ್ಜುನ ಖರ್ಗೆ ಮೂಲಕ ಸೋನಿಯಾಗಾಂಧಿ ಅವರನ್ನು ಭೇಟಿ ಮಾಡಿ ಬೆಂಬಲಕ್ಕೆ ಮನವಿ ಮಾಡಿದರು.

Advertisements

ಇದಕ್ಕೆ ಉತ್ತರಿಸಿರುವ ಸೋನಿಯಾಗಾಂಧಿ ರಾಜ್ಯಸಭೆ ಚುನಾವಣೆ ವಿಚಾರದಲ್ಲಿ ಮಧ್ಯಪ್ರವೇಶ ಮಾಡುವುದಿಲ್ಲ, ಸ್ಥಳೀಯ ನಾಯಕರು ಈ ಬಗ್ಗೆ ಅಂತಿಮ ನಿರ್ಧಾರ ಕೈಗೊಳ್ಳಲಿದ್ದಾರೆ ಎಂದು ಸ್ಪಷ್ಟವಾಗಿ ತಿಳಿಸಿದ್ದಾರೆ. ಏನೇ ಮಾತುಕತೆ ಇದ್ದರೂ ಸಿದ್ದರಾಮಯ್ಯ ಮತ್ತು ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಹಾಗೂ ಉಸ್ತುವಾರಿ ರಣದೀಪ್ ಸುರ್ಜೆವಾಲ ಜೊತೆಗೆ ನಡೆಸಿ ಎಂದು ಸೋನಿಯಾಗಾಂಧಿ ಹೇಳಿದ್ದಾರೆ ಎಂದು ಮೂಲಗಳು ಹೇಳಿವೆ. ಇದನ್ನೂ ಓದಿ:  ಸೋನಿಯಾ ಗಾಂಧಿ ಬಳಿಕ ಪ್ರಿಯಾಂಕಾ ಗಾಂಧಿಗೂ ಕೊರೊನಾ

ಎರಡನೇ ಅಭ್ಯರ್ಥಿಯನ್ನು ಹಿಂದೆ ಪಡೆಯುವ ಪ್ರಶ್ನೆ ಇಲ್ಲ, ಜೆಡಿಎಸ್ ಜೊತೆಗೆ ಹೊಂದಾಣಿಕೆಯ ಮಾತೇ ಇಲ್ಲ ಎಂದು ಸಿದ್ದರಾಮಯ್ಯ ಸ್ಪಷ್ಟವಾಗಿ ಹೇಳಿದ್ದರು. ಇದಕ್ಕೆ ತಿರುಗೇಟು ನೀಡಿದ್ದ ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಕಾಂಗ್ರೆಸ್ ಜೊತೆಗೆ ಮೈತ್ರಿ ಇಲ್ಲ ಎಂದಿದ್ದರು. ಆದರೆ ಹೆಚ್.ಡಿ ದೇವೇಗೌಡರು ಹೈಕಮಾಂಡ್ ಮಟ್ಟದಲ್ಲಿ ಮಾತುಕತೆ ನಡೆಸುವ ಪ್ರಯತ್ನ ನಡೆಸಿದ್ದರು.

ಹೈಕಮಾಂಡ್‍ನ ಈ ನಿರ್ಧಾರದಿಂದ ಹೆಚ್.ಡಿ ದೇವೇಗೌಡರಿಗೆ ಭಾರೀ ಮುಖಭಂಗವಾಗಿದ್ದು, ಮಾಜಿ ಗುರು – ಶಿಷ್ಯರ ರಾಜಕೀಯ ಯುದ್ಧದಲ್ಲಿ ಶಿಷ್ಯ ಸಿದ್ದರಾಮಯ್ಯ ಗೆದ್ದು ಬೀಗುವಂತಾಗಿದೆ. ಜೂನ್ 10 ರಂದು ರಾಜ್ಯಸಭೆಯ ನಾಲ್ಕು ಸ್ಥಾನಗಳಿಗೆ ಚುನಾವಣೆ ನಡೆಯುತ್ತಿದ್ದು ಇಂದು ನಾಮಪತ್ರ ವಾಪಸ್ ಪಡೆಯಲು ಕಡೆಯ ದಿನವಾಗಿದೆ.

Advertisements
Exit mobile version