Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ತಿಂದ ಮನೆಗೆ ಕನ್ನ ಹಾಕಬೇಡಿ, ಗಂಟುಮೂಟೆ ಕಟ್ಟಿ ಹೊರಡಿ: ರಾಜ್ಯಪಾಲರ ವಿರುದ್ಧ ಕರವೇ ನಾರಾಯಣಗೌಡ ಕಿಡಿ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ತಿಂದ ಮನೆಗೆ ಕನ್ನ ಹಾಕಬೇಡಿ, ಗಂಟುಮೂಟೆ ಕಟ್ಟಿ ಹೊರಡಿ: ರಾಜ್ಯಪಾಲರ ವಿರುದ್ಧ ಕರವೇ ನಾರಾಯಣಗೌಡ ಕಿಡಿ

Bengaluru City

ತಿಂದ ಮನೆಗೆ ಕನ್ನ ಹಾಕಬೇಡಿ, ಗಂಟುಮೂಟೆ ಕಟ್ಟಿ ಹೊರಡಿ: ರಾಜ್ಯಪಾಲರ ವಿರುದ್ಧ ಕರವೇ ನಾರಾಯಣಗೌಡ ಕಿಡಿ

Public TV
Last updated: April 4, 2026 12:45 pm
Public TV
Share
4 Min Read
Thawar Chand Gehlot Narayana Gowda
SHARE

– ನಿಮ್ಮ ಅಧಿಕಪ್ರಸಂಗವನ್ನು ಕರ್ನಾಟಕದ ಜನತೆ ಒಪ್ಪಿಕೊಳ್ಳುವುದಿಲ್ಲ

ಬೆಂಗಳೂರು: ರಾಜ್ಯದಲ್ಲಿ ಎಸ್‌ಎಸ್‌ಎಲ್‌ಸಿ ಪರೀಕ್ಷೆಗಳಲ್ಲಿ ತೃತೀಯ ಭಾಷೆಗೆ ಗ್ರೇಡಿಂಗ್ (Hindi Language Grading) ನೀಡುವ ಸರ್ಕಾರದ ನಿರ್ಧಾರವನ್ನು ಮರುಪರಿಶೀಲಿಸುವಂತೆ ಮುಖ್ಯ ಕಾರ್ಯದರ್ಶಿಗಳಿಗೆ ಪತ್ರ ಬರೆದಿರುವ ರಾಜ್ಯಪಾಲ ತಾವರ್ ಚಂದ್ ಗೆಹ್ಲೋಟ್ (Thawar Chand Gehlot) ವಿರುದ್ಧ ಕರ್ನಾಟಕ ರಕ್ಷಣಾ ವೇದಿಕೆ (Karnataka Rakshana Vedike) ರಾಜ್ಯಾಧ್ಯಕ್ಷ ಟಿ.ಎ.ನಾರಾಯಣಗೌಡ (TA Narayana Gowda) ಕಿಡಿಕಾರಿದ್ದು, ತಿಂದ ಮನೆಗೆ ಕನ್ನ ಹಾಕಬೇಡಿ, ಗಂಟು ಮೂಟೆ ಕಟ್ಟಿ ಹೊರಡಿ ಎಂದು ಆಗ್ರಹಿಸಿದ್ದಾರೆ.

ಈ ಕುರಿತು ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ಅವರು, ನೀವು ಹಿಂದಿ ಸಾಮ್ರಾಜ್ಯಶಾಹಿಯ ಲಾಬಿಯ ಪರವಾಗಿ ಮಾತನಾಡುತ್ತಿದ್ದೀರಿ ಎಂಬುದು ನಮಗೆ ಚೆನ್ನಾಗಿ ಗೊತ್ತಿದೆ. ಕನ್ನಡಿಗರು ಔದಾರ್ಯವಂತರು. ನಮ್ಮ ನೆಲದಲ್ಲಿ ನಿಮಗೆ ಐಶಾರಾಮಿ ವ್ಯವಸ್ಥೆ ಕಲ್ಪಿಸಿಕೊಟ್ಟಿದ್ದೇವೆ. ಕನ್ನಡಿಗರ ತೆರಿಗೆ ದುಡ್ಡಿನಲ್ಲಿ ರಾಜಭವನ ನಡೆಯುತ್ತಿದೆ. ತಿಂದ ಮನೆಗೆ ಕನ್ನ ಹಾಕುವುದು ತರವಲ್ಲ. ಇದೇ ಅಧಿಕಪ್ರಸಂಗವನ್ನು ಮುಂದುವರೆಸಿದರೆ ರಾಜ್ಯಪಾಲರೇ, ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ ಎಂದು ನಾವು ಹೇಳಬೇಕಾಗುತ್ತದೆ ಎಂದು ಖಾರವಾಗಿ ನುಡಿದಿದ್ದಾರೆ. ಇದನ್ನೂ ಓದಿ: ಆಟೋ ಚಾಲಕರಿಗೆ ಸಮಸ್ಯೆ; ಈ ಸಮಸ್ಯೆ ನಾವ್ಯಾರು ಬಯಸಿ ಬಂದಿರೋದಲ್ಲ: ಹೆಚ್‌ಡಿಕೆ

ಕರ್ನಾಟಕ ಸರ್ಕಾರಕ್ಕೆ ನೀವು ಬರೆದ ಪತ್ರದ ಕುರಿತ ಮಾಧ್ಯಮ ವರದಿಗಳನ್ನು ಗಮನಿಸಿದೆ. ನೀವು ಹೇಳಿದ್ದೀರಿ. ನಿಮ್ಮ ಈ ಪತ್ರ, ಈ ಹಸ್ತಕ್ಷೇಪ ಒಕ್ಕೂಟ ವ್ಯವಸ್ಥೆಯನ್ನು ಅಣಕಿಸುವಂತೆ ಇದೆ. ನಿಮ್ಮ ಅಧಿಕಪ್ರಸಂಗವನ್ನು ಕರ್ನಾಟಕದ ಜನತೆ ಒಪ್ಪಿಕೊಳ್ಳುವುದಿಲ್ಲ. ರಾಜ್ಯಪಾಲರು ಸರ್ಕಾರದ ಪದನಿಮಿತ್ತ ಮುಖ್ಯಸ್ಥರು ಎಂಬುದನ್ನು ನೀವು ಮರೆತಿದ್ದೀರಿ. ನೀವು ನಮ್ಮಿಂದ ನೇರವಾಗಿ ಆಯ್ಕೆಯಾದ ಜನಪ್ರತಿನಿಧಿಯಲ್ಲ. ಒಂದು ಸರ್ಕಾರ ಬಹುಮತದೊಂದಿಗೆ ಸದೃಢವಾಗಿ ಕಾರ್ಯ ನಿರ್ವಹಿಸುತ್ತಿರುವಾಗ ದೈನಂದಿನ ಆಡಳಿತದಲ್ಲಿ ಮೂಗು ತೂರಿಸಲು ನಿಮಗೆ ಯಾವುದೇ ನೈತಿಕ ಅಧಿಕಾರವಿಲ್ಲ, ಸಾಂವಿಧಾನಿಕ ಹೊಣೆಗಾರಿಕೆಯಿಲ್ಲ. ಅದು ನಿಮ್ಮ ವ್ಯಾಪ್ತಿಯ ಕೆಲಸವೂ ಅಲ್ಲ ಎಂದು ವಾಗ್ದಾಳಿ ನಡೆಸಿದ್ದಾರೆ. ಇದನ್ನೂ ಓದಿ: ದೇಶದಲ್ಲೇ ಅತಿ ಹೆಚ್ಚು – ಬೆಂಗಳೂರಿಂದ 272 ಅಕ್ರಮ ಬಂಗ್ಲಾ ವಲಸಿಗರು ಗಡಿಪಾರು

Thawar Chand Gehlot

ರಾಜ್ಯದ ಶಿಕ್ಷಣ ವ್ಯವಸ್ಥೆಯಲ್ಲಿ ಕಾಲಕಾಲಕ್ಕೆ ಬದಲಾವಣೆ ಮಾಡುವ ಸಂವಿಧಾನಬದ್ಧ ಹಕ್ಕು ರಾಜ್ಯ ಸರ್ಕಾರಕ್ಕಿದೆ. ಸರ್ಕಾರ ಈಗ ಗ್ರೇಡಿಂಗ್ ವ್ಯವಸ್ಥೆ ಜಾರಿಗೆ ತರುತ್ತಿರುವುದಕ್ಕೆ ಸಾಕಷ್ಟು ಕಾರಣಗಳಿವೆ. ಇದರ ಸಾಧಕ ಬಾಧಕಗಳನ್ನು ನಮ್ಮ ಜನಪ್ರತಿನಿಧಿಗಳು ನೋಡಿಕೊಳ್ಳುತ್ತಾರೆ. ಬೆಂಗಳೂರು ಸ್ಥಳೀಯ ಭಾಷೆಗಳ ಸಂರಕ್ಷಣಾ ಸಂಘದವರು ನಿಮಗೆ ಕೊಟ್ಟಿದ್ದಾರೆ ಎನ್ನಲಾದ ಮನವಿಗೆ ತುರ್ತಾಗಿ ಪ್ರತಿಕ್ರಿಯಿಸಿರುವುದನ್ನು ಕೇಳಿ ಆಶ್ಚರ್ಯವಾಯಿತು. ಬೆಂಗಳೂರಿನಲ್ಲಿ ಇಂಥದ್ದೊಂದು ಸಂಘ ಇದೆ ಎಂಬುದೇ ನಮಗೆ ತಿಳಿದಿರಲಿಲ್ಲ. ಈ ರೀತಿಯ ನಾಟಕಗಳನ್ನು ನಾವು ಎಷ್ಟೋ ನೋಡಿದ್ದೇವೆ. ಇಂಥ ಕುತಂತ್ರಗಳು ಕರ್ನಾಟಕಕ್ಕೆ ಹೊಸದೇನೂ ಅಲ್ಲ. ಮರೆಯಲ್ಲಿ ನಿಂತು ಬಾಣ ಬಿಡುವ ಈ ಹೇಡಿಗಳು ಬೀದಿಗೆ ಬರಲಿ ಎಂದು ನಾವೂ ಕಾಯುತ್ತಿದ್ದೇವೆ ಎಂದು ಎಚ್ಚರಿಸಿದ್ದಾರೆ. ಇದನ್ನೂ ಓದಿ: ಬಗೆದಷ್ಟು ಬಯಲಾಗ್ತಿದೆ ಜಿಮ್ ಟ್ರೈನರ್ ಬಂಡವಾಳ – 8 ರಿಂದ 10 ಬಾರಿ ಗರ್ಭಪಾತದ ಮಾತ್ರೆ ನೀಡಿದ್ದ ಸಮೀರ್

ರಾಜ್ಯಪಾಲರ ಹುದ್ದೆ ಎಂಬುದೇ ಪ್ರಜಾಪ್ರಭುತ್ವ ವ್ಯವಸ್ಥೆ ಒಳಗೆ ನುಸುಳಿಕೊಂಡಿರುವ ರಾಜಶಾಹಿ ವ್ಯವಸ್ಥೆಯ ಒಂದು ಪಳೆಯುಳಿಕೆ. ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಜನರೇ ಪ್ರಭುಗಳು. ಇನ್ಯಾರೋ ಇಲ್ಲಿ ರಾಜರಂತೆ ಮೆರೆಯುವುದು ಸಾಧ್ಯವಿಲ್ಲ. ನಿಮ್ಮ ಈ ಅಧಿಕಪ್ರಸಂಗದ ಪತ್ರ ರಾಜ್ಯಪಾಲರ ವ್ಯವಸ್ಥೆ ನಮ್ಮ ದೇಶಕ್ಕೆ ಬೇಕೇ ಎಂಬ ಪ್ರಶ್ನೆಯನ್ನು ಮತ್ತೆ ಮುನ್ನೆಲೆಗೆ ತಂದಂತಾಗಿದೆ ಎಂದು ಹರಿಹಾಯ್ದಿದ್ದಾರೆ. ಇದನ್ನೂ ಓದಿ: ಪ್ರಜ್ಞೆ ತಪ್ಪಿದ್ದು ನಾನು, ರೆಕಾರ್ಡ್ ಮಾಡಿದ್ದು ಆಕೆ, ವೀಡಿಯೋಗಳೆಲ್ಲ ಅವಳ ಫೋನ್‌ನಲ್ಲಿದೆ: ಟ್ವಿಸ್ಟ್‌ ಕೊಟ್ಟ ಸಮೀರ್‌

ಜನರಿಂದ ಆಯ್ಕೆಯಾದ ಸರ್ಕಾರದ ದೈನಂದಿನ ಆಡಳಿತದ ತೀರ್ಮಾನದ ಕುರಿತು ಪತ್ರ ಬರೆಯಲು ನಿಮಗೆ ಯಾವುದೇ ಹಕ್ಕಿಲ್ಲ. ಒಂದು ವೇಳೆ ನೀವು ಸಾಮಾನ್ಯ ನಾಗರಿಕರಾಗಿ ಈ ಪತ್ರವನ್ನು ಬರೆದಿದ್ದರೆ, ಮೊದಲು ಉತ್ತರದ ರಾಜ್ಯಗಳ ಮುಖ್ಯಮಂತ್ರಿಗಳಿಗೆ ಪತ್ರ ಬರೆದು ತ್ರಿಭಾಷಾ ನೀತಿ ಅನ್ವಯ ಕನ್ನಡವನ್ನು ಮೂರನೇ ಭಾಷೆಯನ್ನಾಗಿ ಅಲ್ಲಿನ ಮಕ್ಕಳಿಗೆ ಕಲಿಸಲು ಹೇಳಿ ಎಂದು ಸಲಹೆ ನೀಡಿರುವ ನಾರಾಯಣಗೌಡರು, ನಿಮಗೆ ಆ ಧೈರ್ಯವಿಲ್ಲದಿದ್ದರೆ ಕನ್ನಡಿಗರ ಹಿತಾಸಕ್ತಿಗೆ ವಿರುದ್ಧವಾಗಿ ಕರ್ನಾಟಕದ ನೆಲದಲ್ಲಿ ನಿಂತು ಮಾತನಾಡಬೇಡಿ. ತೃತೀಯ ಭಾಷೆಯ ಮೇಲಿನ ಪ್ರೇಮವನ್ನು ಉತ್ತರ ಭಾರತದ ರಾಜ್ಯಗಳಲ್ಲಿ ಉಕ್ಕಿ ಹರಿಸಿ. ಪಾಪ, ಅಲ್ಲಿನ ಮಕ್ಕಳು ಇದುವರೆಗೆ ಎರಡೇ ಭಾಷೆಗಳನ್ನು ಓದಿಕೊಂಡು ಬಂದಿದ್ದಾರೆ ಎಂದು ಹೇಳಿದ್ದಾರೆ. ಇದನ್ನೂ ಓದಿ: ಲವ್ ಜಿಹಾದ್ ಕೇಸಲ್ಲಿ ಜಿಮ್ ಟ್ರೈನರ್‌ಗೆ ಸಂಕಷ್ಟ – ಲೈಂಗಿಕ ದೌರ್ಜನ್ಯ ಕೇಸ್ ದಾಖಲಿಸಿದ ಸಂತ್ರಸ್ತೆ

Karave Narayanagowda

ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿಗಳಿಗೆ ನೀವು ಬರೆದಿರುವ ಪತ್ರವನ್ನು ಕೂಡಲೇ ಹಿಂದಕ್ಕೆ ಪಡೆಯಿರಿ. ಸರ್ಕಾರ ಶಿಕ್ಷಣ ತಜ್ಞರ ಅಭಿಪ್ರಾಯ ಪಡೆದು ಗ್ರೇಡಿಂಗ್ ವ್ಯವಸ್ಥೆ ಜಾರಿಗೆ ತಂದಿದೆ. ದಶಕಗಳಿಂದ ಕನ್ನಡದ ಜನತೆಯನ್ನುಕಾಡುತ್ತಿದ್ದ ಶಾಪ ವಿಮೋಚನೆಯಾಗಿದೆ. ಒಂದು ವೇಳೆ ಇದನ್ನು ಜಾರಿಗೆ ತರುವುದನ್ನು ತಡೆಯಲು ಯಾರೇ ಯತ್ನಿಸಿದರೂ ಕರ್ನಾಟಕದಲ್ಲಿ ಧಗಧಗಿಸುವ ಕ್ರಾಂತಿಯ ಜ್ವಾಲೆ ಹೊತ್ತಿಕೊಳ್ಳಲಿದೆ ಎಂದು ಎಚ್ಚರಿಕೆ ನೀಡಿದ್ದಾರೆ. ಇದನ್ನೂ ಓದಿ: ಸರ್ಕಾರಿ ಬಸ್‌ಗೆ ಗುದ್ದಿದ ಡೆಪ್ಯುಟಿ ಸ್ಪೀಕರ್ ರುದ್ರಪ್ಪ ಲಮಾಣಿ ಎಸ್ಕಾರ್ಟ್ ವಾಹನ; ಕೇಸ್‌ ದಾಖಲು

ಮಾನ್ಯ ರಾಜ್ಯಪಾಲರೇ, ನಿಮ್ಮ ಕೆಲಸ ನೀವು ನೋಡಿಕೊಳ್ಳಿ. ಹಿಂಬಾಗಿಲಿನಲ್ಲಿ ಬಂದು ಆಡಳಿತ ಮಾಡುವ ಯತ್ನ ಮಾಡಬೇಡಿ, ನಿಮಗೆ ಆ ಅಧಿಕಾರವನ್ನು ಕರ್ನಾಟಕದ ಜನತೆ ಕೊಟ್ಟಿಲ್ಲ. ರಾಜಭವನದಲ್ಲಿ ನಿಮ್ಮ ಉಪಚಾರಕ್ಕೆ ಏನಾದರೂ ಕೊರತೆಯಾಗಿದ್ದರೆ ಕೇಳಿ, ವ್ಯವಸ್ಥೆ ಮಾಡಿಕೊಡೋಣ. ಬೇರೆ ಉಸಾಬರಿಯನ್ನು ನಮ್ಮ ಜನಪ್ರತಿನಿಧಿಗಳು ನೋಡಿಕೊಳ್ಳುತ್ತಾರೆ ಎಂದು ವ್ಯಂಗ್ಯವಾಗಿ ನುಡಿದಿದ್ದಾರೆ. ಇದನ್ನೂ ಓದಿ: ಕೇರಳದಲ್ಲಿ ಚುನಾವಣಾ ಪ್ರಚಾರಕ್ಕೆ ತೆರಳಿದ್ದ ಶಶಿ ತರೂರ್ ಮೇಲೆ ಹಲ್ಲೆಗೆ ಯತ್ನ – ಐವರ ವಿರುದ್ಧ FIR

TAGGED:bengaluruhindiHindi GradingKarnataka rakshana vedikeTA Narayana Gowdathawar chand gehlotಕರವೇಟಿ.ಎ.ನಾರಾಯಣಗೌಡಥಾವರ್ ಚಂದ್ ಗೆಹ್ಲೋಟ್ಬೆಂಗಳೂರುಹಿಂದಿ ಗ್ರೇಡಿಂಗ್ಹಿಂದಿ ಭಾಷೆ
Share This Article
Facebook Whatsapp Whatsapp Telegram

Cinema news

Ranbir Kapoor Yash Sai Pallavi
ಟೀಸರ್‌ ರಿಲೀಸ್‌ ಬೆನ್ನಲ್ಲೇ ‘ರಾಮಾಯಣ’ ನಟರ ಸಂಭಾವನೆ ಬಹಿರಂಗ – ರಣಬೀರ್‌ಗೆ 150 ಕೋಟಿ, ಯಶ್‌ಗೆ ಎಷ್ಟು?
Bollywood Cinema Latest Top Stories
Parliament House witnessed Azad Bharat screening in honor of Netaji Subhas Chandra Bose 1
ನೇತಾಜಿ ಗೌರವಾರ್ಥ ಆಜಾದ್ ಭಾರತ್ ಚಿತ್ರ ಪ್ರದರ್ಶನಕ್ಕೆ ಸಂಸತ್ ಭವನ ಸಾಕ್ಷಿ
Cinema Latest National Top Stories
Ramayana
`ರಾಮಾಯಣ’ ಟೀಸರ್ ರಿಲೀಸ್ – ಮರ್ಯಾದಾ ಪುರುಷೋತ್ತಮನ ಗೆಟಪ್‌ನಲ್ಲಿ ಕಂಗೊಳಿಸಿದ ರಣಬೀರ್
Bollywood Cinema Latest Top Stories
Malayalam director Ranjith
ನಟಿ ಮೇಲೆ ಲೈಂಗಿಕ ದೌರ್ಜನ್ಯ ಆರೋಪ – ಮಲಯಾಳಂ ನಿರ್ದೇಶಕ ರಂಜಿತ್ ಅರೆಸ್ಟ್
Cinema Latest Main Post National South cinema

You Might Also Like

Virat Kohli And Mr Nags
Bengaluru City

ನಾನು ವಿದೇಶಿ ಆಟಗಾರನಾ? – ಕಾಲೆಳೆದ ಮಿಸ್ಟರ್‌ ನಾಗ್ಸ್‌ ಬುಡಕ್ಕೆ ಬೆಂಕಿಯಿಟ್ಟ ಕೊಹ್ಲಿ; ವಿಡಿಯೋ ಫುಲ್‌ ವೈರಲ್‌

Public TV
By Public TV
3 minutes ago
HD Kumaraswamy
Districts

ಆಟೋ ಚಾಲಕರಿಗೆ ಸಮಸ್ಯೆ; ಈ ಸಮಸ್ಯೆ ನಾವ್ಯಾರು ಬಯಸಿ ಬಂದಿರೋದಲ್ಲ: ಹೆಚ್‌ಡಿಕೆ

Public TV
By Public TV
30 minutes ago
Hubballi Love Jihad Case 1
Crime

ಬಗೆದಷ್ಟು ಬಯಲಾಗ್ತಿದೆ ಜಿಮ್ ಟ್ರೈನರ್ ಬಂಡವಾಳ – 8 ರಿಂದ 10 ಬಾರಿ ಗರ್ಭಪಾತದ ಮಾತ್ರೆ ನೀಡಿದ್ದ ಸಮೀರ್

Public TV
By Public TV
34 minutes ago
Hubballi Love Jihad Gym Trainer Sameer
Crime

ಪ್ರಜ್ಞೆ ತಪ್ಪಿದ್ದು ನಾನು, ರೆಕಾರ್ಡ್ ಮಾಡಿದ್ದು ಆಕೆ, ವೀಡಿಯೋಗಳೆಲ್ಲ ಅವಳ ಫೋನ್‌ನಲ್ಲಿದೆ: ಟ್ವಿಸ್ಟ್‌ ಕೊಟ್ಟ ಸಮೀರ್‌

Public TV
By Public TV
55 minutes ago
Bangladesh Tripura Border
Bengaluru City

ದೇಶದಲ್ಲೇ ಅತಿ ಹೆಚ್ಚು – ಬೆಂಗಳೂರಿಂದ 272 ಅಕ್ರಮ ಬಂಗ್ಲಾ ವಲಸಿಗರು ಗಡಿಪಾರು

Public TV
By Public TV
1 hour ago
Hubballi Love Jihad 1
Crime

ಲವ್ ಜಿಹಾದ್ ಕೇಸಲ್ಲಿ ಜಿಮ್ ಟ್ರೈನರ್‌ಗೆ ಸಂಕಷ್ಟ – ಲೈಂಗಿಕ ದೌರ್ಜನ್ಯ ಕೇಸ್ ದಾಖಲಿಸಿದ ಸಂತ್ರಸ್ತೆ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?