ಚಿಕ್ಕಬಳ್ಳಾಪುರ: ಕರ್ನಾಟಕ ರಕ್ಷಣಾ ವೇದಿಕೆ ಅಧ್ಯಕ್ಷ ನಾರಾಯಣಗೌಡ (Narayana Gowda) ಸೇರಿದಂತೆ 36 ಮಂದಿಗೆ ಜಾಮೀನು ಮಂಜೂರಾಗಿದೆ. ದೇವನಹಳ್ಳಿಯ 5ನೇ ಅಪರ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಜಾಮೀನು ಮಂಜೂರು ಮಾಡಿ ಆದೇಶ ಹೊರಡಿಸಿದೆ.
ಜಾಮೀನು ಮಂಜೂರಾದರೂ ಇಂದು ನಾರಾಯಣಗೌಡರ ಬಿಡುಗಡೆ ಇಲ್ಲದಂತಾಗಿದ್ದು, ಬಹುತೇಕ ಸೋಮವಾರ ಸಂಜೆ ಬಿಡುಗಡೆಯಾಗುವ ಸಾಧ್ಯತೆ ಇದೆ. ಇದನ್ನೂ ಓದಿ: ನಾರಾಯಣಗೌಡ ಸೇರಿದಂತೆ ಎಲ್ಲಾ ಕಾರ್ಯಕರ್ತರ ಬಿಡುಗಡೆ ಮಾಡಿ – ಡಿಸಿಎಂಗೆ ಕರವೇ ಮನವಿ
Advertisement
Advertisement
ಅನ್ಯ ಭಾಷೆಯ ನಾಮಫಲಕಗಳನ್ನು ಧ್ವಂಸಗೊಳಿಸಿ ಪ್ರತಿಭಟನೆ ಮಾಡಿದ ಪ್ರಕರಣದಲ್ಲಿ ಕರವೇ ಅಧ್ಯಕ್ಷ ನಾರಾಯಣಗೌಡ ಸೇರಿ ಅನೇಕರನ್ನು ಬಂಧಿಸಲಾಗಿತ್ತು. ಇದನ್ನು ಖಂಡಿಸಿ ಕನ್ನಡಪರ ಹೋರಾಟಗಾರರು ಪ್ರತಿಭಟನೆ ನಡೆಸಿದ್ದರು.
Advertisement
Advertisement
ಕರವೇ ರಾಜ್ಯಾಧ್ಯಕ್ಷ ನಾರಾಯಣಗೌಡ ಜಾಮೀನು ಅರ್ಜಿ ವಿಚಾರಣೆ ಇಂದು (ಶನಿವಾರ) ದೇವನಹಳ್ಳಿಯ 5ನೇ ಅಪರ ಜಿಲ್ಲಾ ಮತ್ತು ಸತ್ರ ನ್ಯಾಯಲಯಾದಲ್ಲಿ ನಡೆಯಿತು. ವಾದ ಪ್ರತಿವಾದ ಆಲಿಸಿದ ನ್ಯಾಯಾಧೀಶರಾದ ಬಿರಾದರ್ ದೇವೆಂದ್ರಪ್ಪ ಅವರು ಜಾಮೀನು ಮಂಜೂರು ಮಾಡಿ ಆದೇಶ ಹೊರಡಿಸಿದ್ದಾರೆ. ಇದನ್ನೂ ಓದಿ: ಜೈಲು ಸೇರಿದ್ದ 15 ಕರವೇ ಕಾರ್ಯಕರ್ತರು ಬಿಡುಗಡೆ