ಆಂಗ್ಲ ಭಾಷೆಯಲ್ಲಿದ್ದ ಜಾಹೀರಾತು ಫಲಕ ಹರಿದು ಆಕ್ರೋಶ; 50 ಕರವೇ ಕಾರ್ಯಕರ್ತರ ಬಂಧನ

Public TV
1 Min Read
karave protest

ಬೆಳಗಾವಿ: ಆಂಗ್ಲ ಭಾಷೆಯಲ್ಲಿದ್ದ ಜಾಹೀರಾತು ಫಲಕಗಳನ್ನು ಹರಿದು ಕರ್ನಾಟಕ ರಕ್ಷಣಾ ವೇದಿಕೆ (Karnataka Rakshana Vedike) ಕಾರ್ಯಕರ್ತರು ಆಕ್ರೋಶ ವ್ಯಕ್ತಪಡಿಸಿರುವ ಘಟನೆ ಬೆಳಗಾವಿಯಲ್ಲಿ (Belagavi) ನಡೆದಿದೆ.

ನಗರದ ವಿವಿಧ ಬಡಾವಣೆಗಳಲ್ಲಿ ಅಳವಡಿಸಿರುವ ಜಾಹೀರಾತು ಫಲಕಗಳಲ್ಲಿ ಕನ್ನಡ ಕಡೆಗಣಿಸಿದವರ ವಿರುದ್ಧ ಕ್ರಮ ಜರುಗಿಸಬೇಕು ಎಂದು ಆಗ್ರಹಿಸಿ ಕರವೇ (ಟಿ‌.ಎ‌‌.ನಾರಾಯಣಗೌಡ ಬಣ) ಕಾರ್ಯಕರ್ತರು ನಗರದ ರಾಣಿ ಚನ್ನಮ್ಮನ ವೃತ್ತದಲ್ಲಿ ಪ್ರತಿಭಟನೆ ನಡೆಸಿದರು. ಇದನ್ನೂ ಓದಿ: ಬೈಕ್ ಡಿಕ್ಕಿ- ವೃದ್ಧನ ತಲೆಯಲ್ಲಿದ್ದ ದಿನಸಿ ಚೀಲಕ್ಕೆ ಕೈತಾಗಿ ಬಿದ್ದಾಕೆಯ ಮೇಲೆ ಹರಿದ ಬಸ್!

karave protest belagavi

ಆಂಗ್ಲ ಭಾಷೆಯಲ್ಲಿದ್ದ ಹಲವು ಫಲಕಗಳನ್ನು ಹರಿದು ಆಕ್ರೋಶ ವ್ಯಕ್ತಪಡಿಸಿದ ಪ್ರತಿಭಟನಾಕಾರರು, ಜಿಲ್ಲಾಡಳಿತ ವಿರುದ್ಧ ಘೋಷಣೆ ಕೂಗಿದರು. ಅವರನ್ನು ತಡೆಯಲು ಪೊಲೀಸರು ಯತ್ನಿಸಿದಾಗ, ಪರಸ್ಪರ ವಾಗ್ವಾದ ನಡೆಯಿತು‌.

ವೃತ್ತದಲ್ಲೇ ಪ್ರತಿಭಟನೆ ಮುಂದುವರಿಸಿದ್ದ 50ಕ್ಕೂ ಅಧಿಕ ಕರವೇ ಕಾರ್ಯಕರ್ತರನ್ನ ಪೊಲೀಸರು ವಶಕ್ಕೆ ಪಡೆದುಕೊಂಡರು. ಸದ್ಯ ಬೆಳಗಾವಿ ಚೆನ್ನಮ್ಮ ವೃತ್ತದಲ್ಲಿ ಪೊಲೀಸರು ಬಿಗಿ ಭದ್ರತೆ ಕೈಗೊಂಡಿದ್ದಾರೆ. ಇದನ್ನೂ ಓದಿ: ಚೀಟಿ ತೋರಿಸಿ ಮಹಿಳೆಯ ಮಾಂಗಲ್ಯ ಕದ್ದೊಯ್ದ ಕಳ್ಳ – ಸಿಸಿಟಿವಿಯಲ್ಲಿ ಕೃತ್ಯ ಸೆರೆ

Share This Article