– ರಾಜ್ಯ ಸರ್ಕಾರದ ಪಂಚ ಗ್ಯಾರಂಟಿಗಳನ್ನು ಹಾಡಿಹೊಗಳಿದ ರಾಜ್ಯಪಾಲರು
ಬೆಂಗಳೂರು: ರಾಜ್ಯಗಳ ಒಟ್ಟು ಜಿಎಸ್‌ಟಿ (GST) ಆದಾಯದಲ್ಲಿ ಕರ್ನಾಟಕ (Karnataka) ದೇಶದಲ್ಲಿ ಎರಡನೇ ಸ್ಥಾನದಲ್ಲಿ ಇದೆ ಎಂದು ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ (Thawar Chand Gehlot) ಹೇಳಿದರು.
Advertisement
ಗಣರಾಜ್ಯೋತ್ಸವ ಅಂಗವಾಗಿ 30 ನಿಮಿಷಗಳ ಭಾಷಣ ಮಾಡಿದ ಅವರು, 24 ಪುಟಗಳ ಭಾಷಣ ಓದಿ ಸರ್ಕಾರದ ಸಾಧನೆಯನ್ನು ಜನರಿಗೆ ಸಂದೇಶ ಸಾರಿದರು. ಪ್ರಮುಖವಾಗಿ ಗ್ಯಾರಂಟಿ ಯೋಜನೆ ಸರ್ಕಾರದ ಸಾಧನೆ. ಗ್ಯಾರಂಟಿ ಯೋಜನೆಯ ಹೊರತಾಗಿಯೂ ರಾಜ್ಯದಲ್ಲಿ ಅಭಿವೃದ್ಧಿ ಕಾರ್ಯಕ್ರಮಗಳು ನಿಂತಿಲ್ಲ ಎಂದು ಸರ್ಕಾರ ರಾಜ್ಯಪಾಲರ ಮೂಲಕ ಸಂದೇಶ ಕೊಟ್ಟಿತು. ಇದನ್ನೂ ಓದಿ: 76ನೇ ಗಣರಾಜ್ಯೋತ್ಸವದ ಸಂಭ್ರಮ – ರಾಷ್ಟ್ರಪತಿಯಿಂದ ಧ್ವಜಾರೋಹಣ
Advertisement
Advertisement
ಕಾನೂನು ಸುವ್ಯವಸ್ಥೆಯೂ ಉತ್ತಮವಾಗಿದೆ ಎಂದು ವಿಪಕ್ಷಗಳಿಗೆ ರಾಜ್ಯಪಾಲರ ಭಾಷಣದ ಮೂಲಕ ಸರ್ಕಾರ ತಿರುಗೇಟು ನೀಡಿದೆ. ಅಲ್ಲದೇ ಕಾಂಗ್ರೆಸ್ ಸರ್ಕಾರ ಬಂದಾಗಿನಿಂದ ಯಾವೆಲ್ಲ ಅಭಿವೃದ್ಧಿ ಕೆಲಸ, ಅಭಿವೃದ್ಧಿ ಯೋಜನೆಗಳು ಜಾರಿ ಮಾಡಲಾಗಿದೆ ಎಂದು ಅಂಕಿಅಂಶಗಳ ಸಮೇತ ಸರ್ಕಾರ ತನ್ನ ಸಾಧನೆಯನ್ನು ಬಿಚ್ಚಿಟ್ಟಿದೆ ಎಂದು ತಿಳಿಸಿದರು. ಇದನ್ನೂ ಓದಿ: 76ನೇ ಗಣರಾಜ್ಯೋತ್ಸವದ ಸಂಭ್ರಮ – ಬೆಂಗಳೂರಿನಲ್ಲಿ ರಾಜ್ಯಪಾಲ ಗ್ಲೆಹ್ಲೋಟ್‌ರಿಂದ ಧ್ವಜಾರೋಹಣ
Advertisement
2024-25ನೇ ಸಾಲಿನಲ್ಲಿ 18.51 ಲಕ್ಷ ರೈತರಿಗೆ 15,612.24 ಕೋಟಿ ಮೌಲ್ಯದ ಅಲ್ಪಾವಧಿ ಬೆಳೆ ಸಾಲ ನೀಡಲಾಗಿದೆ. 39,439 ರೈತರಿಗೆ 1,165.12 ಕೋಟಿ ಮೌಲ್ಯದ ಮಧ್ಯಮ ಮತ್ತು ದೀರ್ಘಾವಧಿಯ ಕೃಷಿ ಸಾಲ ನೀಡಲಾಗಿದೆ. ಇತಿಹಾಸದಲ್ಲಿ ಮೊದಲ ಬಾರಿಗೆ ಕರ್ನಾಟಕ ಆಸ್ತಿ ಸಮೀಕ್ಷೆಗೆ ಡ್ರೋನ್ ಸರ್ವೆ ನಡೆಸಿ ಸ್ವಾಮಿತ್ವ ಯೋಜನೆ ಯಶಸ್ವಿಯಾಗಿ ಅನುಷ್ಠಾನ ಮಾಡಲಾಗಿದೆ. ಹಾಲು ಉತ್ಪಾದಕರ ಪ್ರೊತ್ಸಾಹ ಯೋಜನೆ ಅಡಿ 8.90 ಲಕ್ಷ ಹಾಲು ಉತ್ಪಾದಕರಿಗೆ 1,124.15 ಕೋಟಿ ಪ್ರೊತ್ಸಾಹ ಧನ ನೀಡಲಾಗಿದೆ. ಮತ್ಸ್ಯ ಯೋಜನೆ ಪರಿಹಾರ ಮೊತ್ತ 1,500 ರಿಂದ 3 ಸಾವಿರಕ್ಕೆ ಹೆಚ್ಚಿಸಲಾಗಿದೆ. ಪೌಷ್ಟಿಕಾಹಾರ ಯೋಜನೆ ಅಡಿ 12 ಪರಿಶಿಷ್ಟ ಸಮುದಾಯಗಳ 47,859 ಕುಟುಂಬಗಳಿಗೆ 120 ಕೋಟಿ ಪೌಷ್ಟಿಕ ಆಹಾರ ವಿತರಣೆ ಮಾಡಲಾಗಿದೆ. ದೇಶದಲ್ಲಿ ಮೊದಲ ಬಾರಿಗೆ ಕೆಎಸ್‌ಆರ್‌ಟಿಸಿ ನೌಕರರು ಅಪಘಾತದಲ್ಲಿ ಮೃತರಾದರೆ ಒಂದು ಕೋಟಿ ವಿಮಾ ಯೋಜನೆ ಜಾರಿ ಮಾಡಲಾಗಿದೆ. ಕರ್ನಾಟಕ ರಾಜ್ಯ ಪೊಲೀಸರು, ಕಾನೂನು ಮತ್ತು ಸುವ್ಯವಸ್ಥೆ ನಿರ್ವಹಣೆ ಮತ್ತು ಅಪರಾಧ ಪತ್ತೆ ಮತ್ತು ನಿಯಂತ್ರಣದಲ್ಲಿ ಉತ್ತಮ ಪ್ರಗತಿ ಸಾಧಿಸಿದ್ದಾರೆ. ಹಿಂದಿನ ವರ್ಷಗಳಿಗೆ ಹೋಲಿಸಿದರೆ ಎಲ್ಲಾ ರೀತಿಯ ಅಪರಾಧ ಸಂಖ್ಯೆಗಳು ಕಡಿಮೆ ಆಗಿದೆ. ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಉತ್ತಮವಾಗಿದೆ ಎಂದರು. ಇದನ್ನೂ ಓದಿ: ಯಶಸ್ವಿ ಶಸ್ತ್ರಚಿಕಿತ್ಸೆ ಬಳಿಕ ತಾಯ್ನಾಡಿಗೆ ಬಂದಿಳಿದ ಶಿವಣ್ಣ
ಹೆಸರಘಟ್ಟ ಹುಲ್ಲುಗಾವಲು ಪ್ರದೇಶವನ್ನು ಗ್ರೇಟರ್ ಹೆಸರಘಟ್ಟ ಹುಲ್ಲುಗಾವಲು ಸಂರಕ್ಷಣಾ ಮೀಸಲು ಪ್ರದೇಶ ಎಂದು ಘೋಷಣೆ ಮಾಡಲು ನಿರ್ಧಾರ ಮಾಡಲಾಗಿದೆ. ಶಾಲಾ ಮಕ್ಕಳಿಗೆ 6 ದಿನ ಮೊಟ್ಟೆ ಕೊಡಲಾಗುತ್ತಿದೆ. ಬೆಳಗಾವಿಯಲ್ಲಿ ಗಾಂಧಿ ಭಾರತ ವಿಶೇ ಕಾರ್ಯಕ್ರಮ ಆಯೋಜನೆ ಮಾಡಲಾಗಿದೆ. ಬಿಡಿಎ 34 ಸ್ಥಳಗಳಲ್ಲಿ ವಸತಿ ಸಂಕೀರ್ಣಗಳನ್ನು ನಿರ್ಮಿಸುವ ಮೂಲಕ 30 ಸಾವಿರ ವಸತಿ ಘಟಕಗಳನ್ನ ವಿತರಿಸುವ ಗುರಿ ಹೊಂದಲಾಗಿದೆ. ಈವರೆಗೆ 25 ಯೋಜನೆಗಳಲ್ಲಿ ಒಟ್ಟು 14909 ಫ್ಲಾಟ್ ನಿರ್ಮಾಣ ಪ್ರಾರಂಭ ಮಾಡಲಾಗಿದೆ. 10,615 ಫ್ಲಾಟ್ ನಿರ್ಮಾಣ ಕಾರ್ಯ ಮುಗಿದಿದೆ. 2024-25ರಲ್ಲಿ ಏಪ್ರಿಲ್‌ನಿಂದ ಸೆಪ್ಟೆಂಬರ್ 2024 ರವರೆಗೆ 88.853 ಮಿಲಿಯನ್ ಯುಎಸ್ ಡಾಲರ್ ಮೌಲ್ಯದಷ್ಟು ರಫ್ತು ಮಾಡಿದೆ. ರಫ್ತಿನಲ್ಲಿ ಮೊದಲ ಸ್ಥಾನದಲ್ಲಿದೆ. ಕಳೆದ ವರ್ಷಕ್ಕಿಂತ 11.17% ಬೆಳವಣಿಗೆ ಸಾಧಿಸಿದೆ. 2024-25ರ ಅವಧಿಯಲ್ಲಿ 2,491 ಕಿಲೋ ಮೀಟರ್ ರಾಜ್ಯ ಹೆದ್ದಾರಿಗಳು, 3,103 ಕಿ.ಮೀ ಪ್ರಮುಖ ಜಿಲ್ಲಾ ರಸ್ತೆಗಳ ಸುಧಾರಣೆ ಮತ್ತು ನವೀಕರಣ ಪೂರ್ಣಗೊಂಡಿದೆ. 190 ಸೇತುವೆ ನಿರ್ಮಾಣ ಮಾಡಲಾಗಿದೆ. ರಾಜ್ಯ ಸ್ವಸಂಗ್ರಹದಲ್ಲಿ ರಾಜ್ಯ ಸರ್ಕಾರ ಪ್ರಗತಿ ಸಾಧಿಸಿದೆ. ಡಿಸೆಂಬರ್ ವೇಳೆಗೆ 1,81,908 ಕೋಟಿ ಅದಾಯ ಸಂಗ್ರಹ ಮಾಡಲಾಗಿದೆ. 13% ಬೆಳವಣಿಗೆ ಸಾಧಿಸಿದೆ ಎಂದು ತಿಳಿಸಿದರು. ಇದನ್ನೂ ಓದಿ: ಗಣರಾಜ್ಯೋತ್ಸವ 2025 – ದೇಶದ ಜನತೆಗೆ ಶುಭಕೋರಿದ ಪ್ರಧಾನಿ, ಸಿಎಂ
ಭಾಷಣದ ಪ್ರಮುಖ ಅಂಶಗಳು:
* ಗೃಹಲಕ್ಷ್ಮಿ ಯೋಜನೆ 2023 ಆಗಸ್ಟ್‌ನಿಂದ ಇಲ್ಲಿವರೆಗೂ 35,180.20 ಆರ್ಥಿಕ ನೆರವು ನೀಡಲಾಗಿದೆ. ಗೃಹಜ್ಯೋತಿ ಅಡಿ 1.62 ಕೋಟಿ ಗ್ರಾಹಕರಿಗೆ ಪ್ರಯೋಜನ ಒದಗಿಸಲಾಗಿದೆ. ಈವರೆಗೆ 13,409 ಕೋಟಿ ಹಣ ಬಿಡುಗಡೆ ಮಾಡಲಾಗಿದೆ. ಶಕ್ತಿ ಯೋಜನೆಯಲ್ಲಿ 373.27 ಕೋಟಿ ಟ್ರಿಪ್‌ಗಳಲ್ಲಿ ಫಲಾನುಭವಿಗಳಿಗೆ ಪ್ರಯೋಜನ ದೊರಕಿದೆ. ಒಟ್ಟು 9,051 ಕೋಟಿ ರೂ. ವಿನಿಯೋಗಿಸಲಾಗಿದೆ. ಇದನ್ನೂ ಓದಿ: 139 ಸಾಧಕರಿಗೆ ಪದ್ಮ ಪ್ರಶಸ್ತಿ – ಕರ್ನಾಟಕದ ನವತಾರೆಗಳಿಗೂ ಗೌರವ
* ರಾಜ್ಯದಲ್ಲಿ ಮಹಿಳೆಯರ ಆರ್ಥಿಕ ಸಬಲೀಕರಣಕ್ಕಾಗಿ ಜಾರಿಗೆ ತರಲಾದ ‘ಗೃಹಲಕ್ಷ್ಮಿ’ ಯೋಜನೆಯಡಿ, ಆಗಸ್ಟ್ 2023ರಿಂದ ಪ್ರತಿ ಕುಟುಂಬದ ಯಜಮಾನಿಯರಿಗೆ ಮಾಸಿಕ ರೂ.2,000 ದರದಲ್ಲಿ ಒಟ್ಟು 35,180.20 ಕೋಟಿ ರೂ. ಆರ್ಥಿಕ ನೆರವು ನೀಡಲಾಗಿದೆ. ಇದನ್ನೂ ಓದಿ: ಯಶಸ್ವಿ ಶಸ್ತ್ರಚಿಕಿತ್ಸೆ ಬಳಿಕ ಇಂದು ತಾಯ್ನಾಡಿಗೆ ಶಿವಣ್ಣ ವಾಪಸ್
* ಗೃಹ ಜ್ಯೋತಿ’ ಯೋಜನೆಯಡಿ, ಪ್ರಸ್ತುತ 1.62 ಕೋಟಿ ಗ್ರಾಹಕರು ಪ್ರಯೋಜನ ಪಡೆಯುತ್ತಿದ್ದಾರೆ. ಸರ್ಕಾರವು ಆಗಸ್ಟ್ 2023 ರಿಂದ ಈವರೆಗೆ (18 ತಿಂಗಳುಗಳು) ವಿದ್ಯುತ್ ಸರಬರಾಜು ಕಂಪನಿಗಳಿಗೆ 13,409 ಕೋಟಿ ರೂ. ಸಬ್ಸಿಡಿ ಮೊತ್ತವನ್ನು ಬಿಡುಗಡೆ ಮಾಡಿದೆ. ಇದನ್ನೂ ಓದಿ: ಗಣರಾಜ್ಯೋತ್ಸವಕ್ಕೆ ಕೆಂಪುಕೋಟೆ ಸಜ್ಜು – 10,000 ಗಣ್ಯರಿಗೆ ಆಹ್ವಾನ, ಮಿಲಿಟರಿ ಶಕ್ತಿ ಅನಾವರಣ
* ರಾಜ್ಯ ಸರ್ಕಾರವು ತನ್ನ ಮಹತ್ವಾಕಾಂಕ್ಷಿ ಯೋಜನೆಯಾದ ‘ಶಕ್ತಿ’ ಯೋಜನೆ – ಮಹಿಳೆಯರಿಗೆ ಉಚಿತ ಪ್ರಯಾಣವನ್ನು 2023ರ ಜೂನ್ 11ರಿಂದ ಜಾರಿಗೊಳಿಸಿದ್ದು, ಇದು ಮಹಿಳಾ ಸಬಲೀಕರಣವನ್ನು ಬಲಪಡಿಸುವತ್ತ ಸರ್ಕಾರದ ಒಂದು ಹೆಜ್ಜೆಯಾಗಿದೆ. ಯೋಜನೆಯ ಆರಂಭದಿಂದ 2025ರ ಜನವರಿ 17ರವರೆಗೆ ರಾಜ್ಯದಲ್ಲಿ ಒಟ್ಟು 373.27 ಕೋಟಿ ಟ್ರಿಪ್ಪುಗಳಲ್ಲಿ ಫಲಾನುಭವಿಗಳು ಶಕ್ತಿ ಯೋಜನೆಯಿಂದ ಪ್ರಯೋಜನ ಪಡೆದಿದ್ದಾರೆ. ಇದಕ್ಕಾಗಿ ಸರ್ಕಾರವು 9,051 ಕೋಟಿ ರೂ. ವಿನಿಯೋಗಿಸಿದೆ. ಇದನ್ನೂ ಓದಿ: ಮೈಕ್ರೋ ಫೈನಾನ್ಸ್ ಕಿರುಕುಳ ತಡೆಗಟ್ಟಲು ಹೊಸ ಕಾನೂನು – ಸುಗ್ರೀವಾಜ್ಞೆ ಮೂಲಕ ಅಂಕುಶ: ಸಿಎಂ
* `ಯುವನಿಧಿ’ ಯೋಜನೆಯಡಿಯಲ್ಲಿ 1,94,986 ಅಭ್ಯರ್ಥಿಗಳನ್ನು ನೋಂದಾಯಿಸಲಾಗಿದೆ ಮತ್ತು 1,24,176 ಅರ್ಹ ಅಭ್ಯರ್ಥಿಗಳಿಗೆ ನೇರ ನಗದು ವರ್ಗಾವಣೆ ಮಾಡಲಾಗಿದೆ. ಯುವನಿಧಿ ಪ್ಲಸ್ ಉಪಕ್ರಮದಡಿಯಲ್ಲಿ 25,000 ಯುವನಿಧಿ ಫಲಾನುಭವಿಗಳಿಗೆ ಅವರ ಉದ್ಯೋಗ ಸಾಮರ್ಥ್ಯವನ್ನು ಹೆಚ್ಚಿಸಲು ವಿವಿಧ ಕೌಶಲ್ಯಗಳ ಅಡಿಯಲ್ಲಿ ಕೌಶಲ್ಯ ತರಬೇತಿ ನೀಡಲಾಗುವುದು. 12,000 ಅಭ್ಯರ್ಥಿಗಳಿಗೆ ಕೈಗಾರಿಕಾ ಸಂಪರ್ಕ ಕೋಶ ಮತ್ತು ಭವಿಷ್ಯದ ಕೌಶಲ್ಯಗಳ ಅಡಿಯಲ್ಲಿ ತರಬೇತಿ ನೀಡಲಾಗುತ್ತದೆ. ಇದನ್ನೂ ಓದಿ: ಮೈಕ್ರೋ ಫೈನಾನ್ಸ್ ಕಿರುಕುಳ ವಿರುದ್ಧ 7.80 ಲಕ್ಷ ದೂರುಗಳು ಬರುವವರೆಗೂ ಬಾಳೆಹಣ್ಣು ತಿನ್ನುತ್ತಿದ್ರಾ?: ಎನ್.ರವಿಕುಮಾರ್ ಆಗ್ರಹ
* ಜನರ ಹಸಿವನ್ನು ನೀಗಿಸುವುದರ ದೃಷ್ಟಿಯಿಂದ ‘ಅನ್ನಭಾಗ್ಯ’ ಯೋಜನೆಯನ್ನು ಜಾರಿಗೆ ತರಲಾಯಿತು. ಬಿಪಿಎಲ್ ಪಡಿತರ ಚೀಟಿಗಳ ಪ್ರತಿ ಫಲಾನುಭವಿಗೆ 5 ಕೆಜಿ ಅಕ್ಕಿ ನೀಡುವ ಜೊತೆಗೆ, ಹೆಚ್ಚುವರಿ 5 ಕೆಜಿ ಅಕ್ಕಿಯ ಬದಲಾಗಿ ಪ್ರತಿ ಸದಸ್ಯರಿಗೆ 170 ರೂ.ನಂತೆ ಅವರ ಬ್ಯಾಂಕ್ ಖಾತೆಗೆ ನೇರ ಹಣ ವರ್ಗಾವಣೆ ಮಾಡಲಾಗುತ್ತಿದೆ. ಜುಲೈ-2023ರಿಂದ ಇಲ್ಲಿಯವರೆಗೆ 4,48,12,382 ಫಲಾನುಭವಿಗಳ ಬ್ಯಾಂಕ್ ಖಾತೆಗಳಿಗೆ ಡಿಬಿಟಿ ಮೂಲಕ ವರ್ಗಾಯಿಸಲು 9,775.51 ರೂ. ಕೋಟಿ ಬಿಡುಗಡೆ ಮಾಡಲಾಗಿದೆ. ಇದನ್ನೂ ಓದಿ: ಮೈಕ್ರೋ ಫೈನಾನ್ಸ್ ಸಂಸ್ಥೆಗಳ ಪ್ರತಿನಿಧಿಗಳಿಗೆ ಬಿಸಿ ಮುಟ್ಟಿಸಿದ ಸಿಎಂ ಸಿದ್ದರಾಮಯ್ಯ, ಸಚಿವರಿಂದಲೂ ಆಕ್ರೋಶ
* ಕರ್ನಾಟಕ ಸರ್ಕಾರವು 2024-25ರಲ್ಲಿ ರಾಜ್ಯದ ಹಣಕಾಸು ವ್ಯವಸ್ಥೆಯನ್ನು ಉತ್ತಮವಾಗಿ ನಿರ್ವಹಿಸಿದೆ ಮತ್ತು ರಾಜ್ಯದ ಆರ್ಥಿಕ ಬೆಳವಣಿಗೆಯನ್ನು ಉತ್ತೇಜಿಸಿದೆ. ಡಿಸೆಂಬರ್ 2024 ರ ಅಂತ್ಯದ ವೇಳೆಗೆ, ರಾಜ್ಯದ ಆದಾಯ ಸಂಗ್ರಹವು 1,81,908 ರೂ. ಕೋಟಿಗಳಷ್ಟಿತ್ತು ಮತ್ತು ವರ್ಷದಿಂದ ವರ್ಷಕ್ಕೆ 13% ಬೆಳವಣಿಗೆಯನ್ನು ಸಾಧಿಸಿಕೊಂಡು ಬಂದಿದೆ. ರಾಜ್ಯಗಳು ಸಂಗ್ರಹಿಸಿದ ಒಟ್ಟು ಜಿಎಸ್‌ಟಿ ಆದಾಯದ ವಿಷಯದಲ್ಲಿ ಕರ್ನಾಟಕ ದೇಶದಲ್ಲಿ ಎರಡನೇ ಸ್ಥಾನದಲ್ಲಿದೆ. ಇದನ್ನೂ ಓದಿ: ಪದ್ಮಭೂಷಣ ಪ್ರಶಸ್ತಿಯನ್ನು ಕನ್ನಡಿಗರಿಗೆ ಅರ್ಪಿಸುತ್ತೇನೆ: ಅನಂತ್‌ನಾಗ್
* ಸರ್ಕಾರವು ನಾಡಿನ ಸಮಗ್ರ ಅಭಿವೃದ್ಧಿ ಮತ್ತು ಸಂಪತ್ತಿನ ವಿನಿಯೋಗದಲ್ಲಿ ಸಾಮಾಜಿಕ ನ್ಯಾಯವನ್ನು ಅನುಷ್ಠಾನ ಮಾಡುವಲ್ಲಿ ಮಹತ್ತರ ಪಾತ್ರವಹಿಸಿದೆ. ಆರೋಗ್ಯ, ವಿದ್ಯುತ್, ಶಿಕ್ಷಣ, ರಸ್ತೆ ಮುಂತಾದ ಮೂಲಭೂತ ಸೌಲಭ್ಯಗಳ ಒದಗಿಸುವಿಕೆಯಲ್ಲಿ ಮುಂದೆ ಇದೆ ಎಂದು ರಾಜ್ಯಪಾಲರು ತಿಳಿಸಿದರು. ಇದನ್ನೂ ಓದಿ: ರಾಜ್ಯದ 9 ಸಾಧಕರಿಗೆ ಪದ್ಮ ಪ್ರಶಸ್ತಿ