ಪುನೀತ್ ರಾಜ್ ಕುಮಾರ್ ಅವರಿಗೆ ಕರ್ನಾಟಕ ರತ್ನ ಪ್ರಶಸ್ತಿ ನೀಡಿದ್ದಕ್ಕಾಗಿ ಸರಕಾರಕ್ಕೆ ಕೃತಜ್ಞತೆ ಸಲ್ಲಿಸಿದರು ಪುನೀತ್ ಪತ್ನಿ ಅಶ್ವಿನಿ ಪುನೀತ್ ರಾಜ್ ಕುಮಾರ್. ಮುಖ್ಯಮಂತ್ರಿಗಳಾದ ಬಸವರಾಜ ಬೊಮ್ಮಾಯಿ ಅವರು ನಮ್ಮ ಕುಟುಂಬಕ್ಕೆ ಆತ್ಮೀಯರು. ಅವರು ಮತ್ತು ಅವರು ಸರಕಾರ ಪುನೀತ್ ಅವರಿಗಾಗಿ ಸಾಕಷ್ಟು ಕೆಲಸ ಮಾಡಿದೆ. ಹಾಗಾಗಿ ಎಲ್ಲರಿಗೂ ನಮ್ಮ ಕುಟುಂಬದ ಪರವಾಗಿ ಕೃತಜ್ಞತೆ ಸಲ್ಲಿಸುತ್ತೇನೆ.
Advertisement
ಪುನೀತ್ ರಾಜ್ ಕುಮಾರ್ (Puneeth Rajkumar) ಅವರಿಗೆ ಮರಣೋತ್ತರ ಕರ್ನಾಟಕ ರತ್ನ (Karnataka Ratna) ಪ್ರಶಸ್ತಿಯನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ (Basavaraja Bommai ) ಅವರು ಪ್ರದಾನ ಮಾಡಿದರು. ಪುನೀತ್ ಪರವಾಗಿ ಪತ್ನಿ ಅಶ್ವಿನಿ ಪುನೀತ್ ರಾಜ್ ಕುಮಾರ್ (Ashwini Rajkumar ) ಈ ಪ್ರಶಸ್ತಿಯನ್ನು ಸ್ವೀಕರಿಸಿ, ಭಾವುಕರಾದರು. ಸಿನಿಮಾ ರಂಗ ಮತ್ತು ಸಮಾಜ ಸೇವೆಯನ್ನು ಪರಿಗಣಿಸಿ ಪುನೀತ್ ಅವರಿಗೆ ಈ ಪ್ರಶಸ್ತಿಯನ್ನು ನೀಡಿದ್ದು, ಸಿನಿಮಾ ರಂಗದಿಂದ ಇಂಥದ್ದೊಂದು ಗೌರವಕ್ಕೆ ಪಾತ್ರರಾದ ಎರಡನೇ ಗಣ್ಯವ್ಯಕ್ತಿ ಇವರಾಗಿದ್ದಾರೆ. ಇದನ್ನೂ ಓದಿ:ಹಿಂದಿಯಲ್ಲಿ 50 ಕೋಟಿ ಗಳಿಸಿದ ‘ಕಾಂತಾರ’ ಸಿನಿಮಾ
Advertisement
Advertisement
ಕರ್ನಾಟಕ ರತ್ನ ಪ್ರಶಸ್ತಿ ಪ್ರಾರಂಭವಾದಾಗ ಮೊದಲ ಪ್ರಶಸ್ತಿಯನ್ನು ರಾಷ್ಟ್ರಕವಿ ಕುವೆಂಪು ಮತ್ತು ಡಾ.ರಾಜ್ ಕುಮಾರ್ ಅವರಿಗೆ ದೊರೆತಿತ್ತು. ಮೂವತ್ತು ವರ್ಷಗಳ ನಂತರ ಮತ್ತೆ ಸಿನಿಮಾ ರಂಗಕ್ಕೆ ಅದರಲ್ಲೂ ಡಾ.ರಾಜ್ ಕುಟುಂಬಕ್ಕೆ ಈ ಗೌರವ ದೊರೆತಿದೆ. ಹಾಗಾಗಿಯೇ ಡಾ.ರಾಜ್ ಕುಟುಂಬದ ಅನೇಕ ಸದಸ್ಯರು ಈ ಸಮಾರಂಭದಲ್ಲಿ ಹಾಜರಿದ್ದರು. ಡಾ.ರಾಜ್ ಕುಮಾರ್ ಅವರ ಅಷ್ಟೂ ಮಕ್ಕಳು ಈ ಕಾರ್ಯಕ್ರಮಕ್ಕೆ ಸಾಕ್ಷಿಯಾಗಿದ್ದು ವಿಶೇಷ.
Advertisement
ಈ ಪ್ರಶಸ್ತಿ ಪ್ರದಾನ ಸಮಾರಂಭಕ್ಕೆ ಪುನೀತ್ ಅವರ ನೆಚ್ಚಿನ ನಟರಾಗಿದ್ದ ತಮಿಳಿನ ಸೂಪರ್ ಸ್ಟಾರ್ ರಜನಿಕಾಂತ್ (Rajinikanth) , ಹಾಗೂ ಗೆಳೆಯ ಮತ್ತು ತೆಲುಗಿನ ಖ್ಯಾತ ನಟ ಜ್ಯೂನಿಯರ್ ಎನ್.ಟಿ.ಆರ್ (Jr.NTR), ಸುಧಾಮೂರ್ತಿ ಅವರು ಅತಿಥಿಗಳಾಗಿ ಆಗಮಿಸಿದ್ದರು. ಸಚಿವರಾದ ವಿ.ಸುನೀಲ್ ಕುಮಾರ್, ಆರ್.ಅಶೋಕ್, ಮುನಿರತ್ನ ಸೇರಿದಂತೆ ಹಲವು ಗಣ್ಯರು ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು.
ಪ್ರಶಸ್ತಿ ಪ್ರದಾನಕ್ಕೂ ಮುನ್ನ ಕನ್ನಡದ ಖ್ಯಾತ ಗಾಯಕ ವಿಜಯ ಪ್ರಕಾಶ್ ಮತ್ತು ತಂಡದಿಂದ ಕನ್ನಡದ ಗೀತೆಗಳು ಮತ್ತು ಪುನೀತ್ ರಾಜ್ ಕುಮಾರ್ ನಟನೆಯ ಹಾಡುಗಳನ್ನು ಹೇಳಲಾಯಿತು. ಪುನೀತ್ ಹಾಡಿದ ಹಾಡುಗಳಿಗೂ ಕಲಾವಿದರು ದನಿಯಾಗಿದ್ದು ವಿಶೇಷವಾಗಿತ್ತು.