ಬೆಂಗಳೂರು: ಇಂದು ದಿ. ಡಾ. ಪುನೀತ್ ರಾಜ್ ಕುಮಾರ್ ಹುಟ್ಟುಹಬ್ಬದ ಜೊತೆಗೆ ಜೇಮ್ಸ್ ಸಿನಿಮಾ ರಿಲೀಸ್ ಆಗಿದೆ. ಹೀಗಾಗಿ ಇಮದು ಅಪ್ಪು ಅಭಿಮಾನಿಗಳು ಹಬ್ಬವನ್ನೇ ಆಚರಿಸುತ್ತಿದ್ದಾರೆ. ಈ ನಡುವೆ ಶೀಘ್ರವೇ ಪುನೀತ್ ರಾಜ್ ಕುಮಾರ್ ಗೆ ಮರಣೋತ್ತರ ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನ ಮಾಡಲು ದಿನಾಂಕ ನಿಗದಿಪಡಿಸಲಾಗುವುದು ಎಂದು ಸಿಎಂ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.
Advertisement
ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪುನೀತ್ ಅವರಿಗೆ ಕರ್ನಾಟಕ ರತ್ನ ಪ್ರಶಸ್ತಿ ಕೊಡುವ ಬಗ್ಗೆ ಈಗಾಗಲೇ ತೀರ್ಮಾನ ಆಗಿದೆ. ಪ್ರಶಸ್ತಿ ಪ್ರದಾನ ಮಾಡುವ ಸಂಬಂಧ ಡಾ.ರಾಜ್ ಕುಟುಂಬದ ಜತೆ ಚರ್ಚೆ ನಡೆಸುತ್ತೇನೆ. ಈ ಸಂಬಂಧ ಒಂದು ಸಮಿತಿ ಕೂಡ ರಚಿಸಲಾಗುವುದು. ಪ್ರಶಸ್ತಿ ಪ್ರದಾನ ಮಾಡುವ ದಿನಾಂಕ ನಿಗದಿ ಬಗ್ಗೆಯೂ ಆದಷ್ಟು ಬೇಗ ನಿರ್ಧಾರ ಮಾಡಲಾಗುವುದು ಎಂದರು. ಇದನ್ನೂ ಓದಿ: ಡಾ.ಪುನೀತ್ ರಾಜ್‍ಕುಮಾರ್ ನೆನೆದು ಗುಣಗಾನ ಮಾಡಿದ ಪ್ರಿಯಾಂಕ್ ಖರ್ಗೆ
Advertisement
Advertisement
ಪ್ರಶಸ್ತಿ ಪ್ರದಾನ ಕಾರ್ಯಕ್ರಮ ಯಾವ ರೀತಿ ಮಾಡಬೇಕೆಂಬ ಬಗ್ಗೆ ಕುಟುಂಬದ ಜೊತೆ ಚರ್ಚಿಸಲಾಗುವುದು. ಡಾ.ರಾಜ್ ಹಾಗೂ ಪುನೀತ್ ರಿಗೆ ಗೌರವ ಬರುವ ಹಾಗೆ ಕಾರ್ಯಕ್ರಮ ನಡೆಸಲಾಗುವುದು. ಒಟ್ಟಿನಲ್ಲಿ ಆದಷ್ಟು ಬೇಗ ಪ್ರಶಸ್ತಿ ಪ್ರದಾನಕ್ಕೆ ದಿನಾಂಕ ನಿಗದಿ ಮಾಡುವುದಾಗಿ ಸಿಎಂ ತಿಳಿಸಿದರು.
Advertisement
ಇತ್ತೀಚೆಗಷ್ಟೇ ಮೈಸೂರು ವಿಶ್ವವಿದ್ಯಾಲಯದ ವತಿಯಿಂದ ಅಪ್ಪುಗೆ ಮರಣೋತ್ತರ ಡಾಕ್ಟರೇಟ್ ನೀಡುವುದಾಗಿ ಮೈಸೂರು ವಿಶ್ವವಿದ್ಯಾಲಯ ಕುಲಪತಿ ಪ್ರೊ. ಹೇಮಂತ್ ಕುಮಾರ್ ಘೋಷಿಸಿದ್ದಾರೆ. ಮಾರ್ಚ್ 22ರಂದು ನಡೆಯಲಿರುವ ಮೈಸೂರು ವಿವಿ ಯ 102ನೇ ಘಟಿಕೋತ್ಸವದಲ್ಲಿ ಕನ್ನಡದ ಯುವರತ್ನನಿಗೆ ಗೌರವ ಡಾಕ್ಟರೇಟ್ ನೀಡುವುದಾಗಿ ತಿಳಿಸಿದ್ದಾರೆ. ಇದನ್ನೂ ಓದಿ: ಅಪ್ಪು ಹುಟ್ಟುಹಬ್ಬಕ್ಕೆ ಕನಸಿನ ‘ಗಂಧದಗುಡಿ’ ಫಸ್ಟ್ ಲುಕ್ ರಿಲೀಸ್