ಕನ್ನಡದ ಹೆಸರಾಂತ ನಟ ವಿಷ್ಣುವರ್ಧನ್ (Vishnuvardhan) ಈ ನಾಡಿಗೆ ಸಾಕಷ್ಟು ಕೊಡುಗೆ ನೀಡಿದ್ದಾರೆ. ಹಾಗಾಗಿ ಅವರ ಅಭಿಮಾನಿಗಳು ವಿಷ್ಣುವರ್ಧನ್ ಅವರಿಗೆ ‘ಕರ್ನಾಟಕ ರತ್ನ’ ಪ್ರಶಸ್ತಿ ನೀಡುವಂತೆ ಒತ್ತಾಯ ಮಾಡಿದ್ದಾರೆ. ಅಭಿಮಾನಿಗಳ ಭಾವನೆಗೆ ಸಕಾರಾತ್ಮಕವಾಗಿ ಸ್ಪಂದಿಸುತ್ತೇವೆ. ಮುಂದಿನ ದಿನಗಳಲ್ಲಿ ಕರ್ನಾಟಕ ರತ್ನ (Karnataka Ratna) ನೀಡುವ ಬಗ್ಗೆ ತೀರ್ಮಾನ ಮಾಡುತ್ತೇವೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ (Basavaraja Bommai) ಭರವಸೆ ನೀಡಿದ್ದಾರೆ.
Advertisement
ಇಂದು ಮೈಸೂರಿನಲ್ಲಿ ನಡೆದ ವಿಷ್ಣು ಸ್ಮಾರಕ ಉದ್ಘಾಟನೆ ವೇಳೆ ಮಾತನಾಡಿದ ಸಿಎಂ, ‘ವಿಷ್ಣುವರ್ಧನ್ ಅವರ ಕಲೆ, ಸಾಹಸ, ಚಿತ್ರರಂಗದಲ್ಲಿ ಮಾಡಿರೋ ಸಾಧನೆ ಕಣ್ಣ ಮುಂದೆ ಇದೆ. ನಾನು ಒಬ್ಬ ವಿಷ್ಣುವರ್ಧನ್ ಅಭಿಮಾನಿಯಾಗಿ ಇಲ್ಲಿ ಬಂದಿದ್ದೇನೆ. 70 ರ ದಶಕದಲ್ಲಿ ನಾಗರಹಾವಿನ ಹೊಸ ನಾಯಕ, ಅವ್ರ ಚಿತ್ರ ಬಂದಿತ್ತು. ಮೊದಲ ಸಲಾ ನೋಡಿದವ್ರು ಖಂಡಿತವಾಗಿ ವಿಷ್ಣುವರ್ಧನ್ ಫ್ಯಾನ್ ಆಗ್ತಾ ಇದ್ದರು. ನಾಗರಹಾವು ಚಿತ್ರದ ಮೂಲಕ ನಾಡಿನ ಜನಮನ ಗೆದ್ದವರು ಡಾ. ವಿಷ್ಣುವರ್ಧನ್. ಎಲ್ಲಾ ರೀತಿಯ ಪಾತ್ರಗಳನ್ನು ಮಾಡಿ ಸಾಹಸ ಸಿಂಹನಾಗಿ ಕರ್ನಾಟಕದಲ್ಲಿ ಮೆರೆದವರು’ ಎಂದು ಕೊಂಡಾಡಿದರು. ಕರ್ನಾಟಕ ರತ್ನ ಕುರಿತು ಪ್ರಸ್ತಾಪ ಮಾಡಿದರು. ಇದನ್ನೂ ಓದಿ: ನಟ ನಂದಮೂರಿ ತಾರಕರತ್ನ ಸ್ಥಿತಿ ಗಂಭೀರ : ಮಾಜಿ ಸಿಎಂ ಚಂದ್ರಬಾಬು ನಾಯ್ಡು ಭೇಟಿ
Advertisement
Advertisement
ನಿನ್ನೆಯಷ್ಟೇ ಡಾ.ವಿಷ್ಣುಸೇನಾ ಸಮಿತಿಯ ಅಧ್ಯಕ್ಷ ವೀರಕಪುತ್ರ ಶ್ರೀನಿವಾಸ್ (Veerakaputra Srinivas), ಸರಕಾರದ ವಿರುದ್ಧ ಹರಿಹಾಯ್ದಿದ್ದರು. ಬೇರೆ ನಟರಿಗೆ ಕೊಡುವ ಗೌರವವನ್ನು ವಿಷ್ಣುವರ್ಧನ್ ಅವರಿಗೆ ಯಾಕೆ ಕೊಡುತ್ತಿಲ್ಲವೆಂದು ಖಾರವಾಗಿಯೇ ಪ್ರಶ್ನೆ ಮಾಡಿದ್ದರು. ಅಲ್ಲದೇ, ಕರ್ನಾಟಕ ರತ್ನ ಪ್ರಶಸ್ತಿಯನ್ನು ಘೋಷಿಸುವಂತೆ ಆಗ್ರಹಿಸಿದ್ದರು. ವೀರಕಪುತ್ರ ಶ್ರೀನಿವಾಸ್ ಅವರ ಬೇಡಿಕೆಗೆ ಸ್ಪಂದಿಸಿರುವ ಸಿಎಂ, ಮುಂದಿನ ದಿನಗಳಲ್ಲಿ ಸೂಕ್ತ ನಿರ್ಧಾರ ತೆಗೆದುಕೊಳ್ಳುವ ಮಾತುಗಳನ್ನು ಆಡಿದ್ದಾರೆ.
Advertisement
ಸತತ ಹದಿಮೂರು ವರ್ಷಗಳ ನಂತರ ಡಾ.ವಿಷ್ಣುವರ್ಧನ್ ಸ್ಮಾರಕ ಉದ್ಘಾಟನೆಯಾಗುತ್ತಿದೆ. ಕೋಟ್ಯಂತರ ಅಭಿಮಾನಿಗಳು ಹಾಗೂ ಕುಟುಂಬದ ಬಹು ದೊಡ್ಡ ಕನಸಾಗಿದ್ದ ವಿಷ್ಣು ಸ್ಮಾರಕ ನಾಳೆ ಲೋಕಾರ್ಪಣೆಯಾಗುತ್ತಿದೆ. ಈ ಬಗ್ಗೆ ವಿಷ್ಣು ಅಭಿಮಾನಿಗಳ ಪರವಾಗಿ ಡಾ.ವಿಷ್ಣು ಸೇನಾ ಸಮಿತಿ ರಾಜ್ಯಾಧ್ಯಕ್ಷ ವೀರಕಪುತ್ರ ಶ್ರೀನಿವಾಸ್ ಪತ್ರಿಕಾಗೋಷ್ಠಿ ನಡೆಸಿ ಸರ್ಕಾರದ ನಡೆ ಬಗ್ಗೆ ಬೇಸರ ವ್ಯಕ್ತಪಡಿಸಿದ್ದರು. ಜೊತೆಗೆ ಒಂದಿಷ್ಟು ಬೇಡಿಕೆಯನ್ನೂ ಅವರು ಸರ್ಕಾರದ ಮುಂದಿಟ್ಟಿದ್ದರು.
Live Tv
[brid partner=56869869 player=32851 video=960834 autoplay=true]
Join our Whatsapp group by clicking the below link
https://chat.whatsapp.com/E6YVEDajTzH06LOh77r25k