Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ತಮಿಳುನಾಡಿಗೆ ಕಳೆದ ವರ್ಷ ಎಷ್ಟು ನೀರು ಹರಿದಿದೆ? ಕರ್ನಾಟಕದಿಂದ ನೀರು ಹರಿದಿದೆ ಎಂದು ಪತ್ತೆ ಮಾಡೋದು ಹೇಗೆ?
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ತಮಿಳುನಾಡಿಗೆ ಕಳೆದ ವರ್ಷ ಎಷ್ಟು ನೀರು ಹರಿದಿದೆ? ಕರ್ನಾಟಕದಿಂದ ನೀರು ಹರಿದಿದೆ ಎಂದು ಪತ್ತೆ ಮಾಡೋದು ಹೇಗೆ?

Bengaluru City

ತಮಿಳುನಾಡಿಗೆ ಕಳೆದ ವರ್ಷ ಎಷ್ಟು ನೀರು ಹರಿದಿದೆ? ಕರ್ನಾಟಕದಿಂದ ನೀರು ಹರಿದಿದೆ ಎಂದು ಪತ್ತೆ ಮಾಡೋದು ಹೇಗೆ?

Public TV
Last updated: June 30, 2025 7:45 am
Public TV
Share
3 Min Read
Mandya KRS Dam
SHARE

ಬೆಂಗಳೂರು: ಕೆಆರ್‌ಎಸ್‌ (KRS) ಅಣೆಕಟ್ಟೆಯ 92 ವರ್ಷಗಳ ಇತಿಹಾಸದಲ್ಲಿ ಮೊದಲ ಬಾರಿಗೆ ಜೂನ್‌ ತಿಂಗಳಿನಲ್ಲಿ ಭರ್ತಿಯಾಗಿದ್ದು ಇಂದು ಸಿಎಂ ಸಿದ್ದರಾಮಯ್ಯ (CM Siddaramaiah) ಕಾವೇರಿಗೆ ಬಾಗಿನ ಅರ್ಪಿಸಲಿದ್ದಾರೆ. ಕಳೆದ ವರ್ಷ ಉತ್ತಮ ಮಳೆಯಾಗಿದ್ದರಿಂದ ಕರ್ನಾಟಕ (Karnataka) ತಮಿಳುನಾಡಿಗೆ (Tamilnadu) ಬರೋಬ್ಬರಿ 305.611 ಟಿಎಂಸಿ ಕಾವೇರಿ ನೀರನ್ನು ಹರಿಸಿದೆ.

ಹೌದು. ಫೆಬ್ರವರಿ 2 , 2018 ರ ಸುಪ್ರೀಂ ಕೋರ್ಟ್‌ (Supreme Court) ತೀರ್ಪಿನಂತೆ ಕರ್ನಾಟಕ ಪ್ರತಿ ವರ್ಷ 177.250 ಟಿಎಂಸಿ ನೀರನ್ನು ತಮಿಳುನಾಡಿಗೆ ಹರಿಸಬೇಕು. ಆದರೆ ಕರ್ನಾಟಕ ಕಳೆದ ವರ್ಷ 128 ಟಿಎಂಸಿ ಹೆಚ್ಚುವರಿ ನೀರನ್ನು ತಮಿಳುನಾಡಿಗೆ ಹರಿಸಿದೆ.

ಈ ಜೂನ್‌ ತಿಂಗಳಿನಲ್ಲಿ ಕರ್ನಾಟಕ ತಮಿಳುನಾಡಿಗೆ 9.19 ಟಿಎಂಸಿ ನೀರನ್ನು ಬಿಡಬೇಕಿತ್ತು. ಆದರೆ ಕಾವೇರಿ ಜಲಾನಯನ ವ್ಯಾಪ್ತಿಯಲ್ಲಿ ಭಾರೀ ಮಳೆಯಾಗುತ್ತಿರುವ ಕಾರಣ ಈಗಾಗಲೇ 21.515 ಟಿಎಂಸಿ ನೀರನ್ನು ಹರಿಸಿದೆ.

ತಮಿಳುನಾಡಿಗೆ ಕಾವೇರಿ ನದಿ ನೀರು ಬಿಡುವ ಸಂಬಂಧ, ಕಾವೇರಿ ಪ್ರಾಧಿಕಾರದ ಆದೇಶವನ್ನು ಇದುವರೆಗೆ ಕರ್ನಾಟಕ ಬಹುತೇಕ ಪಾಲಿಸಿಕೊಂಡು ಬಂದಿದೆ. ಎರಡು ಬಾರಿ ತೀವ್ರ ಅನಾವೃಷ್ಟಿಯ ಹಿನ್ನಲೆಯಲ್ಲಿ ಪ್ರಾಧಿಕಾರದ ಸೂಚನೆಯನ್ನು ಕರ್ನಾಟಕಕ್ಕೆ ಪಾಲಿಸಲು ಸಾಧ್ಯವಾಗಿರಲಿಲ್ಲ ಇದನ್ನೂ ಓದಿ: Maharashtra | ʻತ್ರಿಭಾಷಾ ಸೂತ್ರʼ ಆದೇಶ ಹಿಂಪಡೆದ ʻಮಹಾʼ ಸರ್ಕಾರ

KRS DAM MYSURU

ಯಾವ ವರ್ಷ ಎಷ್ಟು ಟಿಎಂಸಿ ಹರಿದಿದೆ?
2018-19 : 404.44
2019-20 : 275.40
2020-21 : 211.316
2021-22 : 281.084
2022-23 : 667.533
2023-24 : 81.417
2024-25 : 305.611

ತಮಿಳುನಾಡಿಗೆ ಕರ್ನಾಟಕದಿಂದ ನೀರು ಹರಿದಿದೆ ಎಂದು ಪತ್ತೆ ಮಾಡೋದು ಹೇಗೆ?
ತಮಿಳುನಾಡಿನ ಭಾಗದಲ್ಲಿರುವ ಬಿಳಿಗುಂಡ್ಲುವಿನಲ್ಲಿ ಎಷ್ಟು ಪ್ರಮಾಣದ ನೀರು ಹರಿದಿದೆ ಎಂದು ಪತ್ತೆ ಮಾಡಲು ಕೇಂದ್ರ ಜಲ ಆಯೋಗದ ಅಧಿಕಾರಿಗಳು ವರ್ಷವಿಡಿ ನೀರಿನ ಲೆಕ್ಕಾಚಾರ ಹಾಕುತ್ತಾರೆ. ಪ್ರತಿದಿನ ಬೆಳಗ್ಗೆ 8 ರಿಂದ 10ರವರೆಗೆ ಎರಡು ಗಂಟೆಗಳ ಕಾಲ 160 ಮೀಟರ್ ಪ್ರದೇಶದ 15 ನಿರ್ದಿಷ್ಟ ಸ್ಥಳಗಳಲ್ಲಿ ಈ ಪರೀಕ್ಷೆ ನಡೆಯುತ್ತದೆ. 7 ಮಂದಿ ಸಿಬ್ಬಂದಿ ದೋಣಿ ಮೂಲಕ ಒಂದು ದಂಡೆಯಿಂದ ಮತ್ತೂಂದು ದಂಡೆಗೆ ಸಾಗಿ ತಮ್ಮ ಜೊತೆ ಇರುವ ಉಪಕರಣವನ್ನು ನೀರಿಗೆ ಬಿಡುತ್ತಾರೆ. ಈ ಮೂಲಕ ಪ್ರತಿ ಸೆಕೆಂಡ್‍ಗೆ ಎಷ್ಟು ನೀರು ಕರ್ನಾಟಕದಿಂದ ತಮಿಳುನಾಡಿಗೆ ಹೋಗುತ್ತಿದೆ ಎಂಬುದನ್ನು ಪತ್ತೆ ಮಾಡುತ್ತಾರೆ. ಈ ಸಿಬ್ಬಂದಿಯನ್ನು ಕರ್ನಾಟಕ, ತಮಿಳುನಾಡಿನ ಅಧಿಕಾರಿಗಳು ನೇರವಾಗಿ ಸಂಪರ್ಕಿಸುವಂತಿಲ್ಲ. ರಾಜ್ಯ ಸರ್ಕಾರಗಳು ಅಥವಾ ನ್ಯಾಯಾಲಯಗಳು ಕೇಳಿದರೆ ಮಾತ್ರ ಮಾಹಿತಿಯನ್ನು ನೀಡಲಾಗುತ್ತದೆ.

krs dam mandya

 

ಯಾವ ತಿಂಗಳಿನಲ್ಲಿ ತಮಿಳುನಾಡಿಗೆ ಎಷ್ಟು ಟಿಎಂಸಿ ನೀರು?
ನ್ಯಾ. ಎನ್.ಪಿ.ಸಿಂಗ್, ನ್ಯಾ. ಸುಧೀರ್ ನಾರಿಯನ್, ನ್ಯಾ. ಎನ್.ಎಸ್. ರಾವ್ ಅವರನ್ನು ಒಳಗೊಂಡ ಕಾವೇರಿ ನ್ಯಾಯಾಧಿಕರಣ 2007ರ ಫೆಬ್ರವರಿ 2ರಂದು ಅಂತಿಮ ಐತೀರ್ಪ ನೀಡಿತ್ತು. ಈ ತೀರ್ಪು ಪ್ರಕಾರ ಜೂನ್‌ನಲ್ಲಿ ನಲ್ಲಿ 10, ಜುಲೈ 34, ಅಗಸ್ಟ್ 50, ಸೆಪ್ಟೆಂಬರ್ 40, ಅಕ್ಟೋಬರ್ 22, ನವೆಂಬರ್ 15, ಡಿಸೆಂಬರ್ 8, ಜನವರಿ 3, ಫೆಬ್ರವರಿ 2.5, ಮಾರ್ಚ್ 2.5, ಏಪ್ರಿಲ್ 2.5, ಮೇ 2.5 ಟಿಎಂಸಿ ಸೇರಿ ಒಟ್ಟು 192 ಟಿಎಂಸಿ ನೀರನ್ನು ಕರ್ನಾಟಕ ಪ್ರತಿವರ್ಷ ತಮಿಳುನಾಡಿಗೆ ಹರಿಸಬೇಕಿತ್ತು. ಈ ಐತೀರ್ಪನ್ನು ಪ್ರಶ್ನಿಸಿ ಸಲ್ಲಿಸಲಾಗಿದ್ದ ವಿಶೇಷ ಮೇಲ್ಮನವಿ ಅರ್ಜಿಯ ವಿಚಾರಣೆ ನಡೆಸಿದ್ದ ಸುಪ್ರೀಂಕೋರ್ಟ್ ನ ಮುಖ್ಯ ನ್ಯಾಯಮೂರ್ತಿ ದೀಪಕ್ ಮಿಶ್ರಾ, ನ್ಯಾ. ಎಎಂ ಖಾನ್ವೀಲ್ಕರ್ ಮತ್ತು ಅಮಿತಾವ್ ರಾಯ್ ಅವರನ್ನು ಒಳಗೊಂಡ ತ್ರಿಸದಸ್ಯ ಪೀಠ 2018 ಫೆಬ್ರವರಿ 16 ರಂದು ಐತೀರ್ಪನ್ನು ಸ್ವಲ್ಪ ಬದಲಾಯಿಸಿ 177.75 ಟಿಎಂಸಿ ನೀರನ್ನು ಕರ್ನಾಟಕ ಪ್ರತಿವರ್ಷ ತಮಿಳುನಾಡಿಗೆ ಬಿಡಬೇಕೆಂದು ಆದೇಶಿಸಿತ್ತು. ಅಷ್ಟೇ ಅಲ್ಲದೇ ಯಾವ ತಿಂಗಳಿನಲ್ಲಿ ಎಷ್ಟು ನೀರು ಬಿಡಬೇಕು ಎನ್ನುವುದನ್ನು ಕೇಂದ್ರ ನೇಮಿಸುವ ಸಂಸ್ಥೆ ನಿರ್ಧರಿಸಬೇಕು ಎಂದು ಹೇಳಿತ್ತು.

ಕ್ಯೂಸೆಕ್ ಮತ್ತು ಟಿಎಂಸಿ ಎಂದರೆ ಎಷ್ಟು?
ಕ್ಯೂಸೆಕ್ ಎಂಬುದು cubic feet per second ಹ್ರಸ್ವರೂಪ. ಪ್ರತಿ ಸೆಕೆಂಡಿಗೆ ಒಂದು ಘನ ಅಡಿ ನೀರು ಹರಿದರೆ ಅದು ಒಂದು ಕ್ಯೂಸೆಕ್ ನೀರು ಎಂದು ಕರೆಯಲ್ಪಡುತ್ತದೆ. ಒಂದು ಘನ ಅಡಿ ನೀರನ್ನು ಲೀಟರುಗಳಿಗೆ ಪರಿವರ್ತಿಸಿದರೆ ಸುಮಾರು 28.317 ಲೀಟರುಗಳಾಗುತ್ತವೆ. 11,524 ಕ್ಯೂಸೆಕ್ ನೀರು 24 ಗಂಟೆಯ ಕಾಲ ನಿರಂತರ ಹರಿದರೆ ಒಂದು ಟಿಎಂಸಿ ಎಂದು ಕರೆಯಲಾಗುತ್ತದೆ. 10 ಸಾವಿರ ಕ್ಯೂಸೆಕ್ ನೀರು 24 ಗಂಟೆ ನಿರಂತರ ಹರಿದರೆ 0.864 ಟಿಎಂಸಿ ಅಡಿ ಆಗುತ್ತದೆ. 35.87 ಅಡಿ ಅಳದಷ್ಟು ನೀರನ್ನು ಒಂದು ಚದರ ಮೈಲಿ ಪ್ರದೇಶದಲ್ಲಿ ಸಂಗ್ರಹಿಸಿದರೆ ಒಂದು ಟಿಎಂಸಿ ಅಡಿ ಆಗುತ್ತದೆ.

TAGGED:karnatakakrstamilnaduಕರ್ನಾಟಕಕಾವೇರಿಕೆಆರ್‍ಎಸ್ತಮಿಳುನಾಡು
Share This Article
Facebook Whatsapp Whatsapp Telegram

Cinema news

Yelahanka House Theft Arrest
ಸಿನಿಮೀಯ ಶೈಲಿಯಲ್ಲಿ ಮನೆ ಕಳ್ಳತನ – 3.5 ಕೋಟಿ ಮೌಲ್ಯದ ಚಿನ್ನಾಭರಣ ಸೀಜ್
Bengaluru City Cinema Crime Karnataka Latest Top Stories
The trailer of the movie Love Mocktail 3 released Darling Krishna Milana Nagaraj 1
ಬಿಡುಗಡೆಯಾಯ್ತು ಲವ್‌ಮಾಕ್ಟೇಲ್ 3 ಚಿತ್ರದ ಟ್ರೈಲರ್!
Cinema Latest Top Stories
Kamal Haasan Donald Trump
ನಿಮ್ಮ ಕೆಲಸ ಎಷ್ಟಿದೆ ಅದನ್ನಷ್ಟೇ ನೋಡಿಕೊಳ್ಳಿ – ಟ್ರಂಪ್‌ ವಿರುದ್ಧ ಕಮಲ್‌ ಹಾಸನ್‌ ಕಿಡಿ
Cinema Latest National South cinema Top Stories
Jr NTR
ಬೆಂಗ್ಳೂರಲ್ಲಿ ಜ್ಯೂ.ಎನ್‍ಟಿಆರ್ ನೋಡಲು ಮುಗಿಬಿದ್ದ ಫ್ಯಾನ್ಸ್ – ಪೊಲೀಸರಿಂದ ಲಾಠಿಚಾರ್ಜ್‌
Bengaluru City Cinema Latest Top Stories

You Might Also Like

supreme Court 1
Court

ಏಕರೂಪ ನಾಗರಿಕ ಸಂಹಿತೆ ಜಾರಿಗೆ ‘ಸುಪ್ರೀಂ’ ಅಸ್ತು

Public TV
By Public TV
6 hours ago
d.k.shivakumar dinner party
Bengaluru City

ಕೆಪಿಸಿಸಿ ಅಧ್ಯಕ್ಷರಾಗಿ ಡಿಕೆಶಿ 6 ವರ್ಷ – ಕಾಂಗ್ರೆಸ್ ಶಾಸಕರಿಗೆ ಡಿನ್ನರ್ ಪಾರ್ಟಿ

Public TV
By Public TV
7 hours ago
Gas Emergency
Latest

ಎಲ್‌ಪಿಜಿ ಸಿಲಿಂಡರ್‌ಗಳ ಕೃತಕ ಅಭಾವ – ಬುಕ್ಕಿಂಗ್ ಅವಧಿಯನ್ನು 21ರಿಂದ 25 ದಿನಕ್ಕೆ ಹೆಚ್ಚಿಸಿದ ಕೇಂದ್ರ

Public TV
By Public TV
7 hours ago
OPD
Bengaluru City

ಮುಷ್ಕರದಿಂದ ಹಿಂದೆ ಸರಿದ ವೈದ್ಯರು – ನಾಳೆಯಿಂದ ಎಂದಿನಂತೆ ಓಪಿಡಿ ಓಪನ್

Public TV
By Public TV
8 hours ago
smriti irani lakshmi hebbalkar
Bengaluru City

ಸ್ಮೃತಿ ಇರಾನಿ ಕಾಣುತ್ತಿಲ್ಲ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌ ವ್ಯಂಗ್ಯ

Public TV
By Public TV
8 hours ago
Eshwar Khandre
Bengaluru City

1 ಮರ ಕಡಿದರೆ 10 ಸಸಿ ನೆಡಲು ವಿಧಿಸುವ ಶುಲ್ಕಕ್ಕೆ ವಿನಾಯಿತಿ ಇಲ್ಲ: ಈಶ್ವರ ಖಂಡ್ರೆ

Public TV
By Public TV
8 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?