– ಮೈಸೂರಲ್ಲಿ ಕಟ್ಟುತ್ತಿರೋ ನಿಮ್ಮ ಹೊಸ ಮನೆಗೆ ‘ಮನಮೋಹನ್ ಸಿಂಗ್’ ಅಂತ ಹೆಸರಿಡಿ
– ನಿಮ್ಮ ಸೊಸೆ ಒಡೆತನದ ಕ್ಲಬ್‌ಗೆ ಮರುನಾಮಕರಣ ಮಾಡಿ ಅಂತ ಸಿದ್ದರಾಮಯ್ಯಗೆ ಟಾಂಗ್
ಬೆಂಗಳೂರು: ಬೆಂಗಳೂರು ವಿಶ್ವವಿದ್ಯಾಲಯಕ್ಕೆ (Bengaluru University) ಮಾಜಿ ಪ್ರಧಾನಿ ಡಾ. ಮನಮೋಹನ್ ಸಿಂಗ್ (Manmohan Singh) ಅವರ ಹೆಸರಿಡಲು ಜೆಡಿಎಸ್ ವಿರೋಧ ವ್ಯಕ್ತಪಡಿಸಿದೆ.
ಈ ಕುರಿತು ಎಕ್ಸ್‌ನಲ್ಲಿ ಪೋಸ್ಟ್ ಹಾಕಿರುವ ಜೆಡಿಎಸ್, ಸಿಎಂ ಸಿದ್ದರಾಮಯ್ಯ ಅವರೇ, ಬೆಂಗಳೂರು ವಿಶ್ವವಿದ್ಯಾಲಯ ನಿಮ್ಮ ಮನೆತನದ ಆಸ್ತಿಯಲ್ಲ. ಕಾಂಗ್ರೆಸ್ ಪಕ್ಷದ ಆಸ್ತಿಯೂ ಅಲ್ಲ ಎಂದು ಟಾಂಗ್ ಕೊಟ್ಟಿದೆ. ಇದನ್ನೂ ಓದಿ: ಹಠಾತ್ ಎದೆನೋವು – ಉಪರಾಷ್ಟ್ರಪತಿ ಜಗದೀಪ್ ಧನಕರ್ ಆಸ್ಪತ್ರೆಗೆ ದಾಖಲು
‘ @siddaramaiah ಅವರೇ ಬೆಂಗಳೂರು ವಿಶ್ವವಿದ್ಯಾಲಯ ನಿಮ್ಮ ಮನೆತನದ ಆಸ್ತಿಯಲ್ಲ. ಕಾಂಗ್ರೆಸ್ ಪಕ್ಷದ ಆಸ್ತಿಯೂ ಅಲ್ಲ..
“ಬೆಂಗಳೂರು” ಎಂಬುದು ಈ ನೆಲಮೂಲದ ಹೆಗ್ಗುರುತು. ಸಮಸ್ತ ಕನ್ನಡಿಗರ ಹೆಮ್ಮೆ. ಹಾಗೂ ಕನ್ನಡಿಗರ ಪ್ರತಿಧ್ವನಿ. ಬೆಂಗಳೂರು ಅಂತಾರಾಷ್ಟ್ರೀಯ ಮಟ್ಟದಲ್ಲಿ ಪ್ರಖ್ಯಾತಿ ಪಡೆದ ನಗರ. ಬೆಂಗಳೂರು ಎಂಬುದೇ ಒಂದು ವಿಶ್ವ ಪ್ರಸಿದ್ಧ…
— Janata Dal Secular (@JanataDal_S) March 9, 2025
ಎಕ್ಸ್ ಪೋಸ್ಟ್‌ನಲ್ಲಿ ಏನಿದೆ?
ಸಿಎಂ ಸಿದ್ದರಾಮಯ್ಯ ಅವರೇ ಬೆಂಗಳೂರು ವಿಶ್ವವಿದ್ಯಾಲಯ ನಿಮ್ಮ ಮನೆತನದ ಆಸ್ತಿಯಲ್ಲ. ಕಾಂಗ್ರೆಸ್ ಪಕ್ಷದ ಆಸ್ತಿಯೂ ಅಲ್ಲ. ‘ಬೆಂಗಳೂರು’ ಎಂಬುದು ಈ ನೆಲಮೂಲದ ಹೆಗ್ಗುರುತು. ಸಮಸ್ತ ಕನ್ನಡಿಗರ ಹೆಮ್ಮೆ. ಹಾಗೂ ಕನ್ನಡಿಗರ ಪ್ರತಿಧ್ವನಿ. ಬೆಂಗಳೂರು ಅಂತಾರಾಷ್ಟ್ರೀಯ ಮಟ್ಟದಲ್ಲಿ ಪ್ರಖ್ಯಾತಿ ಪಡೆದ ನಗರ. ಬೆಂಗಳೂರು ಎಂಬುದೇ ಒಂದು ವಿಶ್ವ ಪ್ರಸಿದ್ಧ ಬ್ರ್ಯಾಂಡ್. ಅದೇ ಬೆಂಗಳೂರು ಹೆಸರಿಗೆ ಇರುವ ಶಕ್ತಿ.
ನಮಗೆ ಡಾ.ಮನಮೋಹನ್ ಸಿಂಗ್ ಅವರ ಮೇಲೆ ಅಪಾರವಾದ ಗೌರವವಿದೆ. ಆದರೆ, ‘ಬೆಂಗಳೂರು ನಗರ ವಿವಿ’ಗೆ ಪರ್ಯಾಯವಾಗಿ ಬೇರೆ ಯಾವುದೇ ಹೆಸರಿಡಲು ತೀವ್ರ ವಿರೋಧವಿದೆ. ಈ ವಿಚಾರದಲ್ಲಿ ಕರ್ನಾಟಕದ ಜನತೆಯೂ ಸಹ ಕಾಂಗ್ರೆಸ್ ಸರ್ಕಾರದ ಈ ನಿರ್ಧಾರವನ್ನು ಒಪ್ಪುವುದಿಲ್ಲ.
ರಾಜ್ಯದಲ್ಲಿ ಕನ್ನಡ ಭಾಷೆ, ನೆಲ, ಜಲ ನಾಡಿಗಾಗಿ ಹೋರಾಡಿದ ಸಾವಿರಾರು ಕನ್ನಡಿಗ ಸಾಧಕರು ಇದ್ದಾರೆ. ಹಲವು ಕ್ಷೇತ್ರಗಳಲ್ಲಿ ಸಾಧನೆ ಮಾಡಿ ಕರ್ನಾಟಕಕ್ಕೆ ಕೀರ್ತಿ ತಂದ ಮಹನೀಯರಿದ್ದಾರೆ. ಆ ಕನ್ನಡಿಗರು ಕಾಂಗ್ರೆಸ್ಸಿಗರ ಕಣ್ಣಿಗೆ ಬೀಳಲಿಲ್ಲವೇ?
ಸಿದ್ದರಾಮಯ್ಯನವರೇ.. ಅಷ್ಟು ಅಭಿಮಾನ, ಗೌರವ ಇದ್ದರೆ ಮೈಸೂರಿನಲ್ಲಿ ನಿರ್ಮಿಸುತ್ತಿರುವ ನಿಮ್ಮ ಹೊಸ ಮನೆಗೆ ಮನಮೋಹನ್ ಸಿಂಗ್ ನಿವಾಸ ಎಂದು ಹೆಸರಿಟ್ಟುಕೊಳ್ಳಿ. ನಿಮ್ಮ ಸೊಸೆಯ ಒಡೆತನದಲ್ಲಿರುವ ಬಹುಕೋಟಿ ಮೌಲ್ಯದ ಐಶಾರಾಮಿ ಕ್ಲಬ್‌ಗೆ ಮರುನಾಮಕರಣ ಮಾಡಿಕೊಳ್ಳಿ.
ದೆಹಲಿಯ ಹೊಸದಾಗಿ ನಿರ್ಮಿಸಿದ ಕಾಂಗ್ರೆಸ್ ಕಚೇರಿಗೆ ‘ಇಂದಿರಾ ಭವನ’ ಎಂದು ಹೆಸರಿಟ್ಟಿರಿ. ಅದಕ್ಕೆ ಮನಮೋಹನ್ ಸಿಂಗ್ ಹೆಸರಿಡಲು ಇಟಲಿ ಕಾಂಗ್ರೆಸ್‌ನ ಆಪ್ತರ ಗುಂಪು ಒಪ್ಪಲಿಲ್ಲ ಎಂಬುದು ತಮಗೆ ತಿಳಿದಿರುವ ವಿಷಯ. ಆದರೆ ಕರ್ನಾಟಕದಲ್ಲಿ ಕಾಂಗ್ರೆಸ್ ನೇತೃತ್ವದ ಆಡಳಿತವಿರುವ ಕಾರಣ ‘ಗುಲಾಮಿ ಕಾಂಗ್ರೆಸ್’ ನಾಯಕರು, ಬೆಂಗಳೂರಿನಲ್ಲಿ ಬೇಳೆ ಬೇಯಿಸಿಕೊಳ್ಳುತ್ತೀರಿ. ಇದನ್ನೂ ಓದಿ: ಏ.4ರಿಂದ 14ರವರೆಗೆ ಬೆಂಗಳೂರು ಕರಗ – 20 ಲಕ್ಷ ಜನ ಭಾಗಿ ನಿರೀಕ್ಷೆ
ಕೆಲ ತಿಂಗಳ ಹಿಂದಷ್ಟೆ ಬೆಂಗಳೂರಿನಲ್ಲಿ ರಾಜೀವ್ ಗಾಂಧಿ ಕಂಚಿನ ಪ್ರತಿಮೆ ಅನಾವರಣಗೊಳಿಸಲಾಗಿತ್ತು. ಈಗ ಬೆಂಗಳೂರು ವಿವಿಗೆ ಮನಮೋಹನ್ ಸಿಂಗ್ ಹೆಸರು ನಾಮಕರಣ ಮಾಡುವುದಾಗಿ ಘೋಷಿಸಿದ್ದೀರಿ. ಹೈಕಮಾಂಡ್ ಗುಲಾಮಗಿರಿಗೆ ಸದಾ ‘ಸಿದ್ಧ’ರಾಮಯ್ಯ ಎಂದು ಜೆಡಿಎಸ್ ಕಾಲೆಳೆದಿದೆ.