ಹುಬ್ಬಳ್ಳಿ: 9 ದಿನಗಳ ಬಳಿಕ ಕರಸೇವಕ ಶ್ರೀಕಾಂತ್ ಪೂಜಾರಿ (Srikanth Poojari) ಜೈಲಿನಿಂದ ಶನಿವಾರ ಬಿಡುಗಡೆಯಾದರು. ಹೊರಗಡೆ ಕಾದು ನಿಂತಿದ್ದ ಹಿಂದೂ ಸಂಘಟನೆಗಳ ಕಾರ್ಯಕರ್ತರು ಪೂಜಾರಿಯನ್ನು ಸನ್ಮಾನಿಸಿ ಶ್ರೀರಾಮನ ಭಾವಚಿತ್ರ ನೀಡಿ ಸಂಭ್ರಮಿಸಿದರು.
ರಾಮಜನ್ಮಭೂಮಿ ಹೋರಾಟದ ಪ್ರಕರಣದಲ್ಲಿ ಬಂಧನಕ್ಕೆ ಒಳಗಾಗಿ ದೇಶವ್ಯಾಪಿ ಸುದ್ದಿಯಾಗಿದ್ದ ಶ್ರೀಕಾಂತ್ ಪೂಜಾರಿಗೆ ಕೋರ್ಟ್ ಜಾಮೀನು ಮಂಜೂರು ಮಾಡಿತ್ತು. ಹುಬ್ಬಳ್ಳಿಯ ಸಬ್ ಜೈಲಿನಲ್ಲಿದ್ದ ಪೂಜಾರಿಯನ್ನು ಇಂದು ಬಿಡುಗಡೆ ಮಾಡಲಾಯಿತು. ಇದನ್ನೂ ಓದಿ: ಶ್ರೀಕಾಂತ್ ಪೂಜಾರಿ ವಿರುದ್ಧ ಅಕ್ರಮ ಸಾರಾಯಿ, ಮಟ್ಕಾ, ಜೂಜಾಟ ಸೇರಿ 16 ಕೇಸ್‌ಗಳಿವೆ: ಹು-ಧಾ ಪೊಲೀಸ್ ಕಮಿಷನರ್
Advertisement
Advertisement
ಶ್ರೀಕಾಂತ್ ಪೂಜಾರಿ ಸ್ವಾಗತಿಸಲು ಹಿಂದೂ ಕಾರ್ಯಕರ್ತರು ನೆರದಿದ್ದರು. ಪೂಜಾರಿ ಜೈಲಿನಿಂದ ಹೊರಬರುತ್ತಿದ್ದಂತೆ ಹೂಮಾಲೆ ಹಾಕಿ ಸ್ವಾಗತ ಕೋರಿದರು. ಅಲ್ಲದೇ ಶ್ರೀರಾಮನ ಭಕ್ತ ಶ್ರೀಕಾಂತ್‌ಗೆ ಶ್ರೀರಾಮಚಂದ್ರ ಹಾಗೂ ಸೀತಾಮಾತೆ ಭಾವಚಿತ್ರ ಕೊಡುಗೆಯಾಗಿ ನೀಡಿದರು. ಈ ವೇಳೆ ಶಾಸಕ ಮಹೇಶ್ ಟೆಂಗಿನಕಾಯಿ ಕೂಡ ಇದ್ದರು. ಭಜರಂಗದಳ, ವಿಶ್ವ ಹಿಂದೂ ಪರಿಷತ್ ಸದಸ್ಯರು, ಶಾಸಕರು, ಪಾಲಿಕೆ ಸದಸ್ಯರು ಭಾಗಿಯಾಗಿದ್ದರು.
Advertisement
ರಾಮಜನ್ಮಭೂಮಿ ಹೋರಾಟದ ಪ್ರಕರಣದಲ್ಲಿ 31 ವರ್ಷದ ಬಳಿಕ ಶ್ರೀಕಾಂತ್ ಪೂಜಾರಿ ಬಂಧನವಾಗಿತ್ತು. ಕರಸೇವಕನ ಬಂಧನ ಖಂಡಿಸಿ ಬಿಜೆಪಿ ನಾಯಕರು ಕಾಂಗ್ರೆಸ್ ಸರ್ಕಾರದ ವಿರುದ್ಧ ಪ್ರತಿಭಟನೆ ನಡೆಸಿದರು. ಶ್ರೀಕಾಂತ್ ಪೂಜಾರಿ ಬಂಧನ ವಿವಾದ ಸ್ವರೂಪ ಪಡೆದುಕೊಂಡಿತು. ಇದನ್ನೂ ಓದಿ: ಶ್ರೀಕಾಂತ್ ಪೂಜಾರಿ ಬಂಧನ ಪ್ರಕರಣಕ್ಕೆ ಟ್ವಿಸ್ಟ್- ಕರಸೇವಕನ ಮೇಲಿನ ಕ್ರಿಮಿನಲ್ ಕೇಸ್‍ಗಳೆಷ್ಟು?
Advertisement
ಪ್ರಕರಣ ಕೋರ್ಟ್ ಮೆಟ್ಟಿಲೇರಿತು. ಬಳಿಕ ಶ್ರೀಕಾಂತ್‌ಗೆ ಹುಬ್ಬಳ್ಳಿಯ ಒಂದನೇ ಹೆಚ್ಚುವರಿ ಜಿಲ್ಲಾ ನ್ಯಾಯಾಲಯ ಷರತ್ತುಬದ್ಧ ಜಾಮೀನು ಮಂಜೂರು ಮಾಡಿತು. ಇಂದು ಕರಸೇವಕನ ಬಿಡುಗಡೆಯಾಗಿದೆ.
ಡಿಸೆಂಬರ್29 ರಂದು ಶ್ರೀಕಾಂತ್ ಪೂಜಾರಿಯನ್ನು ಪೊಲೀಸರು ಬಂಧಿಸಿದ್ದರು. ಶ್ರೀಕಾಂತ್ ಪೂಜಾರಿ ಬಂಧನವನ್ನು ಖಂಡಿಸಿ ಬಿಜೆಪಿ ರಾಜ್ಯವ್ಯಾಪಿ ಪ್ರತಿಭಟನೆ ನಡೆಸಿತ್ತು. ಇದನ್ನೂ ಓದಿ: ಹುಬ್ಬಳ್ಳಿ ಕೇಸ್ – ಕರಸೇವಕ ಶ್ರೀಕಾಂತ್ ಪೂಜಾರಿಗೆ ಜಾಮೀನು
ಏನಿದು ಪ್ರಕರಣ?
ಅಯೋಧ್ಯೆ ಕರಸೇವೆಗೂ (Ayodhya Karaseva) ಮುನ್ನ 1992ರ ಡಿಸೆಂಬರ್ 5ರಂದು ಹುಬ್ಬಳ್ಳಿ ನಗರದಲ್ಲಿ ಗಲಭೆ (Hubballi Riots) ಸಂಭವಿಸಿತ್ತು. ಒಂದು ಮಳಿಗೆಗೆ ಬೆಂಕಿ ಹಚ್ಚಿದ್ದ ಆರೋಪ ಸಂಬಂಧ 9 ಜನರ ವಿರುದ್ಧ ಎಫ್‌ಐಆರ್ ದಾಖಲಾಗಿತ್ತು. ಇದೀಗ ಈ ಪ್ರಕರಣಕ್ಕೆ ಹುಬ್ಬಳ್ಳಿಯ ಶಹರ ಠಾಣೆ ಪೊಲೀಸರು ಮರುಜೀವ ನೀಡಿದ್ದರು.
ಘಟನೆ ನಡೆದ 31 ವರ್ಷಗಳ ಬಳಿಕ, 52 ವರ್ಷದ ಆರೋಪಿ ಶ್ರೀಕಾಂತ್ ಪೂಜಾರಿಯನ್ನು ಪೊಲೀಸರು ಬಂಧಿಸಿ ಕೋರ್ಟ್ ಮುಂದೆ ಹಾಜರುಪಡಿಸಿದ್ದರು. ಕೋರ್ಟ್ ನ್ಯಾಯಾಂಗ ಬಂಧನ ವಿಧಿಸಿತ್ತು. ಇದನ್ನೂ ಓದಿ: ಶ್ರೀಕಾಂತ್ ಪೂಜಾರಿಗೆ ರೌಡಿಶೀಟರ್‌ನಿಂದ ಮುಕ್ತಿ ಕೊಟ್ಟಿದ್ದು ನಮ್ಮ ಸರ್ಕಾರ: ದಿನೇಶ್ ಗುಂಡೂರಾವ್