ಬೆಂಗಳೂರು: ಕೋವಿಡ್ ಸಾಂಕ್ರಾಮಿಕದ ಹಿನ್ನೆಲೆಯಲ್ಲಿ ಸುಮಾರು ಎರಡು ವರ್ಷಗಳಿಂದ ಸ್ಥಗಿತಗೊಂಡಿದ್ದ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಗಳಲ್ಲೊಂದಾದ “ಉಚಿತ ಸಾಮೂಹಿಕ ವಿವಾಹ – ಸಪ್ತಪದಿ” ಕಾರ್ಯಕ್ರಮವನ್ನು ಮರುಚಾಲನೆಗೊಳಿಸಲು ಮುಜರಾಯಿ, ಹಜ್ ಮತ್ತು ವಕ್ಫ್ ಸಚಿವರಾದ ಶಶಿಕಲಾ ಜೊಲ್ಲೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.
Advertisement
ಮದುವೆಗೆ ದುಂದು ವೆಚ್ಚ ಮಾಡಿ ಬಡ ಮತ್ತು ಮಧ್ಯಮ ವರ್ಗದ ಕುಟುಂಬಗಳು ಆರ್ಥಿಕ ಸಂಕಷ್ಟಕ್ಕೆ ಒಳಗಾಗುವುದನ್ನು ತಪ್ಪಿಸಲು ಕರ್ನಾಟಕ ಸರ್ಕಾರ ಉಚಿತ “ಸಪ್ತಪದಿ ಸಾಮೂಹಿಕ ವಿವಾಹ” ಯೋಜನೆಯನ್ನು ಪ್ರಾರಂಭಿಸಿತ್ತು. ವಧು ಮತ್ತು ವರನಿಗೆ ಉಡುಗೆ, ಬಂಗಾರದ ಉಡುಗೊರೆ ನೀಡುವ ಜೊತೆಗೆ, ಎರಡೂ ಕಡೆಯ ಬಂಧುಗಳಿಗೆ ಊಟೋಪಚಾರದ ವ್ಯವಸ್ಥೆಯನ್ನು ದೇವಾಲಯ ಆಡಳಿತ ಮಂಡಳಿಗಳೇ ಮಾಡುವುದು ಈ ಯೋಜನೆಯ ವಿಶೇಷ. ಕೋವಿಡ್ ಸಾಂಕ್ರಾಮಿಕದ ಹಿನ್ನೆಲೆಯಲ್ಲಿ ಸುಮಾರು ಎರಡು ವರ್ಷಗಳಿಂದ ಸಪ್ತಪದಿ ಸಾಮೂಹಿಕ ವಿವಾಹ ಕಾರ್ಯಕ್ರಮಗಳನ್ನು ಆಯೋಜಿಸಲಾಗಿರಲಿಲ್ಲ. ಇತ್ತೀಚಿನ ದಿನಗಳಲ್ಲಿ ಕೋವಿಡ್ ಸೋಂಕಿನ ಪ್ರಮಾಣ ಕಡಿಮೆಯಾಗಿರುವುದರಿಂದಾಗಿ ಮತ್ತೆ ಸಾಮೂಹಿಕ ವಿವಾಹವನ್ನು ಪ್ರಾರಂಭಿಸುವಂತೆ ಸಚಿವರು ಆದೇಶಿಸಿದ್ದಾರೆ. ಇದನ್ನೂ ಓದಿ: ಹಿಂಸಾಚಾರ ಪೀಡಿತ ಪ್ರದೇಶ ಭೇಟಿಗೆ ಮುಂದಾದ ತೇಜಸ್ವಿ ಸೂರ್ಯ ಪೊಲೀಸರ ವಶಕ್ಕೆ
Advertisement
Advertisement
2022ರ ಏಪ್ರಿಲ್ ಮತ್ತು ಮೇ ತಿಂಗಳಲ್ಲಿ ಆಯ್ದ A ದರ್ಜೆಯ ದೇವಸ್ಥಾನಗಳಲ್ಲಿ, ಕೋವಿಡ್ ನಿಯಮಾವಳಿಗಳನ್ನು ಪಾಲಿಸಿ ಉಚಿತ ಸಾಮೂಹಿಕ ವಿವಾಹ ಕಾರ್ಯಕ್ರಮ ಸಪ್ತಪದಿ ನಡೆಸಲು ಅದೇಶ ಹೊರಡಿಸಲಾಗಿದೆ. ಇದನ್ನೂ ಓದಿ: ಈಶ್ವರಪ್ಪರನ್ನು ಸಮರ್ಥಿಸಿಕೊಳ್ಳಲು ಹೋಗಿ ಪೇಚಿಗೆ ಸಿಲುಕಿದ ಸಚಿವ ಬಿ.ಸಿ ನಾಗೇಶ್
Advertisement
ಕೋವಿಡ್ ಕಾರಣವಾಗಿ ಸ್ಥಗಿತಗೊಳಿಸಲಾಗಿದ್ದ ಸಪ್ತಪದಿ ಕಾರ್ಯಕ್ರಮಗಳಿಗೆ ಮರುಚಾಲನೆ ನೀಡುವಂತೆ ಅಧಿಕಾರಿಗಳಿಗೆ ಸೂಚನೆ ನೀಡಲಾಗಿತ್ತು. ಈ ಹಿನ್ನೆಲೆಯಲ್ಲಿ 2022ರ ಏಪ್ರಿಲ್ 28, ಮೇ 11 ಮತ್ತು 25 ರಂದು ಆಯ್ದ ದೇವಸ್ಥಾನಗಳಲ್ಲಿ ಉಚಿತ ಸಾಮೂಹಿಕ ವಿವಾಹವನ್ನು ಆಯೋಜಿಸಲಾಗಿದೆ. ಹೆಚ್ಚಿನ ಸಂಖ್ಯೆಯಲ್ಲಿ ಈ ಯೋಜನೆಯ ಲಾಭ ಪಡೆದುಕೊಳ್ಳಲಿ ಎನ್ನುವುದು ನಮ್ಮ ಆಶಯವಾಗಿದೆ ಎಂದು ಶಶಿಕಲಾ ಜೊಲ್ಲೆ ಅಭಿಪ್ರಾಯಪಟ್ಟಿದ್ದಾರೆ.