ಬೆಂಗಳೂರು: ಏಪ್ರಿಲ್ 15 ಸೋಮವಾರ ಬೆಳಗ್ಗೆ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟವಾಗಲಿದೆ. ಪಿಯು ಬೋರ್ಡ್ ಸುದ್ದಿಗೋಷ್ಠಿ ಕರೆದಿದ್ದು, ಬೆಳಗ್ಗೆ 11 ಪರೀಕ್ಷಾ ಫಲಿತಾಂಶ ಪ್ರಕಟ ಆಗಲಿದೆ.
ಇಲಾಖೆ ಅಧಿಕೃತ ವೆಬ್‍ಸೈಟ್‍ಗಳಲ್ಲಿ ಸೋಮವಾರವೇ ಪರೀಕ್ಷಾ ಫಲಿತಾಂಶ ಲಭ್ಯವಾಗಲಿದ್ದು, ಮಂಗಳವಾರ ಕಾಲೇಜುಗಳಲ್ಲಿ ಫಲಿತಾಂಶ ಪ್ರಕಟವಾಗಲಿದೆ. ಏ.17 ಮತ್ತು ಏ.19 ಸರ್ಕಾರಿ ರಜೆ ಇದ್ದು, ಏ.18 ರಂದು ರಾಜ್ಯ ಲೋಕಸಭಾ ಚುನಾವಣೆಯ ಮೊದಲ ಹಂತದ ಮತದಾನ ನಡೆಯಲಿದೆ. ಈ ಹಿನ್ನೆಲೆಯಲ್ಲಿ ಏ.15 ರಂದು ಫಲಿತಾಂಶ ಪ್ರಕಟಿಸಲು ಇಲಾಖೆ ನಿರ್ಧರಿಸಿದೆ.
Advertisement
Advertisement
2019ನೇ ಸಾಲಿನಲ್ಲಿ 6.73 ಲಕ್ಷ ವಿದ್ಯಾರ್ಥಿಗಳು ದ್ವಿತೀಯ ಪಿಯು ಪರೀಕ್ಷೆ ಬರೆದಿದ್ದರು. ಇದರಲ್ಲಿ 1.94 ಲಕ್ಷ ವಿದ್ಯಾರ್ಥಿಗಳು ಸಿಇಟಿ ಪರೀಕ್ಷೆಗೆ ಹಾಜರಾಗಲು ನೋಂದಾಯಿಸಿಕೊಂಡಿದ್ದಾರೆ. ಏ.29 ರಿಂದ ಮೇ 1 ವರೆಗೆ ಸಿಇಟಿ ಪರೀಕ್ಷೆ ನಡೆಯಲಿದೆ.
Advertisement
ಸೋಮವಾರ ಬೆಳಗ್ಗೆ 11 ಗಂಟೆಗೆ ಫಲಿತಾಂಶ http://pue.kar.nic.in/ ಮತ್ತು http://karresults.nic.in/ ವೆಬ್‍ಸೈಟ್‍ಗಳಲ್ಲಿ ಲಭ್ಯವಾಗಲಿದೆ.