– ಧರ್ಮಸ್ಥಳ ಪ್ರಕರಣ ಸಂಬಂಧ ಕೇಂದ್ರ ಗೃಹ ಸಚಿವರ ಭೇಟಿಯಾದ ಕರ್ನಾಟಕದ ಮಠಾಧೀಶರು
ನವದೆಹಲಿ: ಧರ್ಮಸ್ಥಳ ಪ್ರಕರಣ (Dharmasthala Case) ಸಂಬಂಧ ಕೇಂದ್ರ ಗೃಹ ಸಚಿವ ಅಮಿತ್ ಶಾ (Amit Shah) ಅವರನ್ನು ಕರ್ನಾಟಕ ಸ್ವಾಮೀಜಿಗಳು ಭೇಟಿಯಾಗಿದ್ದಾರೆ. ಪ್ರಕರಣವನ್ನು ಎನ್‌ಐಎ ತನಿಖೆಗೆ ವಹಿಸಬೇಕು ಎಂದು ಕೇಂದ್ರ ಸಚಿವರಲ್ಲಿ ಮನವಿ ಮಾಡಿದ್ದಾರೆ.
ಪಂಚಮಸಾಲಿ ಲಿಂಗಾಯತ ಮಠದ ವಚನಾನಂದ ಸ್ವಾಮೀಜಿ ನೇತೃತ್ವದ ಸನಾತನ ಸಂತ ನಿಯೋಗವು ದೆಹಲಿಗೆ ತೆರಳಿ ಖುದ್ದು ಅಮಿತ್ ಶಾ ಅವರನ್ನು ಭೇಟಿಯಾಗಿ ಮನವಿ ಸಲ್ಲಿಸಿದೆ. ಮಂಗಳೂರಿನ ಗುರುಪುರ ವಜ್ರದೇಹಿ ಮಠದ ಶ್ರೀ ರಾಜಶೇಖರಾನಂದ ಸ್ವಾಮೀಜಿ ಸೇರಿ ವಿವಿಧ ಪೀಠಗಳ 8 ಸ್ವಾಮೀಜಿಗಳ ನಿಯೋಗದಲ್ಲಿದ್ದರು. ಇದನ್ನೂ ಓದಿ: ಧರ್ಮಸ್ಥಳಕ್ಕೆ ಕಳಂಕ ಅಂಟಿದೆ ಅಂತ ಹೋಗ್ತಿದ್ದಾರೋ, ತಮ್ಮ ಕಳಂಕ ಕಳೆಯಲು ಹೋಗ್ತಿದ್ದಾರೋ ಗೊತ್ತಿಲ್ಲ: ʻಕೈʼ ಶಾಸಕರಿಗೆ ಪರಮೇಶ್ವರ್ ಟಾಂಗ್
ಹಿಂದೂಗಳು, ಹಿಂದೂ ಧಾರ್ಮಿಕ ಕೇಂದ್ರಗಳ ಮೇಲೆ ಹಾಗೂ ಹಿಂದೂ ಮಠಾಧೀಶರ ಮೇಲೆ ಪದೇ ಪದೇ ದಾಳಿ ಆಗುತ್ತಿದೆ. ಆರಾರು ತಿಂಗಳ ಅಂತರದಲ್ಲಿ ದಾಳಿಗಳು ನಡೆಯುತ್ತಿವೆ. ಇದರ ಹಿಂದೆ ವ್ಯವಸ್ಥಿತ ಷಡ್ಯಂತ್ರ ಇದೆ. ಹೀಗಾಗಿ, ಸೂಕ್ತ ತನಿಖೆ ನಡೆಸಬೇಕು ಎಂದು ಸ್ವಾಮೀಜಿಗಳು ಆಗ್ರಹಿಸಿದರು.
ಧರ್ಮಸ್ಥಳ ಪ್ರಕರಣದ ಎಲ್ಲಾ ಬೆಳವಣಿಗೆಗಳನ್ನ ನಾನೇ ಸೂಕ್ಷ್ಮವಾಗಿ ಗಮನಿಸುತ್ತಿದ್ದೇನೆ. ಧರ್ಮಸ್ಥಳ ಪ್ರಕರಣ ಬಗ್ಗೆ ಕ್ಯಾಬಿನೆಟ್ ನೇತೃತ್ವದಲ್ಲಿ ಸಭೆ ನಡೆಸುತ್ತೇವೆ. ಸಭೆಯ ಬಳಿಕ ಮುಂದಿನ ನಿರ್ಧಾರ ಕೈಗೊಳ್ಳುತ್ತೇವೆ ಎಂದು ಅಮಿತ್ ಶಾ ತಿಳಿಸಿದ್ದಾರೆ. ಇದನ್ನೂ ಓದಿ: ಧರ್ಮಸ್ಥಳ ಪ್ರಕರಣ | ಮತ್ತೆ 4 ದಿನ ಎಸ್‌ಐಟಿ ಕಸ್ಟಡಿಗೆ ʻಬುರುಡೆʼ ಚಿನ್ನಯ್ಯ
ಧರ್ಮ ಕ್ಷೇತ್ರಗಳ ವಿರುದ್ಧದ ಅಪಪ್ರಚಾರಕ್ಕೆ ಕಡಿವಾಣ ಹಾಕಲು ಹೊಸ ಕಾನೂನು ತರುತ್ತೇವೆ. ನೀವು ಸಮಾಜವನ್ನ ಜಾಗೃತಿಗೊಳಿಸಿ ಎಂದು ಸ್ವಾಮೀಜಿಗಳಿಗೆ ಅಮಿತ್ ಶಾ ಸಲಹೆ ನೀಡಿದ್ದಾರೆ.