ಬೆಂಗಳೂರು: ರಾಜ್ಯ ಪೊಲೀಸ್ ಇಲಾಖೆಯಲ್ಲಿ (Police Department) ಮಹತ್ವದ ಬೆಳವಣಿಗೆ ನಡೆದಿದ್ದು ನಿವೃತ್ತಿಗೆ ಎರಡು ತಿಂಗಳು ಬಾಕಿ ಇರುವಾಗ ಹಿರಿಯ ಐಪಿಎಸ್ ಅಧಿಕಾರಿ ಪ್ರತಾಪ್ ರೆಡ್ಡಿ (Pratap Reddy) ರಾಜೀನಾಮೆ ನೀಡಿದ್ದಾರೆ.
ಕರ್ನಾಟಕದ ಆಂತರಿಕ ಭದ್ರತೆ ವಿಭಾಗದ ಡಿಜಿಪಿಯಾಗಿ (DGP) ಕಾರ್ಯ ನಿರ್ವಹಣೆ ಮಾಡುತ್ತಿದ್ದ ಪ್ರತಾಪ್ ರೆಡ್ಡಿ ವೈಯುಕ್ತಿಕ ಕಾರಣ ನೀಡಿ ರಾಜೀನಾಮೆ ನೀಡಿದ್ದಾರೆ. ಇದನ್ನೂ ಓದಿ: ಚೌಧರಿ ಚರಣ್ ಸಿಂಗ್, ಪಿವಿ ನರಸಿಂಹ ರಾವ್, ಸ್ವಾಮಿನಾಥನ್‌ಗೆ ಭಾರತ ರತ್ನ
ಬರುವ ಏಪ್ರಿಲ್ 30ಕ್ಕೆ ಬಿಡುಗಡೆ ಮಾಡುವಂತೆ ಸರ್ಕಾರಕ್ಕೆ ಮನವಿ ಮಾಡಿದ್ದಾರೆ. ಈ ಹಿಂದೆ ಬೆಂಗಳೂರು ನಗರ ಪೊಲೀಸ್ ಆಯುಕ್ತರಾಗಿಯೂ ಅವರು ಸೇವೆ ಸಲ್ಲಿಸಿದ್ದರು. ಪ್ರತಾಪ್ ರೆಡ್ಡಿ ಅವರು 1991ನೇ ಬ್ಯಾಚ್ನ ಐಪಿಎಸ್ ಅಧಿಕಾರಿಯಾಗಿದ್ದು ಮೂಲತಃ ಆಂಧ್ರಪ್ರದೇಶದ ಗುಂಟೂರು ಜಿಲ್ಲೆಯವರು.
ಡಿಜಿಪಿ ಆಗಿದ್ದರೂ ಕೆಲವೊಂದು ಬೆಳವಣಿಗಿಂದ ಅವರಿಗೆ ಬೇಸರ ಆಗಿತ್ತು. ಕೆಲವರು ಅವರಿಗೆ ಬೇಸರ ಆಗುವಂತೆ ನಡೆದುಕೊಂಡಿದ್ದರು. ಹೀಗಾಗಿ ರಾಜೀನಾಮೆ ನೀಡಿದ್ದಾರೆ ಎಂದು ಹಿರಿಯ ಅಧಿಕಾರಿಗಳು ಪಬ್ಲಿಕ್ ಟಿವಿಗೆ ತಿಳಿಸಿದ್ದಾರೆ.